ವಿಧಾನ ಪರಿಷತ್ ಸದಸ್ಯರು ಪಕ್ಷಾತೀತವಾಗಿ ನಡೆಸುತ್ತಿರುವ ಅಹೋ ರಾತ್ರಿ ಧರಣಿ ಎರಡನೇ ದಿನಕ್ಕೆ ಕಾಲಿಟ್ಟಿದೆ.
Advertisement
ವಿಧಾನಸೌಧ-ವಿಕಾಸ ಸೌಧ ನಡುವಿನ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಧರಣಿ ನಡೆಸುತ್ತಿರುವ ವಿಧಾನ ಪರಿಷತ್ಸದಸ್ಯರು, ಮುಖ್ಯ ಮಂತ್ರಿಯವರು ಖುದ್ದು ಸಭೆ ಆಶ್ವಾಸನೆ ಕೊಡಿಸುವವರೆಗೂ ಧರಣಿ ನಿಲ್ಲುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.
ಸೇಠ್ ಗುರುವಾರ ಬೆಳಗ್ಗೆ ಧರಣಿ ಸ್ಥಳಕ್ಕೆ ಭೇಟಿ ನೀಡಿದ್ದರಾದರೂ ಪ್ರಯೋಜನವಾಗಲಿಲ್ಲ.ಬದಲಿಗೆ, ತನ್ವೀರ್ ಸೇಠ್ ಧರಣಿ ನಿಲ್ಲಿಸುವಂತೆ ಧಮ್ಕಿ ಹಾಕಿದ್ದಾರೆ.ಏನಾದರೂ ಮಾಡಿ ಕೊಳ್ಳಿ ಎಂದು ಬೇಜವಾಬ್ದಾರಿಯಾಗಿ
ಮಾತನಾಡಿದ್ದಾರೆ. ಲಕ್ಷಾಂತರ ಶಿಕ್ಷಕರು ಹಾಗೂ ವಿದ್ಯಾರ್ಥಿ ಸಮುದಾಯದ ಪ್ರತಿ ನಿಧಿಗಳಾದ ನಾವು ನ್ಯಾಯಕ್ಕಾಗಿ ಧರಣಿ ನಡೆಸುತ್ತಿದ್ದರೆ ಸ್ಪಂದನೆ ಮಾಡುವ ಬದಲು ಬೆದರಿಕೆ ತಂತ್ರ ಅನುಸರಿಸುತ್ತಿದ್ದಾರೆ ಎಂದು ಧರಣಿ ನಿರತರು ಆಕ್ರೋಶ ವ್ಯಕ್ತಪಡಿಸಿದರು. ಗುರುವಾರ ಸಂಜೆ ಸುದ್ದಿಗೋಷ್ಠಿ ನಡೆಸಿದ ಸದಸ್ಯರು, ಬಸವರಾಜ ಹೊರಟ್ಟಿಯಂತಹ ಹಿರಿಯರು ಧರಣಿ ಕುಳಿತಿರುವಾಗ ಸಚಿವರ ವರ್ತನೆ ಸರಿಯಲ್ಲ. ಮುಖ್ಯಮಂತ್ರಿಯವರು ತಕ್ಷಣ ಸಂಪುಟದಿಂದ ತನ್ವೀರ್ ಸೇಠ್ ಕೈ ಬಿಡಬೇಕು ಎಂದು ಆಗ್ರಹಿಸಿದರು.
Related Articles
– ತನ್ವೀರ್ ಸೇಠ್ ಶಿಕ್ಷಣ ಸಚಿವ
Advertisement