Advertisement

“ಪ್ರವಾಸಿ ಟ್ಯಾಕ್ಸಿ ಸಬ್ಸಿಡಿ ಏರಿಕೆ, ಹೋಂ ಸ್ಟೇ ನಿಯಮ ಸರಳ’

08:15 AM Mar 17, 2018 | Team Udayavani |

ಉಡುಪಿ: ಕಡಲತೀರದಲ್ಲಿನ ಮನೆಗಳಲ್ಲಿ ಹೋಂ ಸ್ಟೇ ಆರಂಭಿಸುವುದರಿಂದ ಉತ್ತಮ ಆದಾಯ ಪಡೆಯುವುದರ ಜತೆಗೆ ಪ್ರವಾಸೋದ್ಯಮ ಅಭಿವೃದ್ಧಿಗೊಳಿಸಲು ಸಾಧ್ಯ ಎಂದು ಸಚಿವ ಪ್ರಮೋದ್‌ ಮಧ್ವರಾಜ್‌ ಸೂಚಿಸಿದ್ದಾರೆ.

Advertisement

ಅವರು ಶುಕ್ರವಾರ ರಜತಾದ್ರಿಯಲ್ಲಿ ಜಿಲ್ಲಾಡಳಿತ, ಪ್ರವಾಸೋಧ್ಯಮ ಇಲಾಖೆ ವತಿಯಿಂದ ಪ.ಜಾತಿ ಮತ್ತು ಪಂಗಡ, ಹಿಂದುಳಿದ ಹಾಗೂ ಅಲ್ಪಸಂಖ್ಯಾಕ ಫ‌ಲಾನುಭವಿಗಳಿಗೆ ಪ್ರವಾಸಿ ಟ್ಯಾಕ್ಸಿ ವಿತರಣೆ, ಹೋಂ ಸ್ಟೇ ಪ್ರಮಾಣಪತ್ರ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಹೋಂ ಸ್ಟೇ ಪ್ರಮಾಣಪತ್ರ ಪಡೆಯಲು ಇರುವ ನಿಯಮಗಳನ್ನು ಸರಳಗೊಳಿಸಲಾಗಿದೆ. ಜಿಲ್ಲೆಯಲ್ಲಿ ಹೊಂ ಸ್ಟೇ ಆರಂಭಿಸುವವರಿಂದ ಆನ್‌ ಲೈನ್‌ ಮೂಲಕ ಅರ್ಜಿ ಸ್ವೀಕರಿಸಿ ಒಂದು ವಾರದೊಳಗೆ ಪ್ರಮಾಣಪತ್ರ ನೀಡಲಾಗುವುದು, ಕಡಲ ತೀರದಲ್ಲಿರುವ ಮನೆಗಳಲ್ಲಿ ಹೋಂ ಸ್ಟೇ ಆರಂಭಿಸಿ, ಪ್ರವಾಸಿಗರಿಗೆ ಉತ್ತಮ ಸೇವೆ ಒದಗಿಸಿ ಎಂದು ಸಚಿವರು ಹೇಳಿದರು. ಪ್ರವಾಸಿ ಟ್ಯಾಕ್ಸಿಗಳಿಗೆ ನೀಡುತ್ತಿದ್ದ ಸಬ್ಸಿಡಿ ಮೊತ್ತವನ್ನು 2 ಲಕ್ಷದಿಂದ 3 ಲಕ್ಷಗಳಿಗೆ ಹೆಚ್ಚಿಸಲಾಗಿದ್ದು, ಅತ್ಯಂತ ಪಾರದರ್ಶಕವಾಗಿ ಫ‌ಲಾನು ಭವಿಗಳನ್ನು ಆಯ್ಕೆ ಮಾಡಲಾಗಿದೆ. ಪ್ರವಾಸಿ ಟ್ಯಾಕ್ಸಿ ಪಡೆದ ಚಾಲಕರು, ಜಿಲ್ಲೆಯ ಪ್ರವಾಸೋಧ್ಯಮ ಅಭಿವೃದ್ದಿಯ ರಾಯಭಾರಿಗಳಂತೆ ಕಾರ್ಯನಿರ್ವ ಹಿಸಬೇಕು. ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಉತ್ತಮ ಸೇವೆ ನೀಡುವುದರ ಮೂಲಕ  ಅವರನ್ನು ಸಂತೃಪ್ತಗೊಳಿಸಬೇಕು ಎಂದು ಸಚಿವರು ಹೇಳಿದರು.

ಒಟ್ಟು 19 ಫ‌ಲಾನುಭವಿಗಳಿಗೆ ಟ್ಯಾಕ್ಸಿ ಹಾಗೂ 11 ಮಂದಿಗೆ ಹೋಂ ಸ್ಟೇ ಪ್ರಮಾಣಪತ್ರಗಳನ್ನು ಸಚಿವರು ವಿತರಿಸಿದರು. ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳಾದ ವಿಲ್‌ಪ್ರçಡ್‌ ಡಿ’ಸೋಜಾ ಹಾಗೂ ಅನಿತಾ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next