Advertisement
ಸಿಂದಗಿ ತಾಲೂಕಿನ ಸಾಸಬಾಳ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆ ಮುಖ್ಯೋಪಾಧ್ಯಾಯ ಬಸವರಾಜ ನಾಯಕಲ್ ಎಂಬವರು ಡೆತ್ ನೋಟ್ ಬರೆದಿಟ್ಟು ಸಿಂದಗಿ ತಹಶಿಲ್ದಾರ ಕಛೇರಿ ಆವರಣದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.
Related Articles
Advertisement
ಬಿಸಿಯೂಟ ಯೋಜನೆ ಅಡಿಯಲ್ಲಿ ಹೆಚ್ಚುವರಿ ವಿದ್ಯಾರ್ಥಿಗಳ ದಾಖಲಾತಿ ತೋರಿಸಿ ಹಣ ಲಪಟಾಯಿಸುತ್ತಿದ್ದ ಎಂದು ನನ್ನ ವಿರುದ್ಧ ಸುಳ್ಳು ದೂರು ನೀಡಿದ್ದರು. ನನಗಿಂತ ನನ್ನ ವಿದ್ಯಾರ್ಥಿಗಳ ಭವಿಷ್ಯ ಮುಖ್ಯ ಆಗಿದೆ ಎಂದು ಪತ್ರದಲ್ಲಿ ತಮ್ಮ ಸಾವಿಗೆ ಕಾರಣವಾದ ಮೇಲಾಧಿಕಾರಿಗಳು, ಅವರು ನೀಡುತ್ತಿದ್ದ ಕಿರುಕುಳದ ಕುರಿತು ವಿವರಿಸಿದ್ದಾರೆ.
ನನ್ನ ಸಾವಿನ ಬಳಿಕ ನನ್ನ ಹೆಂಡತಿ, ಓರ್ವ ಮಗಳಿಗೆ ನ್ಯಾಯ ಒದಗಿಸಿಕೊಡಬೇಕು ಎಂದು ಮನವಿ ಮಾಡಿದ್ದಾರೆ.ಈ ಕುರಿತು ಸಿಂದಗಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಿಂದಗಿ ಬಿಇಒ ಸೇರಿ ನಾಲ್ವರ ಸಸ್ಪೆಂಡ್
ಸಾಸಬಾಳ ಸರ್ಕಾರಿ ಪ್ರಾಥಮಿಕ ಶಾಲೆ ಶಿಕ್ಷಕ ಬಸವರಾಜ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಂದಗಿ ಬಿಇಒ ಎಚ್.ಎಂ. ಹರವಾಳ, ಮೂವರು ಶಿಕ್ಷಕರಾದ ಜಿ.ಎನ್. ಪಾಟೀಲ, ಎಸ್.ಎಲ್. ಭಜಂತ್ರಿ, ಬಿ.ಎಂ. ತಳವಾರ ಇವರನ್ನು ಸೇವೆಯಿಂದ ಅಮಾನತು ಮಾಡಿ ವಿಜಯಪುರ ಡಿಡಿಪಿಐ ಉಮೇಶ ಶಿರಹಟ್ಟಿಮಠ ಅದೇಶಿಸಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕ ಬಸವರಾಜ ನಾಯಕಲ ಮರಣ ಪೂರ್ವ ಪತ್ರದಲ್ಲಿ ನಿಮ್ಮ ಹೆಸರು ಉಲ್ಲೇಖವಿದೆ ಹಾಗೂ ಸಿಂದಗಿ ಪೊಲೀಸ್ ಠಾಣೆಯಲ್ಲಿ ನಿಮ್ಮ ವಿರಿದ್ಧ ದಾಖಲಾಗಿರುವ ಪ್ರಕರಣದ ಹಿನ್ನಲೆಯಲ್ಲಿ ವಿಚಾರಣೆ ಕಾಯ್ದಿರಿಸಿ ಅಮಾನತು ಮಾಡಲಾಗಿದೆ ಎಂದು ಆದೇಶದಲ್ಲಿ ವಿವರಿಸಿದ್ದಾರೆ.