Advertisement

Team India: ಪಾಂಡ್ಯಾಗೆ ಉಪನಾಯಕತ್ವವೂ ಇಲ್ಲ: ಈ ಆಟಗಾರನಿಗೆ ಹೊಸ ಜವಾಬ್ದಾರಿ

10:04 AM Jan 12, 2025 | Team Udayavani |

ಮುಂಬೈ: ಇಂಗ್ಲೆಂಡ್‌ ವಿರುದ್ದದ ಐದು ಪಂದ್ಯಗಳ ಟಿ20 ಸರಣಿಗೆ ಭಾರತ ತಂಡವನ್ನು ಶನಿವಾರ (ಜ.11) ಪ್ರಕಟಿಸಲಾಗಿದೆ. ವರ್ಷದಿಂದ ತಂಡದಿಂದ ಹೊರಗಿದ್ದ ಮೊಹಮ್ಮದ್‌ ಶಮಿ ಅವರು ಇಂಗ್ಲೆಂಡ್‌ ವಿರುದ್ದದ ಸರಣಿಗೆ ಆಯ್ಕೆಯಾಗಿದ್ದಾರೆ. ಬಾರ್ಡರ್‌ ಗಾವಸ್ಕರ್‌ ಟೆಸ್ಟ್‌ ಸರಣಿಯಲ್ಲಿ ಟೀಂ ಇಂಡಿಯಾವನ್ನು ಎರಡು ಪಂದ್ಯಗಳಲ್ಲಿ ಮುನ್ನಡೆಸಿದ್ದ ಜಸ್ಪ್ರೀತ್‌ ಬುಮ್ರಾ ಅವರು ಬೆನ್ನುನೋವಿನ ಕಾರಣದಿಂದ ತಂಡದಿಂದ ಹೊರಗಿದ್ದಾರೆ.

Advertisement

ಭಾರತದ ಟಿ20 ತಂಡದ ನಾಯಕ ಸೂರ್ಯಕುಮಾರ್‌ ಯಾದವ್‌ ಅವರು ಟೀಂ ಇಂಡಿಯಾವನ್ನು ಮುನ್ನಡೆಸಲಿದ್ದಾರೆ. ಆದರೆ ಅಚ್ಚರಿಯ ಬೆಳವಣಿಗೆಯಲ್ಲಿ ಅಕ್ಷರ್‌ ಪಟೇಲ್‌ ಅವರನ್ನು ತಂಡದ ಉಪ ನಾಯಕರನ್ನಾಗಿ ಮಾಡಲಾಗಿದೆ. ಕಳೆದ ಟಿ20 ವಿಶ್ವಕಪ್‌ ಗೂ ಮುನ್ನ ನಾಯಕರಾಗಿದ್ದ ಹಾರ್ದಿಕ್‌ ಪಾಂಡ್ಯ ಅವರು ತಂಡದಲ್ಲಿದ್ದರೂ ಯಾವುದೇ ಜವಾಬ್ದಾರಿ ನೀಡಲಾಗಿಲ್ಲ.

ಯುವ ಆಟಗಾರರಾದ ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ ಮತ್ತು ಧ್ರುವ್ ಜುರೆಲ್ 20 ಓವರ್‌ಗಳ ತಂಡದಲ್ಲಿ ತಮ್ಮ ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಟಿ20ಐ ತಂಡದಲ್ಲಿದ್ದ ಆದರೆ ಆಡುವ ಹನ್ನೊಂದರಲ್ಲಿ ಸ್ಥಾನ ಪಡೆಯಲು ವಿಫಲರಾದ ಸೀಮರ್ ಹರ್ಷಿತ್ ರಾಣಾ ಮುಂಬರುವ ಸರಣಿಗಾಗಿ 15 ಸದಸ್ಯರ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ವಿಕೆಟ್‌ ಕೀಪರ್‌ ಬ್ಯಾಟರ್‌ ರಿಷಭ್‌ ಪಂತ್‌, ಆರಂಭಿಕ ಆಟಗಾರ ಶುಭಮನ್‌ ಗಿಲ್‌ ಅವರನ್ನು ಈ ಬಾರಿ ಕಡೆಗಣಿಸಲಾಗಿದೆ. ದ.ಆಫ್ರಿಕಾ ಸರಣಿಯಲ್ಲಿ ಪದಾರ್ಪಣೆ ಮಾಡಿದ್ದ ರಮಣದೀಪ್‌ ಸಿಂಗ್‌ ಅವರನ್ನು ಕಡೆಗಣಿಸಲಾಗಿದೆ.

ಐದು ಪಂದ್ಯಗಳ ಟಿ20ಐ ಸರಣಿಯು ಜನವರಿ 22 ರಂದು ಕೋಲ್ಕತ್ತಾದಲ್ಲಿ ಆರಂಭವಾಗಲಿದೆ. ಎರಡನೇ ಮತ್ತು ಮೂರನೇ ಪಂದ್ಯಗಳು ಜನವರಿ 25 ಮತ್ತು 28 ರಂದು ಕ್ರಮವಾಗಿ ಚೆನ್ನೈ ಮತ್ತು ರಾಜ್‌ಕೋಟ್‌ನಲ್ಲಿ ನಡೆಯಲಿವೆ. ಸರಣಿಯ ನಾಲ್ಕನೇ ಪಂದ್ಯ ಜನವರಿ 31 ರಂದು ಪುಣೆಯಲ್ಲಿ ನಡೆಯಲಿದೆ. ಫೆಬ್ರವರಿ 2 ರಂದು ಮುಂಬೈ ಸರಣಿಯ ಅಂತಿಮ ಪಂದ್ಯವನ್ನು ಆಯೋಜಿಸಲಿದೆ.

Advertisement

ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾ), ಸಂಜು ಸ್ಯಾಮ್ಸನ್ (ವಿ.ಕೀ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್ (ಉ.ನಾ), ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ಮೊಹಮ್ಮದ್ ಶಮಿ, ವರುಣ್ ಚಕ್ರವರ್ತಿ, ರವಿ ಬಿಷ್ಣೋಯ್, ವಾಷಿಂಗ್ಟನ್ ಸುಂದರ್, ಧ್ರುವ್ ಜುರೆಲ್ (ವಿ.ಕೀ).

Advertisement

Udayavani is now on Telegram. Click here to join our channel and stay updated with the latest news.