ಬೆಂಗಳೂರು: ಶಾಲಾ ಶಿಕ್ಷಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅ. 21ರಿಂದ ಶಾಲೆಯಲ್ಲಿಯೇ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಲು ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ನಿರ್ಧರಿಸಿದೆ. ಇದಕ್ಕೂ ಸರಕಾರ ಸ್ಪಂದಿಸದೇ ಇದ್ದರೆ ತರಗತಿ ಹಾಗೂ ಶಾಲಾ ಬಹಿಷ್ಕಾರದ ಎಚ್ಚರಿಕೆ ನೀಡಿದೆ.
ಮನವಿಗೆ ಸ್ಪಂದನೆ ಸಿಗದೇ ಇದ್ದರೆ ಬಿಸಿಯೂಟಮಾಹಿತಿಯನ್ನು ಅಪ್‌ಡೇಟ್ ಮಾಡದಿರುವುದು, ವಿದ್ಯಾರ್ಥಿ ಸಾಧನೆ ಟ್ರ್ಯಾಕಿಂಗ್ ವ್ಯವಸ್ಥೆ (ಎಸ್
ಎಟಿಎಸ್) ಯಲ್ಲಿ ಮಾಹಿತಿ ಅಪ್‌ಲೋಡ್ ಮಾಡದಿರುವುದು ಹಾಗೂ ರಾಜ್ಯ ಮಟ್ಟದ ರ್‍ಯಾಲಿ ಹಾಗೂ ಧರಣಿ ಸತ್ಯಾಗ್ರಹ ನಡೆಸಲಿದ್ದೇವೆ.
ಇದಾವುದಕ್ಕೂ ಸರಕಾರ ಸ್ಪಂದಿಸ ದಿದ್ದರೆ ತರಗತಿ ಬಹಿಷ್ಕಾರ ಹಾಗೂ ಶಾಲಾ ಬಹಿಷ್ಕಾರದಂತಹ ಉಗ್ರ ಹೋರಾಟವನ್ನು ನಡೆಸಲಿದ್ದೇವೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:“ಉತ್ತರ’ದಲ್ಲಿ ಪ್ರವಾಹ ಪ್ರಯಾಸ : ಇದುವರೆಗೆ 52 ಮಂದಿ ಸಾವು, ಐವರು ಕಣ್ಮರೆ