Advertisement

ಶಿಕ್ಷಕರ ವರ್ಗಾವಣೆಗೆ ತಾಂತ್ರಿಕ ತೊಡಕು

06:40 AM Jun 11, 2019 | Lakshmi GovindaRaj |

ಬೆಂಗಳೂರು: ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಅಧಿಕೃತವಾಗಿ ಜೂ.10ರಿಂದ ಆರಂಭವಾಗಬೇಕಿತ್ತು. ಆದರೆ, ಸರ್ವರ್‌ ಸಮಸ್ಯೆಯಿಂದಾಗಿ ಸೋಮವಾರ ವರ್ಗಾವಣೆ ಪ್ರಕ್ರಿಯೆ ಆರಂಭಿಸಲು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸಾಧ್ಯವಾಗಿಲ್ಲ.

Advertisement

ಶಿಕ್ಷಕರ ವರ್ಗಾವಣೆಗಾಗಿಯೇ ಪ್ರತ್ಯೇಕ ಸಾಫ್ಟ್ವೇರ್‌ ಅಭಿವೃದ್ಧಿ ಪಡಿಸಲಾಗಿದೆ. ಶಿಕ್ಷಕರು ಆನ್‌ಲೈನ್‌ ಮೂಲಕವೇ ಅರ್ಜಿ ಸಲ್ಲಿಸಬೇಕು. ಜೂ.12ರಿಂದ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಲಿದೆ. ಸೋಮವಾರ(ಜೂ.10) ಶಾಲೆಗಳ ವಲಯದ ವಿವರವನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು, ಉಪನಿರ್ದೇಶಕರು ಹಾಗೂ ಇ-ಗವರ್ನೆನ್ಸ್‌ ವಿಭಾಗದಿಂದ ಟಿಡಿಎಸ್‌ ಮತ್ತು ವರ್ಗಾವಣೆ ತಂತ್ರಾಂಶಕ್ಕೆ ಅಳವಡಿಸಬೇಕಿತ್ತು.

ಹಾಗೆಯೇ ಎಲ್ಲ ಶಿಕ್ಷಕರ ಮಾಹಿತಿ, ವಿವರಗಳನ್ನು ಇಂದೀಕರಿಸಿ, ಅಗತ್ಯ ದೃಢೀಕರಣ ಮಾದರಿಯನ್ನು ಸಲ್ಲಿಸಬೇಕಿತ್ತು. ಆದರೆ, ಸರ್ವರ್‌ ಸಮಸ್ಯೆಯಿಂದಾಗಿ ಇಲಾಖೆಯ ಅಧಿಕಾರಿಗಳು ಸೋಮವಾರ ಇದ್ಯಾವುದನ್ನು ಸಮರ್ಪಕವಾಗಿ ನಿರ್ವಹಿಸಲು ಸಾಧ್ಯವಾಗಿಲ್ಲ. ಸಮಸ್ಯೆಗೆ ಸಂಬಂಧಿಸಿದಂತೆ ಡಿಡಿಪಿಐ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಇಲಾಖೆಯ ಉನ್ನತಾಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಮಂಗಳವಾರ ಮಧ್ಯಾಹ್ನದೊಳಗೆ ಸಮಸ್ಯೆ ಬಗೆಹರಿಯಲಿದೆ ಎಂದು ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next