Advertisement

ದೇಶದ ಪ್ರಗತಿಯಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು

11:44 AM Sep 17, 2017 | Team Udayavani |

ಬಸವಕಲ್ಯಾಣ: ದೇಶದ ಪ್ರಗತಿಯಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದ್ದು, ವಿದ್ಯಾರ್ಥಿಗಳಲ್ಲಿ ಮಾನವಿಯ ಮೌಲ್ಯ ಬೆಳೆಸುವ ಮೂಲಕ ಅವರನ್ನು ಉತ್ತಮ ನಾಗರಿಕರನ್ನಾಗಿ ರೂಪಿಸಲು ಶಿಕ್ಷಕರು ಕಾಳಜಿ ವಹಿಸಬೇಕು ಎಂದು ಪ್ರೊ| ವೆಂಕಣ್ಣ ಡೊಣ್ಣೆಗೌಡರು ಹೇಳಿದರು.

Advertisement

ನಗರದ ಬಸವೇಶ್ವರ ಪದವಿ ಪೂರ್ವ ಮತ್ತು ಪದವಿ ಕಾಲೇಜಿನಿಂದ ಬಿಕೆಡಿಬಿ ಸಭಾ ಭವನದಲ್ಲಿ ಆಯೋಜಿಸಲಾಗಿದ್ದ 56ನೇ ಶಿಕ್ಷಕರ ದಿನಾಚರಣೆ ಹಾಗೂ ಪದವಿ ಪೂರ್ವ ಮತ್ತು ಪದವಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮದಲ್ಲಿ ಅವರು ವಿಶೇಷ ಶಿಕ್ಷಕರ ವೃತ್ತಿ ಪವಿತ್ರವಾದ್ದು, ಶಿಕ್ಷಕರ ಮೇಲೆ ಮಹತ್ವದ ಜವಾಬ್ದಾರಿ ಇದೆ. ಶಿಕ್ಷಕರು ರಾಷ್ಟ್ರದ ಭವಿಷ್ಯ ನಿರ್ಮಾಪಕರು ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ ಬಿಡಿಪಿಸಿ ಅಧ್ಯಕ್ಷ ವೀರಣ್ಣ ಹಲಶೆಟ್ಟಿ ಮಾತನಾಡಿ, ಮಕ್ಕಳಿಗೆ ಜ್ಞಾನ ಧಾರೆ ಎರೆದು ಅವರನ್ನು ಒಳ್ಳೆಯ ನಾಗರಿಕನ್ನಾಗಿ ಮಾಡುವ ಮೂಲಕ ಉತ್ತಮ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಕೊಡುಗೆ ದೊಡ್ಡದು ಎಂದು ಹೇಳಿದರು. 

ಬಿಡಿವಿಸಿ ಸದಸ್ಯ ಸೋಮಶೇಖರಯ್ಯ ವಸ್ತ್ರದ ಕಾರ್ಯಕ್ರಮ ಉದ್ಘಾಟಿಸಿದರು. ಬಿಡಿಪಿಸಿ ಉಪಾಧ್ಯಕ್ಷ ಜಗನ್ನಾಥ ಖೂಬಾ, ಕಾರ್ಯದರ್ಶಿ ರೇವಣಪ್ಪ ರಾಯವಾಡೆ, ಸಹಕಾರ್ಯದರ್ಶಿ ಬಸವರಾಜ ಬಾಲಕಿಲೆ, ಕೋಶಾಧ್ಯಕ್ಷ ಅಶೋಕ ನಾಗರಾಳೆ, ನಿರ್ದೇಶಕರಾದ ಸುಭಾಷ ಹೊಳಕುಂದೆ, ಕಾಶಪ್ಪ ಸಕ್ಕರಭಾವಿ, ಅನೀಲಕುಮಾರ ಮೆಟಗೆ, ಶಿವರಾಜ ಶಾಶಟ್ಟೆ, ಮಲ್ಲಿಕಾರ್ಜುನ ಚಿರಡೆ, ಅನೀಲಕುಮಾರ ರಗಟೆ ಇದ್ದರು.

ಕ್ರೀಡೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುವ ಸ್ವಾತಿ ರೆಡ್ಡಿ ಅವರನ್ನು ಸನ್ಮಾನಿಸಲಾಯಿತು. ಕಾಲೇಜಿನ ಪ್ರಾಚಾರ್ಯ ಡಾ| ರುದ್ರಮಣಿ ಮಠಪತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಂತಲಿಂಗ ಧಬಾಲೆ ಸ್ವಾಗತಿಸಿದರು. ಡಾ| ಬಸವರಾಜ ಖಂಡಾಳೆ ನಿರೂಪಿಸಿದರು. ಶಿಲ್ಪಾ ದುಬುಲ್ಗುಂಡೆ ವಂದಿಸಿದರು. 

Advertisement
Advertisement

Udayavani is now on Telegram. Click here to join our channel and stay updated with the latest news.

Next