Advertisement
ಮೇ 17ರಂದು ಸಮಾಜ ವಿಜ್ಞಾನ, 18ರಂದು ಗಣಿತ ವಿಜ್ಞಾನ, 19ರಂದು ಆಂಗ್ಲ ಹಾಗೂ ಜೀವಶಾಸ್ತ್ರ ವಿಷಯಕ್ಕೆ ಸಂಬಂಧಿಸಿದ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಮೂಲ ದಾಖಲೆಗಳ ನೈಜತೆ ಪರಿಶೀಲನೆ ಬೆಳಗ್ಗೆ 10 ಗಂಟೆಗೆ ನಗರದ ಲೇಡಿಹಿಲ್ ವಿಕ್ಟೋರಿಯಾ ಪ್ರೌಢಶಾಲೆಯಲ್ಲಿ ನಡೆಯಲಿದೆ. ಅಭ್ಯರ್ಥಿಗಳು ಮೂಲ ದಾಖಲೆಗಳೊಂದಿಗೆ ಎಲ್ಲ ಪ್ರಮಾಣ ಪತ್ರಗಳ ದೃಢೀಕೃತ ಪ್ರತಿಯನ್ನು ದ್ವಿಪ್ರತಿಯಲ್ಲಿ ಹಾಜರು ಪಡಿಸುವಂತೆ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ದಯಾನಂದ ರಾಮಚಂದ್ರ ನಾಯ್ಕ ತಿಳಿಸಿದ್ದಾರೆ.
ಉಡುಪಿ ಜಿಲ್ಲೆಗೆ ಸಂಬಂಧಿಸಿದಂತೆ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯ 258 ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕಚೇರಿಯಲ್ಲಿ ಮೇ 15ರಿಂದಲೇ ಆರಂಭವಾಗಿದೆ. ಮುಂದಿನ ಮೂರು ದಿನಗಳ ಕಾಲ ನಡೆಯಲಿದೆ. ಅಭ್ಯರ್ಥಿಗಳ ಮೂಲ ದಾಖಲೆ ಪರಿಶೀಲನೆ ಪ್ರಕ್ರಿಯೆ ಇದಾಗಿದ್ದು, ಅವರಿಂದ ಮಾಹಿತಿ ಜತೆಗೆ ದಾಖಲೆಯ ಮೂಲ ಪ್ರತಿ ಪಡೆಯುತ್ತಿದ್ದೇವೆ ಎಂದು ಡಿಡಿಪಿಐ ಗಣಪತಿ ಅವರು ಮಾಹಿತಿ ನೀಡಿದರು.