Advertisement

Team India; ಆಸೀಸ್ ವಿರುದ್ಧದ ಟಿ20 ಸರಣಿಯಿಂದ ಹೊರಬಿದ್ದ ಟೀಂ ಇಂಡಿಯಾ ಸ್ಟಾರ್

11:07 AM Nov 17, 2023 | Team Udayavani |

ಮುಂಬೈ: ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್ ಕೂಟದಲ್ಲಿ ಇನ್ನೊಂದೇ ಪಂದ್ಯ ಬಾಕಿಯಿದೆ. ಭಾನುವಾರ ಅಹಮದಾಬಾದ್ ನಲ್ಲಿ ರವಿವಾರ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ವಿಶ್ವಕಪ್ ಫೈನಲ್ ಪಂದ್ಯ ನಡೆಯಲಿದೆ. ಇದಾದ ಬಳಿಕ ಕೆಲವೇ ದಿನಗಳಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಟಿ20 ಸರಣಿಯಲ್ಲಿ ಮುಖಾಮುಖಿಯಾಗಲಿದೆ.

Advertisement

ಮುಂದಿನ ವಾರ ಆಸೀಸ್ ವಿರುದ್ಧ ತವರಿನಲ್ಲಿ ಭಾರತ ಐದು ಪಂದ್ಯಗಳ ಟಿ20 ಸರಣಿ ಆಡಲಿದೆ. ಭಾರತದ ಪ್ರಮುಖ ಆಟಗಾರರಿಗೆ ಈ ಸರಣಿಗೆ ವಿಶ್ರಾಂತಿ ಲಭಿಸುವ ಸಾಧ್ಯತೆಯಿದೆ. ಆದರೆ ಇದೀಗ ಪ್ರಮುಖ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರೂ ಸರಣಿಯಲ್ಲಿ ಆಡುವುದು ಅನುಮಾನವಾಗಿದೆ.

ವಿಶ್ವಕಪ್ ನ ಬಾಂಗ್ಲಾದೇಶ ವಿರುದ್ಧದ ಪಂದ್ಯದ ವೇಳೆ ಹಾರ್ದಿಕ್ ಪಾಂಡ್ಯ ಗಾಯಗೊಂಡಿದ್ದರು. ಬಳಿಕ ವಿಶ್ವಕಪ್ ತಂಡದಿಂದ ಹೊರಬಿದ್ದಿದ್ದ ಪಾಂಡ್ಯ ಬದಲು ಪ್ರಸಿಧ್ ಕೃಷ್ಣ ಸ್ಥಾನ ಪಡೆದಿದ್ದರು. ಹಾರ್ದಿಕ್ ಸದ್ಯ ಬೆಂಗಳೂರಿನ ಎನ್ ಸಿಎನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಆದರೆ ಅವರಿನ್ನೂ ಪೂರ್ಣ ಗುಣಮುಖರಾಗಿಲ್ಲ. ಅವರಿಗೆ ಶಸ್ತ್ರಚಿಕಿತ್ಸೆ ಮಾಡಬೇಕಾದ ಅಗತ್ಯವೂ ಬರಬಹುದು ಎಂದು ವರದಿ ಹೇಳಿದೆ. ಹೀಗಾಗಿ ಅವರು ಆಸೀಸ್ ವಿರುದ್ಧದ ಟಿ20 ಸರಣಿ ಮತ್ತು ಅದರ ಬಳಿಕದ ದಕ್ಷಿಣ ಆಫ್ರಿಕಾ ಪ್ರವಾಸಕ್ಕೂ ಲಭ್ಯರಾಗುವ ಸಾಧ್ಯತೆ ಕಡಿಮೆ.

ಸದ್ಯ ವಿಶ್ವಕಪ್ ನಲ್ಲಿ ಆಡುತ್ತಿರುವ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಬುಮ್ರಾ ಮುಂತಾದ ಹಿರಿಯ ಆಟಗಾರರು ಟಿ20 ಸರಣಿಯಲ್ಲಿ ಆಡುವುದು ಅನುಮಾನ. ಹಾರ್ದಿಕ್ ಅನುಪಸ್ಥಿತಿಯಲ್ಲಿ ಕೆಎಲ್ ರಾಹುಲ್ ಅವರು ತಂಡವನ್ನು ಮುನ್ನಡೆಸುವ ಸಾಧ್ಯತೆ ಹೆಚ್ಚಿದೆ.

Advertisement

Udayavani is now on Telegram. Click here to join our channel and stay updated with the latest news.

Next