Advertisement

ಸರಣಿ ಜಯ: ಮತ್ತೆ ಟೆಸ್ಟ್ ಕ್ರಿಕೆಟ್ ನಲ್ಲಿ ಮೊದಲ ಸ್ಥಾನಕ್ಕೇರಿದ ಟೀಂ ಇಂಡಿಯಾ

02:35 PM Dec 06, 2021 | Team Udayavani |

ಮುಂಬೈ: ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ವಿಜೇತ ನ್ಯೂಜಿಲೆಂಡ್ ವಿರುದ್ಧ 1-0 ಅಂತರದ ಸರಣಿ ಜಯ ಸಾಧಿಸಿದ ಭಾರತ ಸೋಮವಾರ ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ಅಗ್ರ ಸ್ಥಾನವನ್ನು ಪಡೆದುಕೊಂಡಿದೆ. 124 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಭಾರತ ಮೊಲದ ಸ್ಥಾನದಲ್ಲಿದ್ದರೆ, 121 ಅಂಕಗಳೊಂದಿಗೆ ನ್ಯೂಜಿಲೆಂಡ್ ಎರಡನೇ ಸ್ಥಾನದಲ್ಲಿದೆ. ಆಸ್ಟ್ರೇಲಿಯಾ 108 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದರೆ, ಇಂಗ್ಲೆಂಡ್ 107 ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದೆ.

Advertisement

ಭಾರತ ತಂಡ 2020 ಮೇ ತಿಂಗಳಲ್ಲಿ ಟೆಸ್ಟ್ ಅಗ್ರ ಸ್ಥಾನವನ್ನು ಕಳೆದುಕೊಂಡಿತ್ತು. ನಂತರ ಟೀಂ ಇಂಡಿಯಾ ಆಸ್ಟ್ರೇಲಿಯಾ, ಇಂಗ್ಲೆಂಡ್ ಸೇರಿದಂತೆ ಎಲ್ಲಾ ಐದು ಸರಣಿಗಳನ್ನು ಗೆದ್ದಿದ್ದಾರೆ. ಮತ್ತೊಂದೆಡೆ, ಇದೇ ಅವಧಿಯಲ್ಲಿ ಆಸ್ಟ್ರೇಲಿಯಾ ತಂಡವು ದಕ್ಷಿಣ ಆಫ್ರಿಕಾ ಹಾಗೂ ಭಾರತ ವಿರುದ್ಧ ಸೋತಿತ್ತು.

ಇದನ್ನೂ ಓದಿ:ಯುವ ಆಟಗಾರರು ನೀಡುವ ತಲೆಬಿಸಿ ಬಗ್ಗೆ ಮಾತನಾಡಿದ ಕೋಚ್ ರಾಹುಲ್ ದ್ರಾವಿಡ್

ಭಾರತ ತಂಡವು ಮುಂಬೈ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು 372 ರನ್‌ಗಳಿಂದ ಸೋಲಿಸಿತು, ಇದು ಟೆಸ್ಟ್ ಕ್ರಿಕೆಟ್‌ನಲ್ಲಿ ರನ್‌ಗಳ ವಿಷಯದಲ್ಲಿ ಟೀಂ ಇಂಡಿಯಾದ ಅತಿದೊಡ್ಡ ಗೆಲುವಾಗಿದೆ.

ಭಾರತ ತಂಡ ತನ್ನ ಮುಂದಿನ ಸರಣಿಯನ್ನು ದಕ್ಷಿಣ ಆಫ್ರಿಕಾ ವಿರುದ್ಧ ನಡೆಯಲಿದೆ. ಬುಧವಾರ ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ನಡುವೆ ಆ್ಯಶಸ್ ಸರಣಿ ಆರಂಭವಾಗಲಿದೆ.

Advertisement

Udayavani is now on Telegram. Click here to join our channel and stay updated with the latest news.

Next