Advertisement

ಶಿಕ್ಷಕರು ದೇವರಿದ್ದಂತೆ: ಪಾಟೀಲ

05:53 PM Sep 08, 2020 | Suhan S |

ರಾಯಚೂರು: ಸಮಾಜ ಹಾಗೂ ದೇಶದ ಏಳಿಗೆಗೆ ಕಾರಣೀಭೂತರಾದ ಶಿಕ್ಷಕರೇ ಇಂದಿನ ದೇವರಿದ್ದಂತೆ. ನಾವು ದೇವರನ್ನು ನೋಡಿಲ್ಲ, ಬದಲಿಗೆ ಶಿಕ್ಷಕರಲ್ಲಿ ದೇವರನ್ನು ಕಾಣುತ್ತಿದ್ದೇವೆ ಎಂದು ನಗರ ಶಾಸಕ ಡಾ| ಶಿವರಾಜ ಪಾಟೀಲ ಅಭಿಪ್ರಾಯಪಟ್ಟರು.

Advertisement

ಜಿಲ್ಲಾಡಳಿತ, ಜಿಪಂ ಮತ್ತು ಸಾರ್ವಜನಿಕಶಿಕ್ಷಣ ಇಲಾಖೆ ಸಹಯೋಗದಲ್ಲಿ ಸೋಮವಾರ ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಆಯೋಜಿಸಿದ್ದ ಜಿಲ್ಲಾ ಮತ್ತು ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಶಿಕ್ಷಣದಿಂದಲೇ ಪ್ರಗತಿ ಸಾಧ್ಯ. ಜಿಲ್ಲೆಯಶೈಕ್ಷಣಿಕ ಅಭಿವೃದ್ಧಿಗೆ ಸರ್ಕಾರ ಸಾಕಷ್ಟು ಸೌಲಭ್ಯ ಒದಗಿಸುತ್ತಿದೆ. ಇತ್ತೀಚಿನ ದಿನಗಳಲ್ಲಿ ಶೈಕ್ಷಣಿಕವಾಗಿಜಿಲ್ಲೆ ಸಾಕಷ್ಟು ಉತ್ತಮ ಸಾಧನೆ ಮಾಡುತ್ತಿದೆ. ಇದಕ್ಕೆ ಕಾರಣ ಶಿಕ್ಷಕರ ಶ್ರಮ. ಮುಂದಿನದಿನಗಳಲ್ಲಿ ಜಿಲ್ಲೆ ಶೈಕ್ಷಣಿಕವಾಗಿ ಪ್ರಗತಿಯತ್ತ ದಾಪುಗಾಲು ಇಡಲಿದೆ ಎಂದರು.

ಸರ್ಕಾರ ಈ ಭಾಗದಲ್ಲಿ ವಿಶ್ವವಿದ್ಯಾಲಯಸ್ಥಾಪನೆ, ವೃತ್ತಿಪರ ಕಾಲೇಜುಗಳು ಸೇರಿದಂತೆ ಶೈಕ್ಷಣಿಕ ಪ್ರಗತಿಗೆ ಹಲವಾರು ಕಾರ್ಯಕ್ರಮ ರೂಪಿಸುತ್ತಿದೆ. ಕಾಲಕ್ಕೆ ತಕ್ಕಂತೆ ಶಿಕ್ಷಣದರೂಪುರೇಷೆ ಬದಲಾಗುತ್ತಿವೆ. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಿಂದ ಶಾಲೆಗಳಿಗೆ 100 ಕೊಠಡಿ ನಿರ್ಮಿಸಲಾಗುವುದು. ಎಲ್ಲ ಶಾಲೆಗಳಲ್ಲೂ ಶೌಚಾಲಯ, ಅಡುಗೆ ಕೋಣೆ ನಿರ್ಮಿಸಲಾಗುವುದು, ಗುರುಭವನ ನಿರ್ಮಾಣ ಕಾರ್ಯ ಕೈಗೊಂಡಿದ್ದು, ಒಂದು ಕೋಟಿ ರೂ. ಅನುದಾನ ನೀಡಲಾಗುವುದು. ಬಿಇಡಿ ಮುಗಿಸಿದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಶೀಘ್ರ ಬಡ್ತಿ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಡಿಡಿಪಿಐ ಬಿ.ಎಚ್‌.ಗೋನಾಳ ಮಾತನಾಡಿ, ಶಿಕ್ಷಕರ ದಿನಾಚರಣೆಯಂದು ಅರ್ಹ ಶಿಕ್ಷಕರನ್ನು ಗುರುತಿಸಿ ಪ್ರಶಸ್ತಿ ನೀಡಲಾಗುತ್ತಿದೆ. ಮಹತ್ವಾಕಾಂಕ್ಷಿ  ಜಿಲ್ಲೆಗಳಲ್ಲಿ ಒಂದಾಗಿರುವ ಜಿಲ್ಲೆಯ ಶೈಕ್ಷಣಿಕ ಪ್ರಗತಿಗೆ ಎಲ್ಲ ಶಿಕ್ಷಕರು ಶ್ರಮಿಸಬೇಕು. ಶಿಕ್ಷಣದ ಅಭಿವೃದ್ಧಿಗೆ ಶಾಸಕರು, ಜಿಲ್ಲಾ ಧಿಕಾರಿಗಳು, ಜಿಪಂ ಸಿಇಒ ಬೆಂಬಲವಾಗಿ ನಿಂತಿದ್ದಾರೆ, ಶಿಕ್ಷಕರು ಸಹ ಶೈಕ್ಷಣಿಕ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ ಎಂದರು.

Advertisement

ಆರ್‌ಡಿಎ ಅಧ್ಯಕ್ಷ ಯಾಪಚೆಟ್ಟು ಗೋಪಾಲರೆಡ್ಡಿ, ಬಿಇಒ ಚಂದ್ರಶೇಖರದೊಡ್ಡಮನಿ, ಮುಖಂಡರಾದ ರವೀಂದ್ರ ಜಲ್ದಾರ್‌, ಕಡಿಗೋಳ ಆಂಜನೇಯ, ಶ್ರೀನಿವಾಸ ರೆಡ್ಡಿ, ಪಿ. ಶ್ರೀನಿವಾಸ ನಾಯಕ, ಆರ್‌ಡಿಎ ಸದಸ್ಯ ಶೇಖರ ವಾರದ, ಸೇರಿದಂತೆ ಇತರರಿದ್ದರು. ಜಿಲ್ಲಾ ಮತ್ತು ರಾಯಚೂರು ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲೆ ವಿಭಾಗದ ಅತ್ಯುತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next