Advertisement

ಕನ್ನಡದಲ್ಲೇ ತಾಂತ್ರಿಕ ಶಿಕ್ಷಣಕ್ಕೆ ಕ್ರಮ: ಬೊಮ್ಮಾಯಿ

11:35 PM Oct 28, 2021 | Team Udayavani |

ಹುಬ್ಬಳ್ಳಿ: ಕನ್ನಡದಲ್ಲೇ  ಎಂಜಿನಿಯರಿಂಗ್‌ ಶಿಕ್ಷಣಕ್ಕೆ  ಸರಕಾರ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

Advertisement

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾಡಳಿತ ಹಾಗೂ ಹು-ಧಾ ಮಹಾನಗರ ಪಾಲಿಕೆ ವತಿ ಯಿಂದ ಇಲ್ಲಿನ ಅಶೋಕ ನಗರದ ಡಾ| ಡಿ.ಎಸ್‌.ಕರ್ಕಿ ಕನ್ನಡ ಭವನದಲ್ಲಿ ಗುರುವಾರ ಆಯೋಜಿ ಸಿದ್ದ  “ಮಾತಾಡ್‌ ಮಾತಾಡ್‌ ಕನ್ನಡ’, ಲಕ್ಷ ಕಂಠಗಳಿಂದ ಕನ್ನಡದ ಶ್ರೇಷ್ಠತೆ ಸಾರುವ ಗೀತ ಗಾಯನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಹೊಸ ಶಿಕ್ಷಣ ನೀತಿಯಲ್ಲಿ ಮಾತೃಭಾಷೆಗೆ ಹೆಚ್ಚಿನ ಮಹತ್ವ ಕೊಟ್ಟು ಪ್ರಾಥಮಿಕ, ಮಾಧ್ಯಮಿಕ, ಪ್ರೌಢಹಂತದಲ್ಲಷ್ಟೇ ಅಲ್ಲ ಪದವಿ ಹಂತದಲ್ಲೂ ಕನ್ನಡ  ಕಲಿಕೆಯನ್ನು ಕಡ್ಡಾಯಗೊಳಿಸಲಾಗಿದೆ. ಅದರ ಬಗ್ಗೆ ಕಾನೂನಾತ್ಮಕ ಹೋರಾಟ ಜಾರಿಯ ಲ್ಲಿದೆ. ಎಂಜಿನಿಯರಿಂಗ್‌ ಅನ್ನೂ ಕನ್ನಡದಲ್ಲೇ ಕಲಿಯುವಂತೆ ಆಗಲಿದೆ. ಈಗಾಗಲೇ 15 ಎಂಜಿನಿಯರಿಂಗ್‌ ಕಾಲೇಜುಗಳು ಕನ್ನಡದಲ್ಲಿ ಕಲಿಸಲು ಮುಂದೆ ಬಂದಿವೆ ಎಂದರು.

ಶ್ರೀಮಂತ ಭಾಷೆ:

ದೇಶದಲ್ಲಿ ಅತ್ಯಂತ ಪುರಾತನ ಭಾಷೆಯಾಗಿರುವ ಕನ್ನಡವನ್ನು ಇಲ್ಲಿನ ಸಾಹಿತಿಗಳು, ಕವಿಗಳು ವಿಶ್ವದ ಶ್ರೀಮಂತ ಭಾಷೆಗಳಲ್ಲಿ ಒಂದಾಗಿಸಿದ್ದಾರೆ. ಭವ್ಯ ಇತಿಹಾಸ ಹೊಂದಿರುವ ಕನ್ನಡವನ್ನು ನಮ್ಮ ಜೀವ ಹಾಗೂ ಜೀವನ ಎಂದು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು ಎಂದು  ಸಲಹೆ ಮಾಡಿದರು.

Advertisement

ವ್ಯವಹಾರದಲ್ಲಿ ಕನ್ನಡ ಬಳಸಿ:

ವ್ಯವಹಾರದಲ್ಲಿ ಕನ್ನಡ ಬಳಕೆ ಮೂಲಕ  ಅದನ್ನು ಮತ್ತಷ್ಟು ಶ್ರೀಮಂತಗೊಳಿಸಬೇಕು.  ಕನ್ನಡಿಗರಲ್ಲಿ ಕನ್ನಡ ಭಾಷೆ ಪ್ರೇಮ ಹೆಚ್ಚಾಗಬೇಕು.  “ಮಾತಾಡ್‌ ಮಾತಾಡ್‌ ಕನ್ನಡ’ ಎಂಬ ಒಂದು ವಾರದ ಅಭಿಯಾನವನ್ನು ಎಲ್ಲರೂ ಸೇರಿ ಯಶಸ್ವಿಗೊಳಿಸಬೇಕು. ಹೊರ ರಾಜ್ಯದಿಂದ ಬರುವ ಜನರಿಗೆ ಅತ್ಯಂತ ಪ್ರೀತಿಪೂರ್ವಕವಾಗಿ ನಮ್ಮ ಭಾಷೆ ಕಲಿಸಿಕೊಡುವ ಕೆಲಸ ಮಾಡಬೇಕು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next