Advertisement

ಮುಂಬಯಿ : ಲಿಫ್ಟ್ ನಲ್ಲಿ ಸಿಲುಕಿ 26 ವರ್ಷದ ಖಾಸಗಿ ಶಾಲಾ ಶಿಕ್ಷಕಿ ಸಾವು

08:22 AM Sep 18, 2022 | Team Udayavani |

ಮುಂಬಯಿ : ಲಿಫ್ಟ್ ನಲ್ಲಿ ಸಿಲುಕಿ ಖಾಸಗಿ ಶಾಲೆಯ ಶಿಕ್ಷಕಿಯೊಬ್ಬರು ಸಾವನ್ನಪ್ಪಿದ ಧಾರುಣ ಘಟನೆ ಮುಂಬೈ  ಮಲಾಡ್ ನ ಎಂಬಲ್ಲಿ ನಡೆದಿದೆ.

Advertisement

ಜೆನೆಲ್ ಫೆರ್ನಾಂಡಿಸ್ (26) ಸಾವನ್ನಪ್ಪಿದ ಶಿಕ್ಷಕಿ.

ಮುಂಬೈನಲ್ಲಿರುವ ಮಲಾಡ್‌ನ ಚಿಂಚೋಲಿ ಬಂದರ್‌ನಲ್ಲಿರುವ ಸೇಂಟ್ ಮೇರಿಸ್ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಜೆನೆಲ್ ಶುಕ್ರವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಎರಡನೇ ಮಹಡಿಯಲ್ಲಿರುವ ಸಿಬ್ಬಂದಿ ಕೊಠಡಿಗೆ ತೆರಳಲು ಆರನೇ ಮಹಡಿಯಿಂದ ಲಿಫ್ಟ್ ಮೂಲಕ ಬರಲು ಲಿಫ್ಟ್ ಒಳಗೆ ಪ್ರವೇಶಿಸುತ್ತಿದ್ದಂತೆ ಒಮ್ಮೆಲೆ ಬಾಗಿಲು ಮುಚ್ಚಿದೆ ಈ ವೇಳೆ ಶಿಕ್ಷಕಿ ಬಾಗಿಲಿನ ನಡುವೆ ಸಿಲುಕಿಕೊಂಡಿದ್ದಾರೆ ಅಲ್ಲದೆ ಲಿಫ್ಟ್ ಚಲಿಸಲು ಪ್ರಾರಂಭಿಸಿದೆ ಇದರಿಂದ ಗಂಭೀರ ಗಾಯಗೊಂಡಿದ್ದರು.

ಕೂಡಲೇ ಶಾಲೆಯ ಸಿಬ್ಬಂದಿಗಳು ಶಿಕ್ಷಕಿಯನ್ನು ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪಿದ್ದಾರೆ.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next