Advertisement

ಶಿಕ್ಷಕರು ಆತ್ಮಸಾಕ್ಷಿಗೆ ಅನುಗುಣವಾಗಿ ಕಾರ್ಯ ನಿರ್ವಹಿಸಿ

12:25 PM Feb 11, 2018 | |

ಪಿರಿಯಾಪಟ್ಟಣ: ಶಿಕ್ಷಕರು ತಮ್ಮ ವೃತ್ತಿ ಧರ್ಮವನ್ನು ಗೌರವಿಸಿ ಆತ್ಮಸಾಕ್ಷಿಗೆ ಅನುಗುಣವಾಗಿ ಕೆಲಸನಿರ್ವಹಿಸಿದಾಗ ಮಾತ್ರ ಶೈಕ್ಷಣಿಕ ಪ್ರಗತಿ ಸಾಧ್ಯ ಎಂದು ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಚಿಕ್ಕಸ್ವಾಮಿ ತಿಳಿಸಿದರು. ಪಿರಿಯಾಪಟ್ಟಣ ತಾಲೂಕಿಗೆ ನೂತನವಾಗಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದರು.

Advertisement

ಗ್ರಾಮೀಣ ಪ್ರದೇಶಗಳಲ್ಲಿ ಖಾಸಗಿ ಶಾಲೆಯತ್ತ ಮುಖಮಾಡಿರುವ ಪೋಷಕರು ಮತ್ತು ಮಕ್ಕಳನ್ನು ಮನವೊಲಿಸಿ ಸರ್ಕಾರಿ ಶಾಲೆಗಳನ್ನು ಸೇರುವಂತೆ ಮಾಡಬೇಕು. ಮುಂದಿನ ಶೈಕ್ಷಣಿಕ ವರ್ಷದಿಂದ ಸರ್ಕಾರಿ ಶಾಲೆಗಳಲ್ಲಿಯೂ ಸಹ ಆಂಗ್ಲಮಾಧ್ಯಮದಲ್ಲಿ ಎಲ್‌ಕೆಜಿ, ಯೂಕೆಜಿ ಪ್ರಾರಂಭಿಸಲಾಗುವುದು. ಇದಕ್ಕೆ ಎಲ್ಲಾ ಶಿಕ್ಷಕರ ಮತ್ತು ಪೋಷಕರ ಸಹಕಾರ ಮುಖ್ಯವಾಗಿದೆ ಎಂದು ತಿಳಿಸಿದರು.

ಭವನ ಕೊರತೆ ನೀಗಿಸಿ: ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ಅಧ್ಯಕ್ಷ ದೇವರಾಜೇಗೌಡ ಮಾತನಾಡಿ, ಶಿಕ್ಷಕರು ಶಿಕ್ಷಣ ಇಲಾಖೆಯ ಪ್ರಗತಿಗೆ ಯಾವುದೇ ತೊಂದರೆ ಬಾರದಂತೆ ನಡೆದುಕೊಳ್ಳುತ್ತಿದ್ದೇವೆ. ತಾಲೂಕಿನಲ್ಲಿ ಶಿಕ್ಷಕರ ಸಮುದಾಯ ಭವನದ ಕೊರತೆ ಇದೆ. ಇದನ್ನು ನೀಗಿಸುವಲ್ಲಿ ಎಲ್ಲರೂ ಸಹಕಾರ ನೀಡಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಉಪಾಧ್ಯಕ್ಷ ಕಿರಣ್‌ರಘುಪತಿ ಮಾತನಾಡಿದರು. ಇಸಿಒರಾದ ಯೋಗರಾಜ್‌, ಹರೀಶ್‌, ದೈಹಿಶಿಕ್ಷಣ ಪರಿವೀಕ್ಷಕ ಕೆ.ಎಸ್‌.ಮಹಾದೇವಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷೆ ಗಾಯಿತ್ರಿ, ನಿರ್ದೇಶಕರಾದ ಎಚ್‌.ಕೆ.ಶಿವಮೂರ್ತಿ, ನಾಗಣ್ಣೇಗೌಡ, ಕುಮಾರಸ್ವಾಮಿ, ಖಜಾಂಜಿ ಮೂರ್ತಿ ಸೇರಿದಂತೆ ಮತ್ತಿತರರು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next