Advertisement
ರಾಜ್ಯ ಬಿಜೆಪಿ ಕಚೇರಿಯಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿರುವ ಮಾಜಿ ಡಿಸಿಎಂ ಗೋವಿಂದ ಕಾರಜೋಳ ಹಾಗೂ ವಿಧಾನಪರಿಷತ್ ಸದಸ್ಯ ಎನ್. ವಿಕುಮಾರ್, 5 ಗ್ಯಾರಂಟಿಗಳಿಗೆ 50 ಸಾವಿರ ಕೋಟಿ ಖರ್ಚು ಮಾಡುವುದಾಗಿ ಸಿಎಂ ಅವರೇ ಹೇಳಿದ್ದಾರೆ. ಈಗಾಗಲೇ ಜುಲೈ ಮುಗಿದಿದೆ. 50 ಸಾವಿರ ಕೋಟಿ ಕೊಡಲು ಹೋಗಿ ಜನರಿಗೆ 75 ಸಾವಿರ ಕೋಟಿ ಟೋಪಿ ಹಾಕುವ ಕೆಲಸವನ್ನು ಮಾಡುತ್ತಿದೆ. ಇದು ಖಂಡನೀಯ. ಇಂಥ ಮೋಸದಾಟ ಒಪ್ಪಲಸಾಧ್ಯ ಎಂದರು.
ಇದಕ್ಕೆ ಪುಷ್ಟಿ ನೀಡುವಂತೆ ಟ್ವೀಟ್ ಮಾಡಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಬೆಲೆ ಏರಿಕೆಯೇ ಈ ಸರಕಾರ 6ನೇ ಗ್ಯಾರಂಟಿ. ವಿದ್ಯುತ್ ದರ ಏರಿಕೆ, ಟೊಮೆಟೊ ಸಮೇತ ಎಲ್ಲ ತರಕಾರಿ ಬೆಲೆ ಏರಿಕೆ, ನಂದಿನಿ ಹಾಲು, ಮೊಸರು, ಮಜ್ಜಿಗೆ ಬೆಲೆ ಏರಿಕೆ, ಹೊಟೆಲ್ ಗಳಲ್ಲಿ ತಿಂಡಿಗಳ ಬೆಲೆ ಏರಿಕೆ, ಬಜೆಟ್ ನಲ್ಲಿ ಅಬಕಾರಿ ತೆರಿಗೆ ಹೆಚ್ಚಳ, ಮೋಟಾರು ವೆಹಿಕಲ್ ತೆರಿಗೆ ಹೆಚ್ಚಳ, ಸ್ಟ್ಯಾಂಪ್ ಡ್ನೂಟಿ ಹೆಚ್ಚಳ ಮೂಲಕ ಬರುವಂತ ದಿನಗಳಲ್ಲಿ ಮತ್ತಷ್ಟು ಬೆಲೆ ಏರಿಕೆಯಾಗಲಿದೆ. ರಾಜ್ಯ ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ದುನಿಯಾ ದುಬಾರಿಯಾಗಿದ್ದು ಜನತೆ ಹಿಡಿ ಶಾಪ ಹಾಕುತ್ತಿದ್ದಾರೆ ಎಂದು ಹೇಳಿದ್ದಾರೆ. 25ಕ್ಕೂ ಹೆಚ್ಚು ಉತ್ಪನ್ನಗಳು ದುಬಾರಿ
