Advertisement

Telangana Polls; ತೆಲಂಗಾಣ ಚುನಾವಣೆಗೆ ಬಿಜೆಪಿ ಜತೆ ಟಿಡಿಪಿ ಮೈತ್ರಿ?

10:33 AM Jun 04, 2023 | Team Udayavani |

ನವದೆಹಲಿ: ತೆಲುಗು ದೇಶಂ ಪಕ್ಷದ ಮುಖ್ಯಸ್ಥ,ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದರು.

Advertisement

ದೆಹಲಿಯಲ್ಲಿರುವ ನಿವಾಸದಲ್ಲಿ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಗೃಹ ಸಚಿವ ಅಮಿತ್ ಶಾ ಅವರನ್ನು ಚಂದ್ರಬಾಬು ನಾಯ್ಡು ಭೇಟಿಯಾಗಿ ಸುಮಾರು 40 ನಿಮಿಷಕ್ಕೂ ಹೆಚ್ಚು ಕಾಲ ಸಭೆ ನಡೆಸಿದರು.

ಈ ವರ್ಷ ನಡೆಯಲಿರುವ ತೆಲಂಗಾಣ ವಿಧಾನಸಭೆ ಚುನಾವಣೆ ಮತ್ತು ಮುಂದಿನ ವರ್ಷ ಲೋಕಸಭೆ ಚುನಾವಣೆಗೆ ಬಿಜೆಪಿ ಮತ್ತು ಟಿಡಿಪಿ ಮೈತ್ರಿ ಮಾಡಿಕೊಳ್ಳಬಹುದು ಎಂದು ಮೂಲಗಳು ತಿಳಿಸಿವೆ.

ಟಿಡಿಪಿ 2014 ರಲ್ಲಿ ಎನ್‌ಡಿಎ ಭಾಗವಾಗಿತ್ತು ಆದರೆ 2019 ರ ಚುನಾವಣೆಯ ಮೊದಲು ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನದ ವಿಚಾರವಾಗಿ ಮಾರ್ಚ್ 2018 ರಲ್ಲಿ ಆಡಳಿತ ಮೈತ್ರಿಕೂಟವನ್ನು ತ್ಯಜಿಸಿತು.

ಟಿಡಿಪಿ ಸಂಸ್ಥಾಪಕ ಮತ್ತು ಆಂಧ್ರಪ್ರದೇಶದ ಏಳು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿದ್ದ ಎನ್‌ಟಿ ರಾಮರಾವ್ ಅವರನ್ನು ಪ್ರಧಾನಿ ಮೋದಿ ಅವರು ಕಳೆದ ತಿಂಗಳು ತಮ್ಮ ರೇಡಿಯೊ ಕಾರ್ಯಕ್ರಮ ಮನ್ ಕಿ ಬಾತ್‌ನಲ್ಲಿ ಅವರ ಜನ್ಮ ವಾರ್ಷಿಕೋತ್ಸವದಂದು ನೆನಪಿಸಿಕೊಂಡರು.

Advertisement

2019 ರ ಚುನಾವಣೆಯ ನಂತರ ಆಜಾದಿ ಕಾ ಅಮೃತ್ ಮಹೋತ್ಸವದ ಸಂದರ್ಭದಲ್ಲಿ ಚಂದ್ರಬಾಬು ನಾಯ್ಡು ಒಮ್ಮೆ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next