Advertisement
ತಾಲೂಕಿನ ಅಗಲಗುರ್ಕಿಯ ಬಿ.ಜಿ.ಎಸ್ ವಿಜ್ಞಾನ ಅಕಾಡೆಮಿಯಲ್ಲಿ ಪ್ರತಿಭಾವಂತರಿಗೆ ಪುರಸ್ಕಾರ ವಿತರಣಾ ಸಮಾರಂಭದಲ್ಲಿ ಭಾಗವಹಿಸಿದ ಸುಧ್ಧಿಗಾರರೊಂದಿಗೆ ಮಾತನಾಡಿದ ಸಚಿವರು ರಾಜ್ಯದಲ್ಲಿ 13 ಸಾವಿರ ಶಿಕ್ಷಕರ ಕೊರತೆಯಿದೆ ಅದನ್ನು ನೀಗಿಸುವ ಸಲುವಾಗಿ ಹಿಂದಿನ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು 10 ಸಾವಿರ ಶಿಕ್ಷಕರನ್ನು ನೇಮಕ ಮಾಡಲು ಪ್ರಕ್ರಿಯೆ ನಡೆಸಿದರು ಅದರಲ್ಲಿ 3000 ಶಿಕ್ಷಕರು ಅರ್ಹತೆ ಪಡೆದುಕೊಂಡಿದ್ದರು ಆದರೆ ಕೊರೊನಾ ಸೋಂಕಿನ ಪ್ರಭಾವದಿಂದ ಪ್ರಕ್ರಿಯೆ ಸ್ಥಗಿತಗೊಂಡಿತ್ತು ಪ್ರಸಕ್ತ ಸಾಲಿನಲ್ಲಿ 5 ಸಾವಿರ ಶಿಕ್ಷಕರನ್ನು ನೇಮಕ ಮಾಡಲು ಸಿದ್ದತೆಗಳನ್ನು ಮಾಡಿಕೊಂಡಿದ್ದೇವೆ ಟಿಇಟಿ-ಸಿಇಟಿ ಪರೀಕ್ಷೆಗಳ ಮೂಲಕ ನೇಮಕಾತಿ ಮಾಡಿಕೊಳ್ಳುತ್ತೇವೆ ಎಂದರು.
Related Articles
Advertisement
ಕಾಂಗ್ರೆಸಿಗರಿಗೆ ತಪ್ಪುಗ್ರಹಿಕೆ: ದೇಶದಲ್ಲಿ ಹೊಸ ಶಿಕ್ಷಣ ನೀತಿಯನ್ನು ತರಾತುರಿಯಲ್ಲಿ ಜಾರಿಗೊಳಿಸುತ್ತಿಲ್ಲ 2014 ರಿಂದ 2020 ರವರೆಗೆ ಸಾರ್ವತ್ರಿಕವಾಗಿ ಚರ್ಚೆಗಳನ್ನು ನಡೆಸಿ ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಅದನ್ನು ಮಂಡಿಸಿ ಅನುಮೋದನೆ ಪಡೆದುಕೊಂಡ ನಂತರ ಅನುಷ್ಠಾನಗೊಳಿಸಲು ಕ್ರಮ ಕೈಗೊಂಡಿದ್ದೇವೆ ಎಂದ ಸಚಿವರು ಹೊಸ ಶಿಕ್ಷಣ ನೀತಿಯನ್ನು ಜಾರಿಗೊಳಿಸುವ ಮುನ್ನ ದೇಶಾದ್ಯಂತ ಅನೇಕ ಸಮಾವೇಶಗಳು, ಚರ್ಚೆಗಳು, ಸೆಮೀನಾರ್‍ಗಳು ಆಯೋಜಿಸಿ ಶಿಕ್ಷಣ ತಜ್ಞರೊಂದಿಗೆ ಸಮಾಲೋಚನೆ ನಡೆಸಿದ್ದೇವೆ ಈ ವಿಚಾರದಲ್ಲಿ ವಿರೋಧ ಪಕ್ಷ ಕಾಂಗ್ರೆಸ್‍ನವರಿಗೆ ತಪ್ಪು ಗ್ರಹಿಕೆಯಾಗಿದೆ ಅದನ್ನು ಮುಂದಿನ ದಿನಗಳಲ್ಲಿ ಸರಿಹೋಗುತ್ತದೆ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದರು.
ಹಿಂದಿ ಭಾಷೆ ಹೇರಿಕೆ ವಿಚಾರದಲ್ಲಿ ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು ದೇಶದಲ್ಲಿ ಮಾತೃಭಾಷೆಯಲ್ಲಿ ಶಿಕ್ಷಣ ನೀಡುವ ನಿಟ್ಟಿನಲ್ಲಿ ಪ್ರಯತ್ನಗಳು ನಡೆದಿವೆ ಈ ಮಧ್ಯೆ ಮಹಾತ್ಮ ಗಾಂದೀಜಿಯವರು ಮತ್ತು ಶಿಕ್ಷಣ ತಜ್ಞರು ಸ್ವದೇಶಿ ಸ್ವಾವಲಂಭಿ ಶಿಕ್ಷಣ ನೀಡಬೇಕೆಂದು ಹೇಳಿದರು ಕೈಗೆ ಶಿಕ್ಷಣ ಕೊಡಬೇಕು, ಬುದ್ದಿಗೆ ಶಿಕ್ಷಣ ಕೊಡಬೇಕು, ಹೃದಯಕ್ಕೆ ಶಿಕ್ಷಣ ಕೊಡಬೇಕು ಎಂಬ ನಿಟ್ಟಿನಲ್ಲಿ ಪ್ರಧಾನಮಂತ್ರಿ ನರೇಂದ್ರಮೋದಿ ನೇತೃತ್ವದ ಸರ್ಕಾರ ಪ್ರಯತ್ನ ಮಾಡುತ್ತಿದೆ ಎಂದು ಸಚಿವರು ವಿವರಿಸಿದರು.
ಈ ಸಂದರ್ಭದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಯರಾಮರೆಡ್ಡಿ, ಕ್ಷೇತ್ರ ಶಿಕ್ಷಣಾಧಿಕಾರಿ ಶೋಭ,ಜಿಲ್ಲಾ ಬಿಜೆಪಿ ಯುವಮೋರ್ಚಾದ ಅಧ್ಯಕ್ಷ ಅಭಿಷೇಕ್ ಮತ್ತಿತರರು ಉಪಸ್ಥಿತರಿದ್ದರು.