ಸಿಡ್ನಿ: ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾಗೆ ಈ ಬಾರಿ ಇಂಗ್ಲೆಂಡ್ ನಲ್ಲಿ ಟೆಸ್ಟ್ ಸರಣಿ ಜಯಿಸುವ ಉತ್ತಮ ಅವಕಾಶವಿದೆ ಎಂದು ಆಸ್ಟ್ರೇಲಿಯಾದ ಮಾಜಿ ನಾಯಕ ಇಯಾನ್ ಚಾಪೆಲ್ ಅಭಿಪ್ರಾಯ ಪಟ್ಟಿದ್ದಾರೆ.
ಭಾರತ ತಂಡವು ತನ್ನ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ 2021-2023 ಆವೃತ್ತಿಯನ್ನು ಆಗಸ್ಟ್‌ನಲ್ಲಿ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯೊಂದಿಗೆ ಆರಂಭಿಸಲಿದೆ. ನ್ಯೂಜಿಲೆಂಡ್ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಭಾರತ ಸೋತರೂ, ಚಾಪೆಲ್ ಭಾರತ ತಂಡದಲ್ಲಿ ಇಶಾಂತ್ ಶರ್ಮಾ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್ ಅವರನ್ನೊಳಗೊಂಡ ವೇಗದ ಬೌಲಿಂಗ್ ಪಡೆಯಿದೆ ಎಂದು ಇಯಾನ್ ಚಾಪೆಲ್ ಹೇಳಿದ್ದಾರೆ.
“ಇತ್ತೀಚಿನ ವರ್ಷಗಳಲ್ಲಿ ಭಾರತವು ವೇಗದ ಬೌಲಿಂಗ್ ತಜ್ಞ ತಂಡಗಳ ಶ್ರೇಣಿಯನ್ನು ಸೇರಿಕೊಂಡಿದೆ. ಇದರ ಪರಿಣಾಮವಾಗಿ, ಅವರು ಆಸ್ಟ್ರೇಲಿಯಾದಲ್ಲಿ ಯಶಸ್ಸನ್ನು ಕಂಡಿದ್ದಾರೆ, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ನ ಫೈನಲ್ ತಲುಪಿದ್ದಾರೆ. ಈಗ ಇಂಗ್ಲೆಂಡ್ ಅನ್ನು ಅವರ ಮನೆಯಂಗಳದಲ್ಲಿ ಸೋಲಿಸುವ ಉತ್ತಮ ಅವಕಾಶವನ್ನು ಹೊಂದಿದ್ದಾರೆ” ಎಂದು ಕ್ರೀಡಾ ವೆನ್ ಸೈಟ್ ಒಂದರಲ್ಲಿ ಚಾಪೆಲ್ ಬರೆದಿದ್ದಾರೆ.
ಇದನ್ನೂ ಓದಿ:ವಿಶ್ವ ಕ್ರಿಕೆಟ್ ನಲ್ಲಿ ಭಾರತೀಯರದ್ದೇ ಪಾರುಪತ್ಯ: ವಿಶ್ವ ದಾಖಲೆ ಬರೆದ ಮಿಥಾಲಿ ರಾಜ್
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ನಲ್ಲಿ ನ್ಯೂಜಿಲೆಂಡ್ ಗೆಲುವಿಗೆ ಅರ್ಹವಾಗಿತ್ತು. ಟಿಮ್ ಸೌಥಿ, ಟ್ರೆಂಟ್ ಬೌಲ್ಟ್, ನೀಲ್ ವ್ಯಾಗ್ನರ್, ಮತ್ತು ಕೈಲ್ ಜೇಮಿಸನ್ ಅವರು ಫೈನಲ್ ಪಂದ್ಯದಲ್ಲಿ ತಮ್ಮ ಸಾಮರ್ಥ್ಯ ನಿರೂಪಿಸಿದರು ಎಂದು ಇಯಾನ್ ಚಾಪೆಲ್ ಹೇಳಿದ್ದಾರೆ.