Advertisement

Techie Atul Subhash Case: ಅತುಲ್‌ನಿಂದಲೇ ನನಗೆ ತೊಂದರೆ: ಪತ್ನಿ

10:57 AM Dec 19, 2024 | Team Udayavani |

ಬೆಂಗಳೂರು: ದೇಶಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಟೆಕಿ ಅತುಲ್‌ ಸುಭಾಷ್‌ ಆತ್ಮಹತ್ಯೆ ಪ್ರಕರಣದ ಸಂಬಂಧ ಬಂಧನಕ್ಕೊಳಗಾಗಿರುವ ಪತ್ನಿ ನಿಖಿತಾ ಸಿಂಘಾನಿಯಾ ಅವರು “ಅತುಲ್‌ನಿಂದಲೇ ನನಗೆ ತೊಂದರೆ ಆಗಿದೆ. ನಾನೇ ನಿಜವಾದ ಸಂತ್ರಸ್ತೆ. ನ್ಯಾಯಾಲಯದಲ್ಲಿ ಈ ಬಗ್ಗೆ ನಾನು ಹೋರಾಟ ಮಾಡುತ್ತೇನೆ’ ಎಂದು ಪೊಲೀಸರ ವಿಚಾರಣೆ ವೇಳೆ ಹೇಳಿಕೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

Advertisement

ಉತ್ತರ ಪ್ರದೇಶ ಮೂಲದ ಟೆಕಿ ಅತುಲ್‌ ಸುಭಾಷ್‌ ಆತ್ಮಹತ್ಯೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಈ ಕುರಿತು ದೇಶಾದ್ಯಂತ ಪರ-ವಿರೋಧ ಚರ್ಚೆಗಳಾಗುತ್ತಿವೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅತುಲ್‌ ಪತ್ನಿ ನಿಖಿತಾ ಸಿಂಘಾನಿಯಾ ಅವರನ್ನು ಮಾರತ್ತಹಳ್ಳಿ ಪೊಲೀಸರು ವಿಚಾರಣೆಗೊಳಪಡಿಸಿದ ವೇಳೆ ಅತುಲ್‌ನಿಂದ ನನಗೆ ತೊಂದರೆ ಆಗಿದೆ. ಆತ ಸಂತ್ರಸ್ತ ಅಲ್ಲ. ಬದಲಿಗೆ ನಾನೇ ನಿಜವಾದ ಸಂತ್ರಸ್ತೆ ಎಂದು ನಿಖೀತಾ ಪೊಲೀಸರ ಮುಂದೆ ಅಳಲು ತೋಡಿಕೊಂಡಿದ್ದಾರೆ. ಇನ್ನು ನಾನು ಈ ಬಗ್ಗೆ ಕಾನೂನು ಹೋರಾಟ ಮಾಡುತ್ತೇನೆ. ನ್ಯಾಯಾಲಯದಲ್ಲಿ ನನಗಾದ ಸಮಸ್ಯೆಗಳನ್ನು ಹೇಳಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ ಎನ್ನಲಾಗಿದೆ.

“ಅಡುಗೆ ಚೆನ್ನಾಗಿ ಮಾಡಲಿಲ್ಲ’ ಎಂದು ಕಿರುಕುಳ ನೀಡುತ್ತಿದ್ದ. ಇಷ್ಟೆಲ್ಲಾ ಅದರೂ ನಾನು ಮನೆ ಬಿಟ್ಟು ಹೋಗಿರಲಿಲ್ಲ. ಮನೆ ಬಿಟ್ಟು ಹೋಗುವಂತೆ ಮಾಡಿ ದ್ದು ಕೂಡ ಅತುಲ್‌ ಹೊರತು ನಾನಲ್ಲ. ಆತ ಸುಳ್ಳು ಆರೋಪ ಮಾಡಿದ್ದಾನೆ. 2020ರಿಂದಲೂ ನಾವು ಪ್ರತ್ಯೇಕವಾಗಿ ವಾಸಿಸುತ್ತಿದ್ದೇವೆ. ಆತನ ಸಾವಿಗೂ ನನಗೂ ಸಂಬಂಧವಿಲ್ಲ ಎಂದು ನಿಖಿತಾ ಹೇಳಿದ್ದಾಳೆ ಎಂದು ತಿಳಿದು ಬಂದಿದೆ. ಇನ್ನು ಪೊಲೀಸರು ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದಾರೆ.

ಏನಿದು ಪ್ರಕರಣ?: ಬೆಂಗಳೂರಿನ ಟೆಕಿ ಅತುಲ್‌ ಸುಭಾಷ್‌ ಆತ್ಮಹತ್ಯೆ ಪ್ರಕರಣ ಭಾರೀ ಸುದ್ದಿಯಾಗು ತ್ತಿದ್ದಂತೆಯೇ ಪತ್ನಿ ಹಾಗೂ ಆಕೆಯ ಕುಟುಂಬಸ್ಥರು ಮನೆ ಬಿಟ್ಟು ನಾಪತ್ತೆಯಾಗಿದ್ದರು. ಮಾರತ್ತಹಳ್ಳಿ ಪೊಲೀ ಸರು ಉತ್ತರ ಪ್ರದೇಶಕ್ಕೆ ತೆರಳಿ ತಾಂತ್ರಿಕ ಕಾರ್ಯಾ ಚರಣೆ ನಡೆಸಿ ಅವರನ್ನು ಪತ್ತೆ ಮಾಡಿ ಬಂಧಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next