Advertisement
ಪಟ್ಟಣದ ಅಕ್ಕಮಹಾದೇವಿ ಅನುಭಾವ ಮಂಟಪದಲ್ಲಿ ತಾಲೂಕು ಜಂಗಮ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ವೀರಶೈವ ಸಂಸ್ಥಾಪನಾಚಾರ್ಯ ಆದಿ ಜಗದ್ಗುರು ರೇಣುಕಾಚಾರ್ಯ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
Related Articles
Advertisement
ವೀರಪುಲಿಕೇಶಿ ಸಂಸ್ಥೆಯ ಚೇರಮನ್ ಎ.ಸಿ.ಪಟ್ಟಣದ, ಕಾಳಿದಾಸ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಭೀಮಸೇನ ಚಿಮ್ಮನಕಟ್ಟಿ, ಜಿಪಂ ಮಾಜಿ ಉಪಾಧ್ಯಕ್ಷ ಹನಮಂತ ಮಾವಿನಮರದ, ಜಿ.ಪಂ. ಮಾಜಿ ಸದಸ್ಯ ಎಂ.ಬಿ.ಹಂಗರಗಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.
ಕಾಳಿದಾಸ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಭೀಮಸೇನ ಚಿಮ್ಮನಕಟ್ಟಿಯವರು ರೇಣುಕಾಚಾರ್ಯರ ಸಮುದಾಯ ಭವನ ನಿರ್ಮಾಣಕ್ಕಾಗಿ 1 ಲಕ್ಷ ರೂ. ದಾನ ನೀಡಿದರು.
ಬಿಇಒ ಕಚೇರಿಯ ಶಿಕ್ಷಣ ಸಂಯೋಜಕ ವಿ.ಎಸ್.ಹಿರೇಮಠ ಜಂಗಮ ಸಮಾಜದ ಆಚಾರ ವಿಚಾರ ಸಂಸ್ಕೃತಿ ಕುರಿತು ವಿಶೇಷ ಉಪನ್ಯಾಸ ನೀಡಿದರು. ನವಗ್ರಹ ಹಿರೇಮಠದ ಶಿವಪೂಜಾ ಶಿವಾಚಾರ್ಯ ಸ್ವಾಮೀಜಿ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.
ತಾಲೂಕು ಜಂಗಮ ಸಮಾಜದ ಅಧ್ಯಕ್ಷ ಶಿವುಕುಮಾರ ಹಿರೇಮಠ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮುದಕಯ್ಯ ಹಿರೇಮಠ, ಪುರಸಭೆ ಅಧ್ಯಕ್ಷ ರಾಜಮಹಮ್ಮದ ಬಾಗವಾನ, ಬಿ.ಡಿ.ಸಿ.ಸಿ.ಬ್ಯಾಂಕ್ ನಿರ್ದೇಶಕ ಕುಮಾರಗೌಡ ಜನಾಲಿ, ಕೆಒಎಫ್ ನಿರ್ದೇಶಕ ಬಸವರಾಜ ಪಾಟೀಲ, ಜಿಲ್ಲಾ ಬಿಜೆಪಿ ಅಧ್ಯಕ್ಷ ಶಾಂತಗೌಡ ಪಾಟೀಲ ಹಾಜರಿದ್ದರು. ಎಸ್‌ಆರ್‌ಇ ಫೌಂಡೇಶನ್ ಅಧ್ಯಕ್ಷ ಎಸ್.ಆರ್. ನವಲಿಹಿರೇಮಠ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ನಾಗರಾಜ ಕಾಚೆಟ್ಟಿ, ಆದರ್ಶ ವಿದ್ಯಾಲಯದ ಎಸ್‌ಡಿಎಂಸಿ ಅಧ್ಯಕ್ಷ ಶಿವಯ್ಯ ಹಿರೇಮಠ, ಪುರಸಭೆ ಅಧ್ಯಕ್ಷ ರಾಜಮಹ್ಮದ ಬಾಗವಾನ್ ಅವರನ್ನು ಸನ್ಮಾನಿಸಲಾಯಿತು.
ಎಸ್.ಎಂ.ಹಿರೇಮಠ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿವುಕುಮಾರ ಹಿರೇಮಠ ಸ್ವಾಗತಿಸಿದರು. ದೊಡ್ಡಯ್ಯ ಭೂಸನೂರಮಠ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಶಂಕರಗೌಡ ಪಾಟೀಲ, ಹೊನ್ನಯ್ಯ ಹಿರೇಮಠ, ಸಿದ್ದಯ್ಯ ಹಿರೇಮಠ, ಅಮರೇಶ ಯಮನೂರಮಠ, ಮುಕ್ಕಣ್ಣ ಜನಾಲಿ, ಸುನೀಲ ಕಾರುಡಗಿಮಠ, ಗುರುಸಿದ್ದಯ್ಯ ಹಿರೇಮಠ, ಉಮೇಶ ಭಿಕ್ಷಾವತಿಮಠ, ಮಲ್ಲಯ್ಯ ಮುಪ್ಪಿನವರ ಹಾಜರಿದ್ದರು.