Advertisement
ನಗರದ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನಡೆದ 9 ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಮೂರನೇ ದಿನದ ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕನ್ನಡಭಾಷೆಯಲ್ಲಿ 125 ಕ್ಕೆ 125 ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದನೆ ಹಾಗೂ ಕಸಾಪ ಸಾಹಿತ್ಯ ಪರೀಕ್ಷೆಗಳಿಗೆ ಉಚಿತವಾಗಿ ಪಾಠ ಬೋಧಿಸಿದ ಶಿಕ್ಷಕರ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.
Related Articles
ಕಸಾಪ ಸೇವೆ: ಇಂದಿನ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಾಹಿತ್ಯಾಸಕ್ತ ಮನಸ್ಸುಗಳನ್ನು ಒಂದುಗೂಡಿಸುವ ಪುಣ್ಯಕಾರ್ಯ ಮಾಡುತ್ತಿರುವ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸೇವೆ ಶ್ಲಾಘನೀಯ. ಕನ್ನಡ ಸಾಹಿತ್ಯವನ್ನು ಅಭ್ಯಾಸ ಮಾಡಿ ಅಲ್ಲಿರುವ ವಿಚಾರಗಳನ್ನು ತಿಳಿಯುವ ಮೂಲಕ ಅದನ್ನು ಹೆಮ್ಮರವಾಗಿ ಬೆಳೆಸಬೇಕಿದೆ ಎಂದರು.
Advertisement
ಸನ್ಮಾನ: ಸಮಾರಂಭದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 125 ಕ್ಕೆ 125 ಅಂಕಗಳಿಸಿದ ಜಿಲ್ಲೆಯ ವಿದ್ಯಾರ್ಥಿಗಳು ಹಾಗೂ ಕಸಾಪ ಸಾಹಿತ್ಯ ಪರೀಕ್ಷೆಗಳಿಗೆ ಉಚಿತವಾಗಿ ಬೋಧಿಸಿದ ಶಿಕ್ಷಕರನ್ನು ಸನ್ಮಾನಿಸಲಾಯಿತು. ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಮಂಜುಳಾ, ಕ್ಷೇತ್ರ ಶಿಕ್ಷಣಾಧಿಕಾರಿ ಲಕ್ಷ್ಮೀಪತಿ, ಜಿಲ್ಲಾ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸಿದ್ದಮಲ್ಲಪ್ಪ, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷೆ ನೇತ್ರಾವತಿ,ಕಸಾಪ ಪದಾಧಿಕಾರಿಗಳು ಉಪಸ್ಥಿತರಿದ್ದರು.
5 ವರ್ಷ ಶ್ರಮಪಟ್ಟರೆ 50 ವರ್ಷ ಸುಖ: ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಅಧ್ಯಕ್ಷತೆ ವಹಿಸಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಹನೂರುಚನ್ನಪ್ಪ ಮಾತನಾಡಿ, ವಿದ್ಯಾರ್ಥಿಗಳು ಐದು ವರ್ಷ ಕಷ್ಟಪಟ್ಟು ಶ್ರದ್ಧೆಯಿಂದ ವ್ಯಾಸಂಗ ಮಾಡಿದರೆ ಮುಂದಿನ 50 ವರ್ಷ ಸುಖವಾಗಿರಬಹುದು.
ಯಾವುದೇ ಕಾರ್ಯದಲ್ಲಾದರೂ, ಶ್ರಮಪಡಲೇಬೇಕು. ದ್ವೇಷದಿಂದ ನಾವು ಯಾವ ಸಾಧನೆ ಮಾಡಲು ಸಾಧ್ಯವಿಲ್ಲ. ಪ್ರೀತಿಯಿಂದ ಮಾತ್ರ ಸಾಧ್ಯ. ಮಕ್ಕಳು ಶಿಕ್ಷಣದ ಜತೆಗೆ ಮೌಲ್ಯವನ್ನು ಬೆಳೆಸಿಕೊಂಡಾಗ ದೊಡ್ಡ ವ್ಯಕ್ತಿಯಾಗಲು ಸಾಧ್ಯ ಎಂದು ಕಿವಿಮಾತು ಹೇಳಿದರು.