Advertisement

ಬೇಡಿಕೆ ಈಡೇರಿಕೆಗೆ 9ರಂದು ಶಿಕ್ಷಕರ ಪ್ರತಿಭಟನೆ

11:40 AM Jul 03, 2019 | Team Udayavani |

ತುಮಕೂರು: ರಾಜ್ಯದ ಎಲ್ಲ ಸರ್ಕಾರಿ ಪ್ರಾಥಮಿಕ ಶಾಲೆಗಳು ಮತ್ತು ಶಿಕ್ಷಕರ ಉಳಿವಿಗೆ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ, ಜು.9ರಂದು ಶಿಕ್ಷಕರು ಪ್ರತಿಭಟನೆ ನಡೆಸಲು ನಿರ್ಧರಿಸಿ, ಬೃಹತ್‌ ರ್ಯಾಲಿ ಹಮ್ಮಿಕೊಂಡಿರುವುದಾಗಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಷಣ್ಮುಖಪ್ಪ ತಿಳಿಸಿದರು.

Advertisement

ಬಾಲಭವನ ಆವರಣದಲ್ಲಿರುವ ಸರ್ಕಾರಿ ಮಾಧ್ಯಮಿಕ ಶಾಲೆ ಕಚೇರಿಯಲ್ಲಿ ಮಂಗಳವಾರ ಏರ್ಪ ಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ವಿವಿಧ ಬೇಡಿಕೆ: ಹಾಲಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಪದವೀಧರ ಶಿಕ್ಷಕರೆಂದು ಪರಿಗಣಿಸಿ, ವೇತನ ಶ್ರೇಣಿ ನಿಗದಿಗೊಳಿಸಲು ನೂತನ ಪಿಂಚಣಿ ಯೋಜನೆ ರದ್ದು ಗೊಳಿಸಿ, ಹಳೆ ಪಿಂಚಣಿ ಮುಂದುವರಿಕೆ ಸೇರಿ ವಿವಿಧ ಪ್ರಮುಖ ಬೇಡಿಕೆ ಈಡೇರಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ಹಮ್ಮಿಕೊಂಡಿರುವುದಾಗಿ ತಿಳಿಸಿದರು.

ಸರ್ಕಾರ ಮತ್ತು ಶಿಕ್ಷಣ ಇಲಾಖೆ ಶಿಕ್ಷಕರನ್ನು ಕಡೆಗಣಿಸಿದ್ದು, ನಿಗದಿತ ಸಮಯದೊಳಗೆ ನಮ್ಮ ಬೇಡಿಕೆ ಈಡೇರದಿದ್ದಲ್ಲಿ ಉಗ್ರ ಪ್ರತಿಭಟನೆಗೆ ಸಿದ್ಧರಾಗಿ ದ್ದೇವೆ. ಸೆಪ್ಟೆಂಬರ್‌ 5ರಂದು ಶಿಕ್ಷಕರ ದಿನಾಚರಣೆ ಬಹಿಷ್ಕರಿಸಿ, ವಿಧಾನಸೌಧ ಚಲೋ ಹಮ್ಮಿಕೊಳ್ಳುವುದಾಗಿ ತಿಳಿಸಿದರು. ಜು.9ರಂದು ಶಾಲೆಗಳಿಗೆ ರಜೆ ಘೋಷಿಸಿ ಎಲ್ಲ ಶಿಕ್ಷಕರು ಸಾಂದರ್ಭಿಕ ರಜೆ ಹಾಕಿ ರ್ಯಾಲಿಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದ ಅವರು, ಬಾಲಭವನ ಆವರಣದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ಮಾಡಿ ಮನವಿ ಸಲ್ಲಿಸುವುದಾಗಿ ತಿಳಿಸಿದರು.

ಪೋಷಕರಲ್ಲಿನ ಆಂಗ್ಲಭಾಷಾ ವ್ಯಾಮೋಹ ಮತ್ತು ವಸತಿ ಶಾಲೆಗಳಲ್ಲಿ ಪ್ರವೇಶ ಸಿಗುವುದು ಪ್ರಾಥಮಿಕ ಶಾಲೆಗಳಲ್ಲಿ ವಿದ್ಯಾರ್ಥಿಗಳ ಕೊರತೆಯಾಗಿ ಮುಚ್ಚುವ ಸ್ಥಿತಿಗೆ ಬರುತ್ತಿದೆ ಎಂದರು. ಶಿಕ್ಷಕರಿಗೆ ಪಾಠ ಪ್ರವಚನಗ ಳಿಗಿಂತ ಇತರೆ ಕೆಲಸಗಳೇ ಹೆಚ್ಚಾಗಿದ್ದು, ವಿದ್ಯಾರ್ಥಿ ವೇತನಕ್ಕಾಗಿ ಆಧಾರ್‌ ಸಂಖ್ಯೆ ನೋಂದಾಯಿಸುವುದು, ಜನಗಣತಿ, ಬಿಸಿಯೂಟ ಯೋಜನೆ ಇತ್ಯಾದಿ ಕೆಲಸದ ಒತ್ತಡ ಹೆಚ್ಚಾಗಿದೆ ಎಂದು ತಿಳಿಸಿದರು. ಸಂಘದ ಪ್ರಧಾನ ಕಾರ್ಯದರ್ಶಿ ಪಿ.ಜಿ.ತಿಮ್ಮೇಗೌಡ, ಉಪಾಧ್ಯಕ್ಷ ಎಚ್.ಬಿ.ಸಿದ್ದರಾಮಣ್ಣ, ಖಜಾಂಚಿ ಶಿವಕುಮಾರ್‌, ಕಾರ್ಯದರ್ಶಿ ದಯಾನಂದ, ಸಂಘಟನಾ ಕಾರ್ಯ ದರ್ಶಿಗಳಾದ ರವಿಕುಮಾರ್‌, ಪುಷ್ಪಲತಾ ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next