Advertisement
ಅವರು ರವಿವಾರ ಬ್ರಹ್ಮಾವರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ಸಭಾ ಭವನದಲ್ಲಿ ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘದ ಆಶ್ರಯದಲ್ಲಿ ನಡೆದ ಪಿಂಚಣಿ ವಂಚಿತ ನೌಕರರ ಉಡುಪಿ ಜಿಲ್ಲಾ ಸಮಾವೇಶದಲ್ಲಿ ಮಾತನಾಡಿದರು. ಮಕ್ಕಳ ಭವಿಷ್ಯದ ಬಗ್ಗೆ ಯಾವಾಗಲೂ ಚಿಂತಿಸುವ ಅಧ್ಯಾಪಕರು ತಮ್ಮ ಭವಿಷ್ಯದ ಭದ್ರತೆಯನ್ನು ಕಳೆದುಕೊಂಡಿದ್ದಾರೆ. ಸರ್ಕಾರ 2006ರ ಜೂನ್ ಅನಂತರ ಅನುದಾನಿತ ಶಿಕ್ಷಣ ಸಂಸ್ಥೆಯಲ್ಲಿ ದುಡಿಯುತ್ತಿರುವ ಅಧ್ಯಾಪಕರಿಗೆ ಪಿಂಚಣಿಯನ್ನು ನೀಡುತ್ತಿಲ್ಲ. ಕಾರ್ಮಿಕರಿಗೆ ಸಿಗುವ ಪಿಎಫ್, ಇಎಸ್‌ಐ ಸೌಲಭ್ಯ ಕೂಡಾ ದೊರಕುತ್ತಿಲ್ಲ. ನಿವೃತ್ತಿಯ ಸಮಯದಲ್ಲಿಯೂ ಆ ತಿಂಗಳ ವೇತನದೊಂದಿಗೆ ಮನೆಗೆ ತೆರಳಬೇಕಾದ ಪರಿಸ್ಥಿತಿ ತಂದೊಡ್ಡಿದೆ. ಭವಿಷ್ಯಕ್ಕೆ ಯಾವುದೇ ಭದ್ರತೆಯನ್ನು ನೀಡದ ಸರ್ಕಾರದ ಈ ಕ್ರಮಕ್ಕೆ ಎಲ್ಲರೂ ಒಂದಾಗಿ ಹೋರಾಟ ನಡೆಸಿ ಈ ಸೌಲಭ್ಯಗಳನ್ನು ಪಡೆದುಕೊಳ್ಳಬೇಕಾಗಿದೆ ಎಂದರು.
Advertisement
ಶಿಕ್ಷಕರ ಮೇಲೆ ದಬ್ಟಾಳಿಕೆ ಹೆಚ್ಚಾಗುತ್ತಿದೆ
04:03 PM Mar 28, 2017 | Team Udayavani |
Advertisement
Udayavani is now on Telegram. Click here to join our channel and stay updated with the latest news.