ಶಿವಮೊಗ್ಗ: ಕೆಲ ದಿನಗಳ ಹಿಂದೆ ರಾಜ್ಯದಲ್ಲಿ ಸದ್ದು ಮಾಡಿದ್ದ ಮಕ್ಕಳಿಂದ ಶಾಲಾ ಕೆಲಸದ ಪ್ರಸಂಗ ಇದೀಗ ಮತ್ತೆ ಶಿಕ್ಷಣ ಸಚಿವರ ಜಿಲ್ಲೆಯಲ್ಲಿಯೇ ನಡೆದಿದೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆ ಗ್ರಾಮದ ಉರ್ದು ಶಾಲೆಯಲ್ಲಿ ಶಿಕ್ಷಕರು ಮಾಡಿರುವ ಎಡವಟ್ಟು ಇದೀಗ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ.
ಇಲ್ಲಿನ ಶಾಲೆಯಲ್ಲಿ ಮಕ್ಕಳು ಶಾಲೆಯ ಮೇಲ್ಚಾವಣಿ ಮೇಲೆ ಹತ್ತಿ ಕಸ ಗುಡಿಸಿದ್ದಾರೆ. ಶಾಲೆಯ ಮುಖ್ಯ ಶಿಕ್ಷಕರ ಮಕ್ಕಳಿಂದ ಮಾಡಿಸಿದ ಕೆಲಸ ಸ್ಥಳೀಯರ ಮೊಬೈಲ್ ನಲ್ಲಿ ಸೆರೆಯಾಗಿದೆ.
ಮಕ್ಕಳು ಹಂಚುಗಳ ಮೇಲೆ ನಡೆದು ಕಸಗುಡಿಸಿದ್ದಾರೆ. ಎರಡನೇ ತರಗತಿ ವಿದ್ಯಾರ್ಥಿಯೋರ್ವ ಕಸ ಗುಡಿಸಿ ಹಂಚು ಸರಿಪಡಿಸಿದ್ದಾರೆ. ಘಟನೆ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಏನಾದರು ಅವಘಡ ಸಂಭವಿಸಿದರೆ ಹೊಣೆ ಯಾರು ಎಂದು ಪ್ರಶ್ನಿಸಿದ್ದಾರೆ.
ಇತ್ತೀಚಿಗೆ ಹುಣಸೆಘಟ್ಟದ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಕ್ಲೀನ್ ಮಾಡಿಸಿದ ಸುದ್ದಿ ರಾಜ್ಯಾದ್ಯಂತ ಸದ್ದು ಮಾಡಿತ್ತು. ಅದರ ಬೆನ್ನಲ್ಲೇ ಶಾಲಾ ವಿದ್ಯಾರ್ಥಿಗಳನ್ನು ಕೆಲಸಕ್ಕೆ ಬಳಸಿಕೊಳ್ಳುವಂತಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಆದೇಶ ಹೊರಡಿಸಿದ್ದರು. ಆದರೆ ಸ್ವಜಿಲ್ಲೆಯಲ್ಲೇ ಶಿಕ್ಷಣ ಸಚಿವರ ಆದೇಶ ಮೀರಲಾಗಿದೆ.
https://www.facebook.com/reel/768528881491816