Advertisement

ಥಾಣೆ ಶ್ರೀ ಆದಿಶಕ್ತಿ ಕನ್ನಡ ಶಾಲೆ: ಶಿಕ್ಷಕರ ದಿನಾಚರಣೆ

02:43 PM Sep 12, 2021 | Team Udayavani |

ಥಾಣೆ : ಶ್ರೀ ಆದಿಶಕ್ತಿ ಕನ್ನಡ ಸಂಘ ಥಾಣೆ ಸಂಚಾಲಕತ್ವದ ಶ್ರೀ ಆದಿಶಕ್ತಿ ಕನ್ನಡ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಸೆ. 5ರಂದು ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಿತು.

Advertisement

ಅಧ್ಯಕ್ಷತೆ ವಹಿಸಿದ್ದ ಶ್ರೀ ಆದಿಶಕ್ತಿ ಕನ್ನಡ ಸಂಘ ಮತ್ತು ಶಾಲೆಯ ಅಧ್ಯಕ್ಷ ಭಾಸ್ಕರ್‌ ಎಂ. ಶೆಟ್ಟಿ ಅವರು ಡಾ| ರಾಧಾಕೃಷ್ಣನ್‌ ಅವರ ಬದುಕಿನ ಬಗ್ಗೆ ಮಾಹಿತಿ ನೀಡಿ ಶಿಕ್ಷಕರ ಮಹತ್ತರ ಜವಾಬ್ದಾರಿಯ ಬಗ್ಗೆ ತಿಳಿಸಿದರು. ಶಿಕ್ಷಕರು ಶಿಕ್ಷಕರ ದಿನಾಚರಣೆ ಗಳನ್ನು ರೂಪಿಸುವ ಶಿಲ್ಪಿಗಳಾಗ ಬೇಕು ಎಂದರು.

ಶ್ರೀ ಆದಿಶಕ್ತಿ ಕನ್ನಡ ಮಾಧ್ಯಮಿಕ ಶಾಲೆಯ ಮುಖ್ಯ ಶಿಕ್ಷಕಿ ವಿಮಲಾ ಕರ್ಕೇರ ಸ್ವಾಗತಿಸಿ ಡಾ| ರಾಧಾಕೃಷ್ಣನ್‌ ಅವರ ಭಾವಚಿತ್ರಕ್ಕೆ ಹಾರಾರ್ಪಣೆಗೈದು ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಇದನ್ನೂ ಓದಿ:ಹೆಚ್ಚಿದ ಮಳೆ ಪ್ರಮಾಣ : ಚಾರ್ಮಾಡಿ ಘಾಟಿ 7ನೇ ತಿರುವಿನಲ್ಲಿ ರಸ್ತೆಗೆ ಉರುಳಿ ಬಿದ್ದ ಬಂಡೆ

ಸಂಘದ ಕಾರ್ಯದರ್ಶಿ ವಾದಿರಾಜ್‌ ಶೆಟ್ಟಿ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ನಳಿನಾ ಶೆಟ್ಟಿ ಉಪಸ್ಥಿತರಿದ್ದರು. ಶ್ರೀ ಆದಿಶಕ್ತಿ ಕನ್ನಡ ಸಂಘದ ವತಿಯಿಂದ ಶಿಕ್ಷಕರು ಮತ್ತು ಶಿಕ್ಷಕೇತರ ಸಿಬಂದಿಯನ್ನು ಗೌರವಿಸಲಾಯಿತು.

Advertisement

ಸರ್ವ ಶಿಕ್ಷಕರ ವತಿಯಿಂದ ಮಾಧ್ಯಮಿಕ ಶಾಲಾ ಸಹ ಶಿಕ್ಷಕ ವೆಂಕಟರಮಣ ಶೆಣೈ ಅವರು ಸಂಘದ ಪದಾಧಿಕಾರಿಗಳಿಗೆ ಕೃತಜ್ಞತೆ ಸಲ್ಲಿಸಿದರು. ಆನ್‌ಲೈನ್‌ ಮೂಲಕ ವಿದ್ಯಾರ್ಥಿಗಳು ಶಿಕ್ಷಕರನ್ನು ಅಭಿನಂದನ ಗೀತೆಯೊಂದಿಗೆ ಅಭಿನಂದಿಸಿದರು. ವಿದ್ಯಾರ್ಥಿಗಳಿಂದ ಆನ್‌ಲೈನ್‌ ಮೂಲಕ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಸಭೆಯಲ್ಲಿ ಕಾರ್ಯಕಾರಿ ಸಮಿತಿಯ ಸದಸ್ಯೆ ಪ್ರಿಯಾ ಶೆಟ್ಟಿ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಪ್ರಮೋದಾ ಮಾಡಾ ನಿರ್ವಹಿಸಿದರು. ಮಮತಾ ಶೆಟ್ಟಿ ವಂದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next