Advertisement

TB Dam; ಮೈತುಂಬಿಕೊಂಡ ತುಂಗಭದ್ರೆಗೆ ಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ

06:29 PM Sep 22, 2024 | Team Udayavani |

ಕೊಪ್ಪಳ: ಮೈತುಂಬಿಕೊಂಡಿರುವ ತುಂಗಭದ್ರಾ ಜಲಾಶಯಕ್ಕೆ ಸಿಎಂ ಸಿದ್ದರಾಮಯ್ಯ ಅವರು ಭಾನುವಾರ(ಸೆ22) ಬಾಗಿನ ಅರ್ಪಿಸಿದರು.

Advertisement

ಡ್ಯಾಂನ  19ನೇ ಕ್ರೆಸ್ಟ್ ಗೇಟ್ ಕಿತ್ತು ಹೋಗಿ ಅಪಾರ ಪ್ರಮಾಣದ ನೀರು ಹರಿದು ಹೋಗಿದ್ದನ್ನು ಪರಿಶೀಲಿಸಲು ಆಗಮಿಸಿದ್ದ ವೇಳೆ ಡ್ಯಾಂ ಮತ್ತೆ ಭರ್ತಿಯಾಗಲಿದೆ. ಆಗ ನಾನೇ ಬಾಗಿನ ಅರ್ಪಣೆ ಮಾಡಲು ಬರುವೆ ಎಂದು ಸಿಎಂ ಹೇಳಿದ್ದರು. ಅದರಂತೆ ಮತ್ತೆ ತುಂಗಭದ್ರಾ ಡ್ಯಾಂ ಭರ್ತಿಯಾಗಿದ್ದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಬಾಗಿನ ಅರ್ಪಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ”ತುಂಗಭದ್ರಾ ಜಲಾಶಯ ಮತ್ತೆ ಭರ್ತಿಯಾಗಿದ್ದು, ಅಣೆಕಟ್ಟೆಯಲ್ಲಿ 101.77 ಟಿಎಂಸಿ ನೀರು ಲಭ್ಯವಿದೆ. ಮುಂಗಾರು ಮತ್ತು ಚಳಿಗಾಲದ ಬಿತ್ತನೆಗೆ ನೀರು ಲಭ್ಯವಾಗಲಿದೆ.ತಜ್ಞರ ವರದಿಯಂತೆ ತುಂಗಭದ್ರಾ ನದಿಯ ಪಂಪಾಸಾಗರ ಅಣೆಕಟ್ಟಿನ ಕ್ರೆಸ್ಟ್ ಗೇಟ್‌ಗಳ ನಿರ್ವಹಣೆಯನ್ನು ಕೈಗೊಳ್ಳಲಾಗುವುದು.50 ವರ್ಷಗಳ ನಂತರ ಅಣೆಕಟ್ಟಿನ ಗೇಟ್‌ಗಳನ್ನು ಬದಲಾಯಿಸಬೇಕು ಆದಾಗ್ಯೂ, ಗೇಟ್‌ಗಳು 70 ವರ್ಷಗಳಿಂದ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ” ಎಂದರು.

”ಬೆಳೆಗಳಿಗೆ ನೀರು ಸಿಗುತ್ತದೋ ಇಲ್ಲವೋ ಎಂಬ ಆತಂಕ ರೈತರನ್ನು ಕಾಡುತ್ತಿತ್ತು., ಅಣೆಕಟ್ಟು ತನ್ನ ಸಾಮರ್ಥ್ಯಕ್ಕೆ ತಕ್ಕಂತೆ ತುಂಬಿದ್ದು ಈಗ ಯಾವುದೇ ಸಮಸ್ಯೆ ಇಲ್ಲ.ಎರಡನೇ ಬೆಳೆಗೂ ನೀರು ಕೊಡಲು ಪ್ರಯತ್ನಿಸಲಾಗುವುದು” ಎಂದು ಸಿದ್ದರಾಮಯ್ಯ ಹೇಳಿದರು.

Advertisement

ಈ ವೇಳೆ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಜಮೀರ್ ಅಹಮದ್, ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿರಾಜ್ ತಂಗಡಗಿ, ಸಚಿವರಾದ ಬೋಸರಾಜು, ಶರಣಪ್ರಕಾಶ್ ಪಾಟೀಲ್, ಕೊಪ್ಪಳ ಸಂಸದರಾದ ರಾಜಶೇಖರ್ ಹಿಟ್ನಾಳ್, ಬಳ್ಳಾರಿ ಸಂಸದರಾದ ಈ.ತುಕಾರಾಮ್ ಹಾಗೂ ಎರಡೂ ಜಿಲ್ಲೆಗಳ ಶಾಸಕರುಗಳು, ಜಲ ಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next