ಮೆಲ್ಬೋರ್ನ್: ಮೊದಲ ಟೆಸ್ಟ್ ಪಂದ್ಯದ ಸೋಲಿಗೆ ಸೇಡು ತೀರಿಸಿಕೊಳ್ಳುವ ಸಲುವಾಗಿ ಎರಡನೇ ಪಂದ್ಯಕ್ಕೆ ತಂಡ ಸಜ್ಜಾಗಿದೆ. ಅಜಿಂಕ್ಯ ರಹಾನೆ ತಂಡದಲ್ಲಿ ಕೆಲವು ಮಹತ್ತರ ಬದಲಾವಣೆ ಮಾಡಿದ್ದಾರೆ.
ನಾಯಕ ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ಅಜಿಂಕ್ಯ ರಹಾನೆ ತಂಡವನ್ನು ಮುನ್ನಡೆಸಲಿದ್ದಾರೆ. ಚೇತೇಶ್ವರ ಪೂಜಾರಗೆ ಉಪನಾಯಕನ ಜವಾಬ್ಧಾರಿ ಹೊರಿಸಲಾಗಿದೆ. ಶಮಿ ಗಾಯಗೊಂಡು ತಂಡದಿಂದ ಹೊರಬಿದ್ದಿದ್ದಾರೆ. ಮೊದಲ ಪಂದ್ಯದಲ್ಲಿ ಆಡಿದ್ದ ಪೃಥ್ವಿ ಶಾ, ವೃದ್ಧಿಮಾನ್ ಸಾಹರನ್ನು ಕೈಬಿಡಲಾಗಿದೆ.
ಶುಭ್ಮನ್ ಗಿಲ್ ಮತ್ತು ಮೊಹಮ್ಮದ್ ಸಿರಾಜ್ ಈ ಪಂದ್ಯದೊಂದಿಗೆ ಟೆಸ್ಟ್ ಕ್ರಿಕೆಟ್ ಗೆ ಪದಾರ್ಪಣೆ ಮಾಡಲಿದ್ದಾರೆ. ರಿಷಭ್ ಪಂತ್ ಮತ್ತು ರವೀಂದ್ರ ಜಡೇಜಾ ಮತ್ತೆ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಆದರೆ ಕನ್ನಡಿಗ ಕೆ.ಎಲ್. ರಾಹುಲ್ ಗೆ ಮತ್ತೆ ನಿರಾಸೆಯಾಗಿದೆ.
ಇದನ್ನೂ ಓದಿ:ಗಾಯದ ಮೇಲೆ ಬರೆ: ಮುಂದಿನ ಆರು ತಿಂಗಳ ಕಾಲ ಭುವನೇಶ್ವರ್ ಕುಮಾರ್ ಕ್ರಿಕೆಟ್ ನಿಂದ ಔಟ್!
ರವೀಂದ್ರ ಜಡೇಜಾ ಆಗಮನದಿಂದ ಸ್ಪಿನ್ ವಿಭಾಗ ಮತ್ತಷ್ಟು ಬಲಿಷ್ಠವಾಗಿದೆ. ಅಶ್ವಿನ್ ಜೊತೆ ಹನುಮಾ ವಿಹಾರಿಯೂ ಸ್ಪಿನ್ ವಿಭಾಗದಲ್ಲಿದ್ದಾರೆ. ಬ್ಯಾಟಿಂಗ್ ವಿಭಾಗಕ್ಕೂ ಬಲ ತುಂಬಿದಂತಾಗಿದೆ.
ತಂಡ: ಮಯಾಂಕ್ ಅಗರ್ವಾಲ್, ಶುಭ್ಮನ್ ಗಿಲ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ (ಸಿ), ಹನುಮಾ ವಿಹಾರಿ, ರಿಷಭ್ ಪಂತ್ (ವಿ,ಕೀ), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಉಮೇಶ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.