ಕಮಲನಗರ: ವಿಧಾನ ಪರಿಷತ್ ಕಾಂಗ್ರೆಸ್ ಅಭ್ಯರ್ಥಿ ಭೀಮರಾವ ಪಾಟೀಲ ಅವರನ್ನು ಪ್ರಚಂಡ ಬಹುಮತದಿಂದ ಗೆಲ್ಲಿಸಿ ಬಿಜೆಪಿಗೆ ತಕ್ಕಪಾಠ ಕಲಿಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದರು.
ಹೋಳಸಮುದ್ರ ಗ್ರಾಮದ ಕಾಂಗ್ರೆಸ್ ಮುಖಂಡ ಪ್ರಭು ಬೇಣ್ಣೆ ಅವರ ಮನೆಯಲ್ಲಿ ನಡೆದ ವಿಧಾನ ಪರಿಷತ್ ಚುನಾವಣೆಯ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.
ಕೇಂದ್ರ ಹಾಗೂ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರ ಜನ ವಿರೋಧಿ ನೀತಿ ಅನುಸರಿಸುತ್ತಿದೆ. ದಿನನಿತ್ಯ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿಸಿ ಬಡಜನರ ಕೂಲಿ ಕಾರ್ಮಿಕರು ಜೀವನ ಸಾಗಿಸುವುದು ದುಸ್ತರವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಗ್ರಾಪಂಗಳಿಗೆ ಹೆಚ್ಚಿನ ಅಧಿಕಾರ ನೀಡಿದ್ದೆ ಕಾಂಗ್ರೆಸ್ ಪಕ್ಷ. ಗ್ರಾಪಂಗಳಿಗೆ ಮೀಸಲಾತಿ ಜಾರಿಗೆ ತಂದು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಅಧಿಕಾರ ನೀಡಿದ್ದು, ಕಾಂಗ್ರೆಸ್ ಪಕ್ಷ, ಉದ್ಯೋಗ ಖಾತ್ರಿ ಯೋಜನೆಯಡಿ ಕೋಟ್ಯಂತರ ರೂ. ಅನುದಾನ ನೀಡಲು ಪ್ರಾರಂಭಿಸಿದ್ದು ಕಾಂಗ್ರೆಸ್ ಪಕ್ಷವಾಗಿದೆ ಎಂದರು.
ಹುಮನಾಬಾದ ಶಾಸಕ ರಾಜಶೇಖರ ಪಾಟೀಲ್, ಕಾಂಗ್ರೆಸ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಮೀನಾಕ್ಷಿ ಸಂಗ್ರಾಮ, ತಾಲೂಕು ಬ್ಲಾಕ್ ಕಾಂಗ್ರೆಸ್ ರೂರಲ್ ಕಮೀಟಿಯ ಅಧ್ಯಕ್ಷ ಆನಂದ ಚವ್ಹಾಣ, ತಾಲೂಕು ಬ್ಲಾಕ್ ಕಾಂಗ್ರೆಸ್ ಅರ್ಬನ್ ಕಮೀಟಿಯ ಅಧ್ಯಕ್ಷ ರಾಜಕುಮಾರ ಹಲಬುರ್ಗೆ, ಮುಖಂಡರಾದ ಭೀಮಸೇನರಾವ ಶಿಂಧೆ, ಚರಣಸಿಂಗ ರಾಠೊಡ, ವೆಂಕಟ ಶಿಂಧೆ, ವಿಶ್ವನಾಥ ದಿನೆ, ಗೋಪಿಕೃಷ್ಣ, ಕಣಿರಾಮ ರಾಠೊಡ, ಮಹಾದೇವ ಬೇಣ್ಣೆ, ಪ್ರಭು ಬೇಣ್ಣೆ, ಹುಸೇನ, ಪ್ರದೀಪ ಪಾಟೀಲ್, ಅನಿಲ ಬಿರ್ಗೆ, ಸತೀಶ ಭುರೆ, ಗಣೇಶ ಬಿರಾದಾರ ಹಾಗೂ ಗ್ರಾಪಂ ಸದಸ್ಯರು, ಪಕ್ಷದ ಕಾರ್ಯಕರ್ತರು ಇದ್ದರು.