ಮೇಲ್ಮನೆ ಸದಸ್ಯ ರವಿಕುಮಾರ್ ಮಾತನಾಡಿ, ರಾಜ್ಯದ ಕಾಂಗ್ರೆಸ್ ಸರಕಾರವು 5 ಗ್ಯಾರಂಟಿ ಯೋಜನೆಗಳಿಗೆ ದಲಿತರ ಏಳಿಗೆ, ಕಲ್ಯಾಣಕ್ಕೋಸ್ಕರ ಮೀಸಲಿಟ್ಟ ಹಣವನ್ನು ಒಂದೆಡೆ ನೀಡುತ್ತಿದೆ. ಅಷ್ಟೂ ಸಾಕಾಗದೆ ಬೆಲೆ ಏರಿಕೆಯ ಬರೆಯನ್ನೂ ಈ ಸರ್ಕಾರ ಹಾಕುತ್ತಿದೆ. ವಿದ್ಯುತ್ ಬಿಲ್ ಬಸ್ ಪ್ರಯಾಣ ದರ, ನೀರಿನ ದರ, ಮದ್ಯದ ದರ, ವಿವಿಧ ತರಕಾರಿ ಬೆಲೆಯನ್ನೂ ಏರಿಸಿದೆ. ಶಾಲಾ ಕಾಲೇಜುಗಳ ಕ್ಯಾಬ್ ತೆರಿಗೆ, ಮೋಟಾರು ತೆರಿಗೆ ಹೆಚ್ಚಿಸಿದೆ. ಸರಕು ಸಾಗಣೆ ದರ ಏರಿಸಿದೆ. ಕಟ್ಟಡ ನಿರ್ಮಾಣಕ್ಕೆ ಬಳಸುವ ಜಲ್ಲಿ, ಮರಳು ಬೆಲೆ ಹೆಚ್ಚು ಮಾಡಿದೆ. ಎತ್ತರದ ಕಟ್ಟಡಗಳ ಶುಲ್ಕವನ್ನು ಹೆಚ್ಚಿಗೆ ಮಾಡಿದೆ. ಆಸ್ತಿ ನೋಂದಣಿ ಶುಲ್ಕ ಹೆಚ್ಚಳ ಮಾಡಿದೆ. ಆಹಾರದ ಬೆಲೆ ಏರಿಕೆ ಮಾಡಿದೆ. ನಂದಿನಿ ಹಾಲು, ಮಜ್ಜಿಗೆ, ತುಪ್ಪ ಸೇರಿ ಎಲ್ಲ ಉತ್ಪನ್ನಗಳ ದರ ಏರಿಕೆ ಮಾಡಿದೆ. ಹೀಗೆ ಸುಮಾರು 25 ರೀತಿಯ ಬೆಲೆ ಏರಿಕೆಯನ್ನು ಮಾಡಿದೆ. ಒಂದು ಕಡೆ ಕೊಟ್ಟು ಅನೇಕ ಕಡೆ ಕಿತ್ತುಕೊಳ್ಳುವ ಸರ್ಕಾರವಿದು ಎಂದು ದೂಷಿಸಿದರು.
Related Articles
Advertisement
ಅಕ್ಕಿ ರಫ್ತು ನಿಷೇಧ; ದೇಶಕ್ಕೆ ಲಾಭಅನ್ನಭಾಗ್ಯ ಯೋಜನೆಗೆ ಅಕ್ಕಿ ಕೊಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರಕಾರ ತಿಳಿಸಿದಾಗ ಕಾಂಗ್ರೆಸ್ ಮುಖಂಡರು ಮೊಸಳೆ ಕಣ್ಣೀರು ಸುರಿಸಿ ಕೇಂದ್ರ ಸರಕಾರವನ್ನು ಜರಿದಿದ್ದರು. ಈಗ ನಮ್ಮ ಕೇಂದ್ರ ಸರಕಾರವು ಅಮೆರಿಕ, ಬೇರೆ ದೇಶಗಳಿಗೆ ಅಕ್ಕಿ ರಫ¤ನ್ನು ನಿಲ್ಲಿಸಿದೆ. ವಿಪರೀತ ಮಳೆ, ಪ್ರವಾಹ, ಅನೇಕ ರಾಜ್ಯಗಳಲ್ಲಿ ಕಡಿಮೆ ಮಳೆ ಪರಿಣಾಮವಾಗಿ ಬೆಲೆ ಹೆಚ್ಚಳ ಆಗಬಹುದೆಂಬ ದೂರದೃಷ್ಟಿ ಇಟ್ಟುಕೊಂಡು 400 ದಶಲಕ್ಷ ಟನ್ ಅಕ್ಕಿ ರಫ¤ನ್ನು ನಿಲ್ಲಿಸಿದೆ. ಇದರಿಂದ ದೇಶದ ಬಡವರು, ಹಿಂದುಳಿದ ವರ್ಗಗಳಿಗೆ, ದಲಿತ ವರ್ಗದವರಿಗೆ ಸಹಾಯ ಆಗಲಿದೆ ಎಂದು ರವಿಕುಮಾರ್ ವಿವರಿಸಿದರು. ಗ್ಯಾರಂಟಿಗಳಿಗೆ ಎಸ್ಸಿ-ಎಸ್ಟಿ ಹಣ ವರ್ಗಾವಣೆ ಅಕ್ಷಮ್ಯ
