Advertisement

ಸಹಕಾರಿ ಕೇತ್ರಕ್ಕೆ ಆರ್‌ಬಿಐ ನಿಯಮಗಳಿಂದ ಧಕ್ಕೆ: ರಾಜೇಂದ್ರ ಕುಮಾರ್‌

12:05 PM Dec 12, 2018 | |

ಮಹಾನಗರ: ಸಹಕಾರಿ ಸಂಸ್ಥೆಗಳ ಮೇಲೆ ಆದಾಯ ತೆರಿಗೆ ಮತ್ತು ಇತರ ಆರ್ಥಿಕ ಹೊರೆ ಸಹಿತ ಅನೇಕ ನಿಯಮಗಳ ಮೂಲಕ ಭಾರತೀಯ ರಿಸರ್ವ್‌ ಬ್ಯಾಂಕ್‌ ಸಹಕಾರಿ ಕ್ಷೇತ್ರಕ್ಕೆ ಧಕ್ಕೆ ತರುತ್ತಿದೆ ಎಂದು ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ ಅಧ್ಯಕ್ಷ ಡಾ| ಎಂ.ಎನ್‌. ರಾಜೇಂದ್ರ ಕುಮಾರ್‌ ಹೇಳಿದರು.

Advertisement

ಟಿಡಿಎಸ್‌, ಜಿಎಸ್‌ಟಿ ಮತ್ತು ಆದಾಯ ತೆರಿಗೆ ಕುರಿತು ಮಂಗಳೂರು ಉಪ ವಿಭಾಗದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಅಧ್ಯಕ್ಷರು ಮತ್ತು ಮುಖ್ಯ ಕಾರ್ಯನಿರ್ವಹಣೆ ಅಧಿಕಾರಿಗಳಿಗೆ ಸೋಮವಾರ ಎಸ್‌ಸಿಡಿಸಿಸಿ ಬ್ಯಾಂಕ್‌ ಸಭಾಂಗಣದಲ್ಲಿ ಆಯೋಜಿಸಿದ್ದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ವಾಣಿಜ್ಯ ಬ್ಯಾಂಕ್‌ಗಳಿಗೆ ನಷ್ಟವಾದರೆ ನೆರವು ನೀಡುವ ಆರ್‌ಬಿಐ, ಸಹಕಾರಿ ಸಂಸ್ಥೆಗಳಿಗೆ ನೆರವು ನೀಡುತ್ತಿಲ್ಲ. ಈಗ ಆದಾಯ ತೆರಿಗೆ ವ್ಯಾಪ್ತಿಗೆ ತಂದು ಸಹಕಾರ ಕ್ಷೇತ್ರದ ಅಸ್ತಿತ್ವಕ್ಕೆ ಮಾರಕ ಹೊಡೆತ ನೀಡ ಹೊರಟಿದೆ ಎಂದರು.

ಸಹಕಾರಿ ಕ್ಷೇತ್ರಕ್ಕೆ ತನ್ನದೇ ಆದ ಬಲವಿದೆ
ಎಲ್ಲ ಸಹಕಾರಿ ಸಂಸ್ಥೆಗಳು ಒಗ್ಗಟ್ಟಿನಿಂದ ಸವಾಲು ಎದುರಿಸಿದರೆ ಸಹಕಾರ ಕ್ಷೇತ್ರವನ್ನು ಸೋಲಿಸಲು ಯಾರಿಗೂ ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ಸಹಕಾರಿ ಕ್ಷೇತ್ರದ ಎಲ್ಲ ಮುಂದಾಳುಗಳು ಮತ್ತು ಸಹಕಾರ ಸಂಸ್ಥೆಗಳು ಚಿಂತನೆ ನಡೆಸಬೇಕು ಎಂದರು. ದ.ಕ. ಜಿಲ್ಲಾ ಸಹಕಾರಿ ಯೂನಿಯನ್‌ ಅಧ್ಯಕ್ಷ ಹರೀಶ್‌ ಆಚಾರ್ಯ ಪ್ರಸ್ತಾವನೆಗೈದು, ಸಹಕಾರ ಯೂನಿಯನ್‌ ವತಿಯಿಂದ ಆಯಾ ಜಿಲ್ಲೆಗಳ ಸಹಕಾರಿ ಸಂಸ್ಥೆಗಳ ಸಮಗ್ರ ಮಾಹಿತಿಯುಳ್ಳ ಡೇಟಾ ಸೆಂಟರ್‌ ಸ್ಥಾಪಿಸುವ ಪ್ರಸ್ತಾವವಿದೆ. ದ.ಕ. ಜಿಲ್ಲೆಯಿಂದಲೇ ಈ ಯೋಜನೆಗೆ ಚಾಲನೆ ನೀಡಲಾಗುವುದು ಎಂದರು.

ರಾಜ್ಯ ಸಹಕಾರ ಮಹಾಮಂಡಲದ ವ್ಯವಸ್ಥಾಪಕ ನಿರ್ದೇಶಕ ಎನ್‌. ಅರುಣ್‌ ಕುಮಾರ್‌, ಸಹಕಾರ ಸಂಘಗಳ ಉಪ ನಿಬಂಧಕ ಬಿ.ಕೆ. ಸಲೀಂ, ಜಿಲ್ಲಾ ಸಹಕಾರಿ ಯೂನಿಯನ್‌ ಉಪಾಧ್ಯಕ್ಷ ಸುಂದರ ಗೌಡ ಇಚ್ಚಿಲ, ಎಸ್‌ಸಿಡಿಸಿಸಿ ಬ್ಯಾಂಕ್‌ ನಿರ್ದೇಶಕ ಟಿ.ಜಿ. ರಾಜಾರಾಂ ಭಟ್‌, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್‌ .ಪಿ. ಪುರುಷೋತ್ತಮ ಮೊದಲಾದವರು ಉಪಸ್ಥಿತರಿದ್ದರು.  ಲೆಕ್ಕಪರಿಶೋಧಕ ಬಿ. ಚಂದ್ರಕಾಂತ ರಾವ್‌ ಸಂಪನ್ಮೂಲ ವ್ಯಕ್ತಿಯಾಗಿದ್ದರು.

Advertisement

ನೆರವು ಅಗತ್ಯ
ಅಧ್ಯಕ್ಷತೆ ವಹಿಸಿದ್ದ ರಾಜ್ಯ ಸಹಕಾರ ಮಹಾಮಂಡಲದ ಅಧ್ಯಕ್ಷ ಎನ್‌. ಗಂಗಣ್ಣ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರಕಾರಗಳು ಸಹಕಾರ ಕ್ಷೇತ್ರದ ನೆರವಿಗೆ ಬರಬೇಕು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next