Advertisement

ಅ.28ಕ್ಕೆ ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆ

10:46 AM Oct 01, 2020 | sudhir |

ದೇವನಹಳ್ಳಿ: ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಅ.28 ರಂದು ಚುನಾವಣೆ ನಡೆಯಲಿದ್ದು, ನ.5 ರವರೆಗೆ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ ಎಂದು ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣಾಧಿಕಾರಿ ನವೀನ್‌ ರಾಜ್‌ಸಿಂಗ್‌ ತಿಳಿಸಿದ್ದಾರೆ.

Advertisement

ಇಂದು ಅಧಿಸೂಚನೆ ಹೊರಡಿಸಲಾಗಿದ್ದು, ಅ.8 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಅ.9ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಉಮೇದುವಾರಿಕೆ ಹಿಂಪಡೆಯಲು ಅ.12ರಂದು ಕೊನೆಯ ದಿನಾಂಕವಾಗಿದ್ದು, ಅ.28ರಂದು ಬೆಳಗ್ಗೆ
8 ಗಂಟೆಯಿಂದ ಸಂಜೆ 5 ಗಂಟೆಯ ವರೆಗೆ ಮತದಾನದ ನಡೆಯಲಿದೆ. ನ.2 ರಂದು ಮತಗಳ ಎಣಿಕೆ ಕಾರ್ಯನಡೆಯಲಿದ್ದು, ಚುನಾವಣಾ ಕಾರ್ಯ ನವೆಂಬರ್‌ 5 ರಂದು ಮುಕ್ತಾಯಗೊಳ್ಳಲಿದೆ. ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ, ಬೆಂಗಳೂರು
ನಗರ, ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲಾ ಕ್ಷೇತದ್ರ ವ್ಯಾಪ್ತಿಯಲ್ಲಿಚುನಾವಣೆ ನಡೆಯಲಿದೆ.

Advertisement

Udayavani is now on Telegram. Click here to join our channel and stay updated with the latest news.

Next