ಮುಂಬಯಿ: ಮಹಾರಾಷ್ಟ್ರದ ಥಾಣೆಯಲ್ಲಿ ಬಿಜೆಪಿ ಶಾಸಕನ ಮೇಲೆ ಗುಂಡಿನ ದಾಳಿ ನಡೆದ ಬೆನ್ನಲ್ಲೇ ಮುಂಬೈನಲ್ಲಿ ಮತ್ತೊಂದು ಗುಂಡಿನ ದಾಳಿ ನಡೆಸಿದ ಘಟನೆ ಬೆಳಕಿಗೆ ಬಂದಿದೆ.
ಫೇಸ್‌ಬುಕ್ ಲೈವ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಉದ್ಧವ್ ಠಾಕ್ರೆ ಗುಂಪಿನ ನಾಯಕ ಅಭಿಷೇಕ್ ಘೋಸಲ್ಕರ್ ಮೇಲೆ ಅಲ್ಲೇ ನೆರೆದಿದ್ದ ವ್ಯಕ್ತಿಯೊಬ್ಬರು ಗುಂಡಿನ ದಾಳಿ ನಡೆಸಿರುವ ಘಟನೆ ನಡೆದಿದೆ ಗುಂಡಿನ ದಾಳಿ ನಡೆಸಿದ ವ್ಯಕ್ತಿ ಬಳಿಕ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ದಹಿಸರ್ ಪ್ರದೇಶದ MHB ಕಾಲೋನಿಯಲ್ಲಿರುವ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗುಂಡಿನ ದಾಳಿ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಘಟನೆಯ ಭಯಾನಕ ದೃಶ್ಯ ಸೆರೆಯಾಗಿದ್ದು ಇಲ್ಲಿ ಅಭಿಷೇಕ್ ಘೋಸಲ್ಕರ್ ಫೇಸ್ ಬುಕ್ ಲೈವ್ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು ಕೊನೆಯದಾಗಿ ಕಾರ್ಯಕ್ರಮ ಮುಗಿದ ಬಳಿಕ ಇನ್ನೇನು ಏಳಬೇಕು ಎನ್ನುವಷ್ಟರಲ್ಲಿ ಅಲ್ಲೇ ಇದ್ದ ವ್ಯಕ್ತಿ ಬಂದೂಕಿನ್ನಿಂದ ಗುಂಡು ಹಾರಿಸಿದ್ದಾನೆ. ಗಂಭೀರ ಗಾಯಗೊಂಡ ಘೋಸಲ್ಕರ್ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟೋತ್ತಿಗಾಗಲೇ ಘೋಸಲ್ಕರ್ ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದಾರೆ. ಇನ್ನು ಗುಂಡು ಹಾರಿಸಿದ ವ್ಯಕ್ತಿ ತಾನೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ.
ಘಟನೆಗೆ ಸಂಬಂಧಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಅಭಿಷೇಕ್ ಘೋಷಾಲ್ಕರ್ ಮೇಲೆ ಗುಂಡು ಹಾರಿಸಿದ ಆರೋಪಿಯನ್ನು ಮೋರಿಸ್ ಎನ್ನಲಾಗಿದ್ದು ಈತನ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿರುವುದು ಬೆಳಕಿಗೆ ಬಂದಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಮಾರಿಸ್ ನೊರೊನ್ಹಾ ಬೊರಿವಲಿ ವೆಸ್ಟ್ ನಿವಾಸಿಯಾಗಿದ್ದು, ಚುನಾವಣೆಯಲ್ಲಿ ಸ್ಪರ್ಧಿಸುವ ಆಕಾಂಕ್ಷೆಯನ್ನು ಹೊಂದಿದ್ದ ಸಮಾಜ ಸೇವಕ ಎಂದು ಹೇಳಿಕೊಂಡಿದ್ದಾರೆ.
ಇಬ್ಬರೂ ಅಕಪಕ್ಕದಲ್ಲಿ ಕಚೇರಿಯನ್ನು ಹೊಂದಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ, ಅಷ್ಟು ಮಾತ್ರವಲ್ಲದೆ ಸ್ಥಳೀಯ ರಾಜಕೀಯದಲ್ಲಿ ಪ್ರಾಬಲ್ಯ ಸಾಧಿಸಲು ಅವರ ನಡುವೆ ಜಗಳ ನಡೆದಿದೆ ಎಂದು ಅಲ್ಲಿನ ಸ್ಥಳೀಯರು ಹೇಳಿಕೊಂಡಿದ್ದಾರೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: Uttarakhand Violence: 4 ಮೃತ್ಯು, ಪೊಲೀಸರು ಸೇರಿ 200 ಮಂದಿಗೆ ಗಾಯ, ಕರ್ಫ್ಯೂ ಜಾರಿ