Advertisement

ಕಟ್ಟಡಗಳ ಪರಿಶೀಲನೆಗೆ ತಂಡ

01:17 AM Sep 10, 2019 | Team Udayavani |

ಬೆಂಗಳೂರು: ಬಿಬಿಎಂಪಿ ಎಲ್ಲ ಎಂಟು ವಲಯಗಳಲ್ಲಿರುವ ಶಿಥಿಲ ಕಟ್ಟಡಗಳ ಬಗ್ಗೆ ಪರಿಶೀಲನೆ ಮಾಡುವ ಸಂಬಂಧ ನಗರ ಯೋಜನಾ ಹಾಗೂ ವಲಯ ಮಟ್ಟದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ತಂಡ ರಚಿಸಲು ಆಯುಕ್ತ ಬಿ.ಎಚ್‌. ಅನಿಲ್‌ ಕುಮಾರ್‌ ಸೂಚನೆ ನೀಡಿದ್ದಾರೆ.

Advertisement

ಭಾನುವಾರ ಸಂಜೆ ಬನಶಂಕರಿಯ 7ನೇ ಹಂತದ ಪುಟ್ಟೇನಹಳ್ಳಿಯ ವಿವೇಕಾನಂದ ಕಾಲೋನಿಯಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿತದ ಸ್ಥಳಕ್ಕೆ ಮೇಯರ್‌ ಗಂಗಾಂಬಿಕೆ ಅವರ ಜತೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಬಿಬಿಎಂಒಪಿ ವ್ಯಾಪ್ತಿಯ ಎಲ್ಲ ವಲಯಗಳಲ್ಲಿ ಪ್ರತ್ಯೇಕ ತಂಡ ರಚಿಸಿ ಅವಧಿ ಮೀರಿದ, ಭಾಗಶಃ ಕುಸಿತ ಉಂಟಾಗಿರುವ ಕಟ್ಟಡಹಾಗೂ ಶಿಥಿಲಗೊಂಡ ಸ್ಥಿತಿಯಲ್ಲಿರುವ ಕಟ್ಟಡಗಳ ಬಗ್ಗೆ ವರದಿ ನೀಡುವಂತೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಬೀಳುವ ಸ್ಥಿತಿಯಲ್ಲಿರುವ ಕಟ್ಟಡಗಳಲ್ಲಿ ವಾಸಿಸುತ್ತಿರುವವರು ಮತ್ತು ಕಟ್ಟಡಗಳ ಮಾಲೀಕರಿಗೆ ಸೂಚನೆ ನೀಡಿ, ಕಟ್ಟಡಗಳ ಸುರಕ್ಷತೆ ಕುರಿತು ತಜ್ಞರಿಂದ ತಪಾಸಣೆ ವರದಿ ಸಿದ್ಧಪಡಿಸಿಕೊಂಡು ಹಾಗೂ ದುರಸ್ಥಿಗೆ ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ತಿಳಿಸಿದರು.

ಶಿಥಿಲಾ ವಸ್ಥೆಯಲ್ಲಿರುವ ಕಟ್ಟಡಗಳು° ದುರಸ್ಥಿ ಮಾಡಲು ಮಾಲೀಕರಿಗೆ ನೋಟಿಸ್‌ ಜಾರಿ ಮಾಡಲು ಹಾಗೂ ತೀರಾ ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳನ್ನು ಕೂಡಲೇ ತೆರವುಗೊಳಿಸಲು ಕಟ್ಟಡದಲ್ಲಿ ವಾಸ ಇರುವವರಿಗೆ ಹಾಗೂ ಕಟ್ಟಡದ ಮಾಲಿಕರಿಗೆ ನೋಟಿಸ್‌ ಜಾರಿ ಮಾಡುವುದಕ್ಕೆ ಸೂಚನೆ ನೀಡಲಾಗಿದೆ. ಇಲ್ಲವಾದರೆ ಕೆಎಂಸಿ ಕಾಯ್ದೆ ಅನ್ವಯ ಅವರನ್ನು ಕಟ್ಟಡದಿಂದ ತೆರವುಗೊಳಿಸಿ, ಮಾಲೀಕರ ಖರ್ಚಿನಲ್ಲೇ ಕಟ್ಟಡವನ್ನು ನೆಲಸಮಗೊಳಿಸಲು ಕ್ರಮವಹಿಸುವಂತೆ ತಿಳಿಸಲಾಗಿದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next