Advertisement
ಇದು ಭ್ರಷ್ಟಾಚಾರಕ್ಕೆ ನೇರ ಅವಕಾಶ ಮಾಡಿಕೊಡುತ್ತದೆ ಮತ್ತು ಬಲಿಷ್ಠ ಶಿಕ್ಷಕರು ಸುಲಭದಲ್ಲಿ ವರ್ಗಾವಣೆ ಪಡೆಯಲಿದ್ದಾರೆ. ಈ ಹುದ್ದೆಯ ವರ್ಗಾವಣೆಗಾಗಿಯೇ ದಲ್ಲಾಳಿಗಳು ಹುಟ್ಟಿಕೊಳ್ಳಲಿದ್ದಾರೆ ಎಂದು ಮೇಲ್ಮನೆಯಲ್ಲಿ ಆಡಳಿತ ಪಕ್ಷದ ಸದಸ್ಯರಿಂದಲೇ ಆಕ್ಷೇಪ ವ್ಯಕ್ತವಾಗಿದೆ. ಮಸೂದೆಗೆ ಪಕ್ಷಭೇದ ಮರೆತು ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದರು.
ವರ್ಗಾವಣೆ ಕೌನ್ಸೆಲಿಂಗ್ ಪ್ರಕ್ರಿಯೆ ಯಲ್ಲಿ ಸಾರ್ವಜನಿಕ ಹಿತಾಸಕ್ತಿಯಲ್ಲಿ ತುಂಬುವ ಅಗತ್ಯವಿರುವ ಒಂದು ಸ್ಥಳವನ್ನು ಯಾವೊಬ್ಬ ಶಿಕ್ಷಕನೂ ಆಯ್ಕೆ ಮಾಡಿಕೊಳ್ಳದೇ ಇದ್ದಾಗ ಸರಕಾರವೇ ಇದನ್ನು ಭರ್ತಿ ಮಾಡಲಿದೆ. ಕನಿಷ್ಠ ಸೇವಾ ವಧಿಯನ್ನು ಪೂರೈಸಿರುವ ಶಿಕ್ಷಕರನ್ನು ಈ ಹುದ್ದೆಗೆ ಷರತ್ತುಗಳನ್ನು ನಿಯಮಗಳ ಮೂಲಕ ವರ್ಗಾಯಿಸಲು ಸರಕಾರಕ್ಕೆ ಅಧಿಕಾರ ನೀಡಲಾಗಿದೆ. ಮಸೂದೆಗೆ ರಾಜ್ಯಪಾಲರ ಅಂಕಿತ ದೊರೆಯುವುದೇ ಎಂಬ ಅನುಮಾನವಿದೆ.