ನವದೆಹಲಿ/ಕೋಲ್ಕತಾ: ಟಿಎಂಸಿ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರಿಗೆ ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಸಮನ್ಸ್ ನೀಡಿದೆ. ಶಿಕ್ಷಕರ ನೇಮಕ ವಿಚಾರದಲ್ಲಿ ಅಕ್ರಮವಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ಸಂಸ್ಥೆ ನಡೆಸುತ್ತಿರುವ ತನಿಖೆಗೆ ಅನ್ವಯವಾಗಿ ಈ ಕ್ರಮ ಕೈಗೊಳ್ಳಲಾಗಿದೆ.
ಇದಕ್ಕಿಂತ ಮೊದಲು ಜಾರಿ ನಿರ್ದೇಶನಾಲಯ ಮತ್ತು ಸಿಬಿಐ ಇದೇ ಪ್ರಕರಣದಲ್ಲಿ ಬ್ಯಾನರ್ಜಿ ಅವರನ್ನು ವಿಚಾರಣೆ ನಡೆಸಬಹುದು ಎಂದು ಕಲ್ಕತ್ತಾ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿತ್ತು.
ಮತ್ತೊಂದೆಡೆ, ಟಿಎಂಸಿಯ ವಕ್ತಾರ ಸಾಕೇತ್ ಗೋಖಲೆ ಅವರಿಗೆ ಜನರಿಂದ ಸಂಗ್ರಹಿಸಿದ್ದ ವಂತಿಗೆ ಮೊತ್ತ ದುರುಪಯೋಗ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಜಾಮೀನು ನೀಡಿದೆ.