Advertisement

T20 World Cup ಗೆದ್ದು ತಾಯ್ನಾಡಿಗೆ ಮರಳಿದ ಟೀಮ್ ಇಂಡಿಯಾ… ಅದ್ಧೂರಿ ಸ್ವಾಗತ

08:57 AM Jul 04, 2024 | Team Udayavani |

ನವದೆಹಲಿ: ಟಿ20 ವಿಶ್ವಕಪ್ ಗೆದ್ದಿರುವ ಭಾರತ ಕ್ರಿಕೆಟ್ ಚಾಂಪಿಯನ್ಸ್ ತಂಡ ಇಂದು ಬೆಳಗ್ಗೆ ದೆಹಲಿಗೆ ಆಗಮಿಸಿದೆ. ಬೆಳಿಗ್ಗೆ 6:05 ರ ಸುಮಾರಿಗೆ ಟಿ20 ವಿಶ್ವ ಚಾಂಪಿಯನ್‌ಗಳನ್ನು ಹೊತ್ತ ಏರ್ ಇಂಡಿಯಾ ವಿಮಾನವು ನವದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯಿತು.

Advertisement

ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ 13 ವರ್ಷಗಳ ಕಪ್​ ದಾಹವನ್ನು ನೀಗಿಸಿರುವ ಟೀಮ್​ ಇಂಡಿಯಾ ತಂಡವನ್ನು ದೆಹಲಿಯಲ್ಲಿ ಅದ್ದೂರಿಯಾಗಿ ಬರಮಾಡಿಕೊಳಲಾಯಿತು.

ಬಾರ್ಬಡೋಸ್‌ಗೆ ಚಂಡಮಾರುತ ಅಪ್ಪಳಿಸಿದ ಹಿನ್ನೆಲೆಯಲ್ಲಿ ಟೀಮ್ ಇಂಡಿಯಾ ಆಟಗಾರರು ಭಾರತಕ್ಕೆ ಬರಲು ಸಾಧ್ಯವಾಗಲಿಲ್ಲ. ಇದೀಗ ವಿಶೇಷ​ ವಿಮಾನದ ಮೂಲಕ T20 ವಿಶ್ವಕಪ್​ ಟ್ರೋಫಿಯೊಂದಿಗೆ ಆಟಗಾರರೆಲ್ಲ ತಾಯ್ನಾಡಿಗೆ ಆಗಮಿಸಿದ್ದಾರೆ.

ದೆಹಲಿಯಲ್ಲಿ ಇಂದು ಬೆಳಗ್ಗೆ ಟೀಂ ಇಂಡಿಯಾ ಆಟಗಾರರು ಪ್ರಧಾನಿ ಮೋದಿ ಅವರನ್ನು ಭೇಟಿಯಾಗಲಿದ್ದು, ಬಳಿಕ ಭೋಜನಕೂಟದಲ್ಲಿ ಭಾಗವಹಿಸಲಿದ್ದಾರೆ. ಇದಾದ ಬಳಿಕ ಮುಂಬೈಗೆ ತೆರಳಲ್ಲಿದ್ದು ಅಲ್ಲಿ ತೆರೆದ ವಾಹನದಲ್ಲಿ ಆಟಗಾರರನ್ನು ಮೆರವಣಿಗೆ ನಡೆಸಿ ಬಳಿಕ ಅದ್ದೂರಿ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ.

ಇದನ್ನೂ ಓದಿ: Heavy Rain: ಬೆಳ್ತಂಗಡಿ, ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

Advertisement

Advertisement

Udayavani is now on Telegram. Click here to join our channel and stay updated with the latest news.

Next