ನವದೆಹಲಿ: ಕೋವಿಡ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ವೆಚ್ಚ ಕಡಿತ, ನಿರುದ್ಯೋಗ ಹೆಚ್ಚಳ ನಡುವೆ ಹೊಸ ಪೀಳಿಗೆಯ ಪ್ರತಿಭೆಗಳಿಗೆ ಸುವರ್ಣ ಅವಕಾಶ ಒದಗಿ ಬಂದಿದೆ. ದೇಶದ ದೈತ್ಯ ಐಟಿ ಕಂಪನಿಗಳು ಒಂದು ಲಕ್ಷ ಉದ್ಯೋಗ ಸೃಷ್ಟಿಗೆ ಚಿಂತನೆ ನಡೆಸಿವೆ.
ಮಾಹಿತಿ ತಂತ್ರಜ್ಞಾನ ಕ್ಷೇತ್ರದ ದೈತ್ಯ ಕಂಪನಿಗಳಾದ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್, ಇನ್ಫೋಸಿಸ್ ಮತ್ತು ವಿಪ್ರೋ ಪ್ರಸ್ತುತ ಹಣಕಾಸು ವರ್ಷದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಹೊಸ ಬ ರನ್ನು ನೇಮಿಸಿಕೊಳ್ಳಲು ಉದ್ದೇಶಿಸಿವೆ.
ಜೂನ್ 30ಕ್ಕೆ ಅಂತ್ಯಗೊಂಡ ತ್ತೈಮಾಸಿಕದಲ್ಲಿ ವಿಪ್ರೋ ಕಂಪನಿಯು 12ಸಾವಿರ, ಇನ್ಫೋಸಿಸ್ 8,300 ಮತ್ತು ಟಿಸಿಎಸ್ 20 ಸಾವಿರ ಉದ್ಯೋಗಿಗಳನ್ನು ನೇಮಕ ಮಾಡಿಕೊಂಡಿವೆ. 2020ರಲ್ಲಿ ಟಿಸಿಎಸ್ 40 ಸಾವಿರ ಉದ್ಯೋಗಿಗಳನ್ನು ನೇಮಿಸಿಕೊಂಡಿತ್ತು.
ಇದನ್ನೂ ಓದಿ :‘ಇನ್ನೊಬ್ರ ಬಗ್ಗೆ ಮಾತಾಡ್ಬೇಕಾದ್ರೆ ಯೋಚಿಸಿ ಮಾತಾಡಿ ದರ್ಶನ್ ಅವರೇ’
2021-2022ರ ಆರ್ಥಿಕ ವರ್ಷದಲ್ಲಿ ಕ್ಯಾಂಪಸ್ ಸೆಲೆಕ್ಷನ್ ಮೂಲಕ ಮತ್ತೆ 40,000 ಹೊಸಬರನ್ನು ನೇಮಕ ಮಾಡಿಕೊಳ್ಳುವ ಗುರಿ ಹೊಂದಿದೆ. ಅದೇ ರೀತಿ, ಇನ್ಫೋಸಿಸ್ 35,000, ವಿಪ್ರೋ 30 ಸಾವಿರ ಮಂದಿಗೆ ಉದ್ಯೋಗಾವಕಾಶ ಸೃಷ್ಟಿಸುವ ಉದ್ದೇಶ ಹೊಂದಿವೆ.