Advertisement

ಅಧ್ಯಾಪಕರ ಜ್ಞಾನ ಬಲವರ್ಧನೆ ಅಗತ್ಯ

11:55 AM Mar 17, 2017 | |

ಬೆಂಗಳೂರು: ಶಿಕ್ಷಣ ವ್ಯವಸ್ಥೆಯಲ್ಲಿ ಅಧ್ಯಾಪಕರ ಜ್ಞಾನ ಬಲವರ್ಧನೆಗೆ ಹಲವು ರೀತಿಯ ತರಬೇತಿಗಳ ಅವಶ್ಯಕತೆ ಇದೆ ಎಂದು ಮಾದರ ಚೆನ್ನಯ್ಯ ಪೀಠದ ಬಸವಮೂರ್ತಿ ಸ್ವಾಮೀಜಿ ಹೇಳಿದ್ದಾರೆ.

Advertisement

ಬೆಂಗಳೂರು ವಿಶ್ವವಿದ್ಯಾಲಯದ ಸಮಾಜಶಾಸ್ತ್ರ ವಿಭಾಗ ಗುರುವಾರ ಆಯೋಜಿಸಿದ್ದ ಎರಡು ವಾರಗಳ ಬಲಸಂವರ್ಧನೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕಾಲಕ್ಕೆ ಅನುಗುಣವಾಗಿ ವಿದ್ಯಾರ್ಥಿಗಳಂತೆ ಅಧ್ಯಾಪಕರು ಕೂಡ ಕಲಿಕೆಯನ್ನು ನಿರಂತವಾಗಿ ಮುಂದುವರಿಸಿದಾಗ ಮಾತ್ರ ವಿದ್ಯಾರ್ಥಿಗಳಿಗೆ ಏನು ಅಗತ್ಯವಿದೆ ಎಂಬುದನ್ನು ಅರಿಯಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು. 

ವಿಶ್ರಾಂತ ನ್ಯಾಯಮೂರ್ತಿ ಡಾ.ರಾಮಜೋಯಿಸ್‌, ಭಾರತೀಯ ಸಂವಿಧಾನದಲ್ಲಿ ಶಿಕ್ಷಣಕ್ಕೆ ವಿಶೇಷವಾದ ಪ್ರಾಶಸ್ತ್ಯ ನೀಡಲಾಗಿದೆ. ಆದರೂ ಭಾರತೀಯ ವಿಶ್ವವಿದ್ಯಾಲಯಗಳು ವಿಶ್ವದ ಪ್ರಮುಖ 10 ವಿಶ್ವವಿದ್ಯಾಲಯಗಳಲ್ಲಿ ಸ್ಥಾನ ಪಡೆಯದಿರುವುದು ವಿಷಾದನೀಯ. ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಜೀವನದ ಹೋರಾಟವನ್ನು ತಿಳಿದು ಜ್ಞಾನ ಹೆಚ್ಚಿಸಿಕೊಳ್ಳಲು ಮುಂದಾಗಬೇಕು ಎಂದು ಸಲಹೆ ನೀಡಿದರು. 

ಬೆಂಗಳೂರು ವಿವಿ ಕುಲ ಸಚಿವ ಪ್ರೊ.ಕೆ.ಎನ್‌.ನಿಂಗೇಗೌಡ, ರಾಜ್ಯ ಬಿಜೆಪಿ ಕಾರ್ಯದರ್ಶಿ ರವಿಕುಮಾರ್‌, ಸಿಂಡಿಕೇಟ್‌ ಸದಸ್ಯ ಶಿವಣ್ಣ , ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಬಿ.ಸಿ.ಮೈಲಾರಪ್ಪ, ಮಹಿಳಾ ಅಧ್ಯಯನ ವಿಭಾಗ ಸಹಾಯಕ ಪ್ರಾಧ್ಯಾಪಕ ಡಾ.ಸಿ.ಡಿ.ವೆಂಕಟೇಶ್‌  ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next