Advertisement

ನಕಲಿ ಎನ್‌ಜಿಒಗಳ ಪತ್ತೆಗೆ ತಂಡ ರಚನೆ

10:47 PM Dec 23, 2019 | Team Udayavani |

ವಿಜಯಪುರ: ರಾಜ್ಯದಲ್ಲಿ ನಕಲಿ ಎನ್‌ಜಿಒಗಳ ಪತ್ತೆಗೆ ವಿಶೇಷ ತಂಡ ರಚಿಸಿ ಸಮೀಕ್ಷೆ ನಡೆಸಲಾಗುತ್ತದೆ. ಇದಕ್ಕೆ ನಾನೇ ನೇತೃತ್ವ ವಹಿಸುತ್ತೇನೆ. ನಕಲಿ ಸಂಸ್ಥೆ ಎಂದು ಕಂಡುಬಂದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

Advertisement

ಸೋಮವಾರ ಸುದ್ದಿಗಾರರ ಜತೆ ಮಾತನಾಡಿ, ನನ್ನ ಇಲಾಖೆಯಲ್ಲಿ ಎಲ್ಲವೂ ಸುವ್ಯವಸ್ಥಿತ ವಾಗಿ ನಡೆಯಬೇಕು. ಇದಕ್ಕಾಗಿ ಅಧಿ ಕಾರಿಗಳೊಂದಿಗೆ ನಿರಂತರ ಸಭೆ ನಡೆಸುತ್ತಿದ್ದೇನೆ. ಅಂಗನವಾಡಿ ಗಳಲ್ಲಿ ದಾಖಲೆ ಪರಿಶೀಲನೆಗೆ ಬಯೋಮೆಟ್ರಿಕ್‌ ತರುವ ಯೋಚನೆಯಯಿದೆ.

ಸರ್ಕಾರ ಪ್ರತಿ ಅಂಗನವಾಡಿ ಕೇಂದ್ರವನ್ನು ಹೈಟೆಕ್‌ ರೂಪಕ್ಕೆ ಪರಿವರ್ತಿಸುವ ಕೆಲಸಕ್ಕೆ ಮುಂದಾಗಿದೆ ಎಂದರು. ರಾಜ್ಯದಲ್ಲಿ ಮಹಿಳೆಯರ ಮೇಲಿನ ಅತ್ಯಾಚಾರ, ದೌರ್ಜನ್ಯ ತಡೆಗೆ ವ್ಯವಸ್ಥಿತ ಕಾನೂನು ರಚಿಸಲು ಗೃಹ, ಶಿಕ್ಷಣ, ಆರೋಗ್ಯ ಇಲಾಖೆ ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಸಲಾಗಿದೆ.

ಜಿಲ್ಲಾ ಪ್ರವಾಸದ ಬಳಿಕ ಈ ಕುರಿತು ವಿಶೇಷ ಕಾನೂನು ರೂಪಿಸಲಾಗುವುದು. ಸಂಪುಟ ವಿಸ್ತರಣೆ ವೇಳೆ ಹಾಲಿ ಸಚಿವರ ಬದಲಾವಣೆ ಬಗ್ಗೆ ಮಾಹಿತಿ ಇಲ್ಲ. ಪಕ್ಷದ ಹೈಕಮಾಂಡ್‌ ಈ ಕುರಿತು ತೀರ್ಮಾ ನಿಸುತ್ತದೆ. ಆಕಾಂಕ್ಷಿಗಳು ಹೆಚ್ಚಾಗಿರುವ ಕಾರಣ ಸಿಎಂ ಮಾತುಕತೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳುತ್ತಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next