Advertisement

ಶಿಕ್ಷಕರೇ ಸಮಾಜದ ಅಭಿವೃದ್ಧಿ ರೂವಾರಿಗಳು

01:35 PM Sep 06, 2020 | Suhan S |

ಹಾಸನ: ವಿದ್ಯಾರ್ಥಿಗಳನ್ನು ತಿದ್ದಿ, ಬುದ್ಧಿ ಹೇಳಿ ಉತ್ತಮ ಮಾರ್ಗದರ್ಶನ ನೀಡಿ, ತಮ್ಮಲ್ಲಿರುವ ಜ್ಞಾನವನ್ನು ಧಾರೆ ಎರೆದು ಭವಿಷ್ಯದ ಜವಾಬ್ದಾರಿಯುತ ಪ್ರಜೆಗಳನ್ನು ರೂಪಿಸುವ ಶಿಕ್ಷಕರೇ ಸಮಾಜದ ಅಭಿವೃದ್ಧಿಯ ರೂವಾರಿಗಳು ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಅವರು ಅಭಿಪ್ರಾಯಪಟ್ಟರು.

Advertisement

ಜಿಲ್ಲಾಡಳಿತ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ನಗರದ ಎಸ್‌.ಆರ್‌.ಎಸ್‌. ಪ್ರಜ್ಞಾ ಶಾಲೆಯಲ್ಲಿ ಏರ್ಪಡಿಸಿದ್ದ ಡಾ. ಸರ್ವಪಲ್ಲಿ ರಾಧಕೃಷ್ಣನ್‌ ಅವರ ಜನ್ಮ ದಿನಾಚರಣೆ ಹಾಗೂ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ದೇಶಕ್ಕೆ ಉತ್ತಮ ಕೊಡುಗೆ: ಶ್ರೇಷ್ಠ ಶಿಕ್ಷಣ ತಜ್ಞರು, ಆಧ್ಯಾತ್ಮಿಕ ಚಿಂತಕರು, ತತ್ವಜ್ಞಾನಿಗಳೂ ಉತ್ತಮ ಆಡಳಿತಗಾರರೂ ಆದ ಡಾ. ಸರ್ವಪಲ್ಲಿ ರಾಧಕೃಷ್ಣನ್‌ ಅವರು ಭಾರತದ ಎರಡನೇ ರಾಷ್ಟ್ರಪತಿಯಾಗಿ ಕಾರ್ಯ ನಿರ್ವಹಿಸಿದರು. ರಾಷ್ಟ್ರಪತಿಗಳ ಅವಧಿ ಮುಗಿದ ನಂತರ ಪ್ರಾಧ್ಯಾಪಕರಾಗಿ ಮುಂದುವರೆಯುವ ಮೂಲಕ ದೇಶಕ್ಕೆ ಉತ್ತಮ ಕೊಡುಗೆಯನ್ನು ನೀಡಿ ಮಹಾನ್‌ ನಾಯಕರಾಗಿ ರೂಪುಗೊಂಡಿದ್ದರು ಎಂದು ಸ್ಮರಿಸಿದರು.

ಶಿಕ್ಷಕರಿಗೆ ಅಭಿನಂದನೆ: ಜಿಲ್ಲೆಯಲ್ಲಿಯ ಕೋವಿಡ್ ಭೀತಿಯ ನಡುವೆಯೂ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ವಿಶೇಷ ಕಾಳಜಿ ವಹಿಸಿ ಶಿಕ್ಷಣ ನೀಡುವ ಮೂಲಕ ಜಿಲ್ಲೆಗೆ ಉತ್ತಮ ಫ‌ಲಿತಾಂಶ ತಂದು ಕೊಟ್ಟ ಎಲ್ಲ ಶಿಕ್ಷಕರನ್ನು ಅಭಿನಂದಿಸಿದರು. ಮುಂದಿನ ದಿನಗಳಲ್ಲಿ ಜಿಲ್ಲೆಯು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫ‌ಲಿತಾಂಶದಲ್ಲಿ ರಾಜ್ಯದಲ್ಲೇ ಮೊದಲ ಸ್ಥಾನ ಪಡೆಯಲು ಶ್ರಮಿಸಬೇಕು ಎಂದು ಮನವಿ ಮಾಡಿದರು.

ಶಿಕ್ಷಕರಿಗೆ ಶುಭಾಶಯ: ಶಾಸಕ ಪ್ರೀತಂ ಜೆ. ಗೌಡ ಮಾತಾನಾಡಿ, ಒಂದು ಮಗುವಿಗೆ ಜ್ಞಾನ ನೀಡಿಸಮಾಜಮುಖೀಯಾಗಿ ಯೋಚನೆ ಮಾಡುವಂತಹ ಬುದ್ಧಿಯನ್ನು ಕಲಿಸಿ, ಒಬ್ಬ ಪರಿಪೂರ್ಣ ವ್ಯಕ್ತಿಯನ್ನಾಗಿ ಮಾಡುವ ಶಿಕ್ಷಕರು ಸಮಾಜದ ಅಧಾರ ಎಂದು ಬಣ್ಣಿಸಿ ಶಿಕ್ಷಕರಿಗೆ ಶುಭಾಶಯಗಳನ್ನು ಅರ್ಪಿಸಿದರು. ಶಿಕ್ಷಕರ ಕೊಡುಗೆ ಅಪಾರ: ಲಕ್ಷಾಂತರ ಶಿಕ್ಷಕರು ತಮ್ಮ ಆಸೆ, ಆಕಾಂಕ್ಷೆಗಳನ್ನು ಬದಿಗಿಟ್ಟು, ವಿದ್ಯಾರ್ಥಿಗಳಜೀವನವನ್ನು ರೂಪಿಸಲು ಹಾಗೂ ವಿದ್ಯಾರ್ಥಿಗಳ ಬೆಳವಣಿಗೆಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದಾರೆ. ತಮ್ಮ ಸಂಪೂರ್ಣ ಜ್ಞಾನವನ್ನು ವಿದ್ಯಾರ್ಥಿಗಳಿಗೆ ಧಾರೆ ಎರೆಯುವ ಮೂಲಕ ಸಮಾಜದಲ್ಲಿ ಉತ್ತಮ ಪ್ರಜೆಯಾಗುವಂತೆ ದಾರಿ ತೋರಿಸುವ ಕಾರ್ಯವನ್ನು ಶಿಕ್ಷಕರು ಮಾಡುತ್ತಿದ್ದಾರೆ ಎಂದು ತಿಳಿಸಿದರು.

ವಿಧಾನ ಪರಿಷತ್‌ ಸದಸ್ಯ ಎಂ.ಎ.ಗೋಪಾಲಸ್ವಾಮಿ, ಜಿಲ್ಲಾಧಿಕಾರಿ ಆರ್‌.ಗಿರೀಶ್‌, ಜಿಪಂ ಸಿಇಒ ಬಿ.ಎ. ಪರಮೇಶ್‌, ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವರಾಂ ಬಾಬು, ಉಪ ವಿಭಾಗಾಧಿಕಾರಿ ಡಾ.ನವೀನ್‌ ಭಟ್‌, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೆ.ಎಸ್‌. ಪ್ರಕಾಶ್‌, ಹಾಸನ ತಾಪಂ ಅಧ್ಯಕ್ಷೆ ಜ್ಯೋತಿ ಅಣ್ಣಪ್ಪ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಈ. ಕೃಷ್ಣೇಗೌಡ ಹಾಗೂ ವಿವಿಧ ಶಾಲೆಯ ಶಿಕ್ಷಕರು ಹಾಜರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next