Advertisement
ಭಾರತ 123 ಅಂಕಗಳೊಂದಿಗೆ ಅಗ್ರಸ್ಥಾನ ಅಲಂಕರಿಸಿದೆ. ಇಂಗ್ಲೆಂಡ್ 122 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ಕಿವೀಸ್ ಮತ್ತು ಆಸೀಸ್ ಕ್ರಮವಾಗಿ ಮೂರು ಮತ್ತು ನಾಲ್ಕನೇ ಸ್ಥಾನದಲ್ಲಿದೆ. ಈ ಮೊದಲ ಪಟ್ಟಿಯಲ್ಲಿ ಆಸ್ಟ್ರೇಲಿಯಾ ಐದನೇ ರ‍್ಯಾಂಕ್ ಹೊಂದಿತ್ತು. ವಿಶ್ವಕಪ್ ನಲ್ಲಿ ನೀರಸ ಪ್ರದರ್ಶನ ನೀಡಿದ ದಕ್ಷಿಣ ಆಫ್ರಿಕಾ ಐದನೇ ಸ್ಥಾನಕ್ಕೆ ಕುಸಿದಿದೆ.
ಭಾರತ ಉಳಿದ ಎಲ್ಲಾ ಲೀಗ್ ಪಂದ್ಯಗಳನ್ನು ಗೆದ್ದರೆ 124 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿ ಮುಂದುವರಿಯಲಿದೆ. ಒಂದು ವೇಳೆ ಭಾರತ ಮುಂದಿನ ಇಂಗ್ಲೆಂಡ್ ವಿರುದ್ಧದ ಪಂದ್ಯ ಸೋತು, ಉಳಿದ ಎರಡು ಪಂದ್ಯ ಗೆದ್ದರೆ ರ‍್ಯಾಂಕಿಂಗ್ ಪಟ್ಟಿಯಲ್ಲಿ ಬದಲಾವಣೆ ಆಗಲಿದೆ. ಆಗ ಭಾರತ 123 ಅಂಕ ಪಡೆಯಲಿದೆ. ಇಂಗ್ಲೆಂಡ್ ಕೂಡಾ 123 ಅಂಕ ಪಡೆಯಲಿದೆ. ಆದರೆ ಇಂಗ್ಲೆಂಡ್ ಮೊದಲ ಸ್ಥಾನಕ್ಕೆ ಏರಲಿದೆ. ಲೀಗ್ ನಲ್ಲಿ ಎರಡು ಪಂದ್ಯ ಸೋತರೆ ಭಾರತ 121 ಅಂಕದೊಂದಿಗೆ ಎರಡನೇ ಸ್ಥಾನಕ್ಕೆ ತೃಪ್ತಿ ಪಡಬೇಕಷ್ಟೆ. ಇನ್ನು ಇಂಗ್ಲೆಂಡ್ ಒಂದು ಪಂದ್ಯ ಗೆದ್ದು ಇನ್ನೊಂದು ಸೋತರೆ 122 ಅಂಕದೊಂದಿಗೆ ಎರಡನೇ ಸ್ಥಾನದಲ್ಲಿ ಉಳಿಯುತ್ತದೆ.