Advertisement

ಅಂತಿಮ ಏಕದಿನ: ಟಾಸ್ ಗೆದ್ದ ಭಾರತ; ತಂಡದಲ್ಲಿ 4 ಬದಲಾವಣೆ ಮಾಡಿದ ರೋಹಿತ್

01:30 PM Feb 11, 2022 | Team Udayavani |

ಅಹಮದಾಬಾದ್: ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯ ಅಂತಿಮ ಪಂದ್ಯ ಇಂದು ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಆರಂಭವಾಗಿದೆ. ಟಾಸ್ ಗೆದ್ದ ಭಾರತ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿದೆ.

Advertisement

ಈಗಾಗಲೇ ಸರಣಿ ಜಯಿಸಿರುವ ಕಾರಣದಿಂದ ತಂಡದಲ್ಲಿ ನಾಲ್ಕು ಬದಲಾವಣೆ ಮಾಡಿಕೊಳ್ಳಲಾಗಿದೆ. ಕೆ.ಎಲ್.ರಾಹುಲ್, ದೀಪಕ್ ಹೂಡಾ, ಯುಜುವೇಂದ್ರ ಚಾಹಲ್, ಶಾರ್ದೂಲ್ ಠಾಕೂರ್ ಬದಲಿಗೆ ಶಿಖರ್ ಧವನ್, ಶ್ರೇಯಸ್ ಅಯ್ಯರ್, ಕುಲದೀಪ್ ಯಾದವ್ ಮತ್ತು ದೀಪಕ್ ಚಾಹರ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಇದನ್ನೂ ಓದಿ:ಐಪಿಎಲ್ ಮೆಗಾ ಹರಾಜು: ಈ ಐದು ಆಟಗಾರರ ಮೇಲೆ ಕಣ್ಣಟ್ಟಿದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು

ವೆಸ್ಟ್ ಇಂಡೀಸ್ ತಂಡದಲ್ಲಿ ಒಂದು ಬದಲಾವಣೆ ಮಾಡಿಕೊಳ್ಳಲಾಗಿದೆ. ಅಕೈಲ್ ಹೊಸೈನ್ ಬದಲಿಗೆ ಹೇಡನ್ ವಾಲ್ಶ್ ತಂಡದಲ್ಲಿ ಸ್ಥಾನ ಗಳಿಸಿದ್ದಾರೆ. ಇಂದೂ ನಿಕೋಲಸ್ ಪೂರನ್ ನಾಯಕತ್ವ ವಹಿಸಿದ್ದಾರೆ.

ತಂಡಗಳು

Advertisement

ಭಾರತ: ರೋಹಿತ್ ಶರ್ಮಾ(ನಾ), ಶಿಖರ್ ಧವನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್(ವಿ.ಕೀ), ವಾಷಿಂಗ್ಟನ್ ಸುಂದರ್, ದೀಪಕ್ ಚಾಹರ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.

ವೆಸ್ಟ್ ಇಂಡೀಸ್: ಶಾಯ್ ಹೋಪ್ (ವಿ.ಕೀ), ಬ್ರಾಂಡನ್ ಕಿಂಗ್, ಡ್ಯಾರೆನ್ ಬ್ರಾವೋ, ಶಮರ್ ಬ್ರೂಕ್ಸ್, ನಿಕೋಲಸ್ ಪೂರನ್ (ನಾ), ಜೇಸನ್ ಹೋಲ್ಡರ್, ಫ್ಯಾಬಿಯನ್ ಅಲೆನ್, ಓಡಿಯನ್ ಸ್ಮಿತ್, ಅಲ್ಜಾರಿ ಜೋಸೆಫ್, ಹೇಡನ್ ವಾಲ್ಷ್, ಕೆಮರ್ ರೋಚ್.

Advertisement

Udayavani is now on Telegram. Click here to join our channel and stay updated with the latest news.

Next