ಬನಹಟ್ಟಿ: ಮಕ್ಕಳ ಶೈಕ್ಷಣಿಕ ಅಭಿವೃದ್ಧಿಯಲ್ಲಿ ಶಿಕ್ಷಕರ ಜವಾಬ್ದಾರಿ ಮುಖ್ಯವಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶಕುಮಾರ್ ಹೇಳಿದರು. ಚಿಮ್ಮಡ ಗ್ರಾಮದಲ್ಲಿ ನೂತನ ಸರ್ಕಾರಿ ಪದವಿಪೂರ್ವ ಕಾಲೇಜು ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳಲ್ಲಿ ಒಳ್ಳೆಯ ಭಾವನೆಗಳನ್ನು ನೀಡುವುದರ ಜತೆಗೆ ಮಕ್ಕಳಿಗೆ ಉತ್ತಮ ಉದಾಹರಣೆಗಳನ್ನು ನೀಡಿ. ಇದರಿಂದ ಉತ್ತಮ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ. ರಬಕವಿ ಬನಹಟ್ಟಿ ತಾಲೂಕಿನ ಶೈಕ್ಷಣಿಕ ಅಭಿವೃದ್ಧಿಗೆ ಬೇಕಾಗುವ ಎಲ್ಲ ಸೌಲಭ್ಯ ನೀಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.
ಶಾಸಕ ಸಿದ್ದು ಸವದಿ ಮಾತನಾಡಿ, ಆದರ್ಶ ಶಾಲೆ ಕಟ್ಟುವ ಕಾರ್ಯ ಇಲ್ಲಿನ ಶಿಕ್ಷಕರಿಂದ ಆಗಬೇಕು. ತಾಲೂಕಿನಲ್ಲಿ ಬಹಳಷ್ಟು ಸರ್ಕಾರಿ ಶಾಲೆಗಳು ಶಿಥಿಲಾವಸ್ಥೆಯಲ್ಲಿ ಇವೆ. ಇವುಗಳ ದುರಸ್ತಿ ಕಾರ್ಯ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಇದನ್ನೂ ಓದಿ:ಸುಭಾಶ್ಚಂದ್ರ ಬೋಸ್ ರನ್ನು ಕೊಂದಿದ್ದು ಕಾಂಗ್ರೆಸ್ ನವರು! ಸಂಸದ ಸಾಕ್ಷಿ ಮಹಾರಾಜ್
ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಮಾತನಾಡಿ, ನೂತನವಾಗಿ ಆರಂಭವಾದ ಕಾಲೇಜು ಅಭಿವೃದ್ಧಿಯಾಗಲು ಗ್ರಾಮಸ್ಥರ ಸಹಾಯ ಮತ್ತು ಸಹಕಾರ ಬಹಳಷ್ಟು ಇದೆ. ಇಲ್ಲಿಯ ಕಾಲೇಜನ್ನು ರಾಜ್ಯದ ಅತ್ಯುತ್ತಮ ಕಾಲೇಜುಗಳಲ್ಲಿ ಒಂದಾಗಿಸಿ ಎಂದರು. ಇದೇ ಸಂದರ್ಭದಲ್ಲಿ ಪ್ರತಿಭಾವಂತ ಮಕ್ಕಳಿಗೆ ಇನ್ಫೋಸಿಸ್ ಸಂಸ್ಥೆ ನೀಡಿದ ಲ್ಯಾಪ್‌ಟಾÂಪ್‌ಗ್ಳನ್ನು ಸಚಿವರು ನೀಡಿದರು. ವಿಧಾನ ಪರಿಷತ್ ಸದಸ್ಯ ಹನಮಂತ ನಿರಾಣಿ, ಜಿಲ್ಲಾ ಪಂಚಾಯ್ತಿ ಸದಸ್ಯ ಪರಶುರಾಮ ಬಸವ್ವಗೋಳ, ತಾಪಂ ಅಧ್ಯಕ್ಷ ಶಿವಾನಂದ ಮಂಟೂರ, ಶಿಕ್ಷಣ ಇಲಾಖೆ ಆಯುಕ್ತ ಸಿದ್ಧಲಿಂಗಯ್ಯ ಹಿರೇಮಠ, ಎಸಿ ಡಾ| ಸಿದ್ದು ಹುಲ್ಲೊಳ್ಳಿ ಇದ್ದರು.