ಎಸ್‌ಸಿಎಸ್‌ಪಿ-ಟಿಎಸ್‌ಪಿ ಕಾಯ್ದೆಯಡಿ ಎಸ್ಸಿ ಎಸ್ಟಿ ಸಮುದಾಯದ ಅಭಿವೃದ್ದಿಗೆ ಮೀಸಲಿಟ್ಟ ಅನುದಾನದಲ್ಲಿ ಸುಮಾರು 11 ಸಾವಿರ ಕೋಟಿ ರೂ. ಗ್ಯಾರಂಟಿ ಯೋಜನೆಗಳಿಗೆ ವರ್ಗಾವಣೆ ಮಾಡುತ್ತಿದ್ದು, ಎಸ್ಸಿ ಎಸ್ಟಿ ಸಮುದಾಯದ ಅಭಿವೃದ್ಧಿಗೆ ಮಾರಕವಾಗಲಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಿಡಿ ಕಾಡಿದ್ದಾರೆ. ರಾಜ್ಯ ಸರ್ಕಾರ ಎಸ್ಸಿಪಿ ಟಿಎಸ್ಪಿ ಯೋಜನೆಗೆ 34 ಸಾವಿರ ಕೋಟಿ ಬದಲು ಕೇವಲ 23 ಸಾವಿರ ಕೋಟಿ ರೂ.ಗೆ ಅನುಮೋದನೆ ನೀಡಿದಂತಾಗಿದ್ದು, ಇದು ಎಸ್ಸಿಪಿ ಕಾಯ್ದೆಯ ಉಲ್ಲಂಘನೆಯ ಜತೆಗೆ ಆ ಸಮುದಾಯಕ್ಕೆ ಕಾಂಗ್ರೆಸ್ ಸರಕಾರ ಮಾಡುತ್ತಿರುವ ದ್ರೋಹವಾಗಿದೆ. ಇದಕ್ಕೆ ಒಲ್ಲದ ಮನಸ್ಸಿನಿಂದ ಒಪ್ಪಿರುವ ಸಚಿವ ಮಹದೇವಪ್ಪ ಅವರ ಅಸಹಾಯಕತೆ ತೋರುತ್ತಿದೆ. ಪರಿಶಿಷ್ಟ ಸಮುದಾಯದ ಬಗ್ಗೆ ಸರ್ಕಾರಕ್ಕಿರುವ ನಿಷ್ಕಾಳಜಿಯನ್ನೂ ಎತ್ತಿ ತೋರುತ್ತದೆ ಎಂದಿದ್ದಾರೆ. ಮಾಜಿ ಡಿಸಿಎಂ ಗೋವಿಂದ ಕಾರಜೋಳ ಕೂಡ ಪ್ರತಿಕ್ರಿಯಿಸಿ, ಈ ಸರ್ಕಾರ ಹಾಸ್ಟೆಲ್ ನಿರ್ಮಾಣ, ವಸತಿ ಶಾಲೆ ನಿರ್ಮಾಣಕ್ಕೆ ಒಂದೇ ಒಂದು ರೂಪಾಯಿ ಇಟ್ಟಿಲ್ಲ. ಈಗ 156 ವಸತಿ ಶಾಲೆಯ ಕಟ್ಟಡದ ಕಾಮಗಾರಿ ಕಳೆದ 3 ತಿಂಗಳಿನಿಂದ ನಿಲ್ಲಿಸಿದ್ದಾರೆ. 75 ಹಾಸ್ಟೆಲ್‌ಗಳ ನಿರ್ಮಾಣ ಕಾರ್ಯ ಸ್ಥಗಿತವಾಗಿದೆ. 108 ವಸತಿ ಶಾಲೆಗಳಿಗೆ ಪ್ರತಿ ಶಾಲೆಗೆ 10 ಎಕರೆಯಷ್ಟು ಭೂಮಿಯನ್ನು ನಾವು ನೀಡಿ¨ªೆವು. ಅವುಗಳಿಗೆ ಹಣ ಮಂಜೂರು ಮಾಡಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.