Advertisement

ಜಿಲ್ಲೆಗೊಂದು ತಾಂತ್ರಿಕ ಶಿಕ್ಷಣ ಶಾಲೆ: ಸಿಎಂ  

11:00 PM Aug 17, 2021 | Team Udayavani |

ಬೆಂಗಳೂರು: ರಾಜ್ಯದ ಶಿಕ್ಷಣ ಸಂಸ್ಥೆಗಳನ್ನು ವಿಶ್ವಾಸಕ್ಕೆ ಪಡೆದು ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಅನುಷ್ಠಾನ ಮಾಡುವ ಜತೆಗೆ ಯುವ ಜನತೆ ಉದ್ಯೋಗ ಪಡೆದುಕೊಳ್ಳಲು ಅನುಕೂಲವಾಗು ವಂತೆ ಜಿಲ್ಲೆಗೊಂದು ತಾಂತ್ರಿಕ ಶಿಕ್ಷಣ ಶಾಲೆಯನ್ನು ಪ್ರಾರಂಭಿಸುವಂತೆ ಸಿಎಂ ಬಸವರಾಜ ಬೊಮ್ಮಾಯಿ ಸಲಹೆ ನೀಡಿದ್ದಾರೆ.

Advertisement

ಮಂಗಳವಾರ ಉನ್ನತ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಅವರು ಈ ಕ್ಷೇತ್ರದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನದ ಕುರಿತು ಚರ್ಚೆ ನಡೆಸಿದರು.

ಎನ್‌ಇಪಿ ಸಂಬಂಧ ಈಗಾಗಲೇ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಈ ನೀತಿ ಜಾರಿಗೆ ರಾಜ್ಯ ಶಿಕ್ಷಣ ಆಯೋಗ ಮತ್ತು ಇತರ ಸಾಂಸ್ಥಿಕ ವ್ಯವಸ್ಥೆಯನ್ನು ಸ್ಥಾಪಿಸುವ ಕುರಿತೂ ರೂಪುರೇಷೆಗಳನ್ನು ಸಿದ್ಧಪಡಿಸುವಂತೆ  ಮತ್ತು ಖಾಸಗಿಯವರ ಸಹಯೋಗ ಪಡೆದುಕೊಳ್ಳಲು ಸೂಚನೆ ನೀಡಿದರು. ರಾಜ್ಯದ ಉನ್ನತ ಶಿಕ್ಷಣದ ದಾಖಲಾತಿ ಪ್ರಮಾಣ ಶೇ.32ರಷ್ಟು ಇದ್ದು, ಶೇ. 50ಕ್ಕೆ ಹೆಚ್ಚಿಸುವ ಗುರಿ ಹೊಂದಲಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಪೂರಕವಾಗಿ ಬಿ.ಇಡಿ, ಡಿ.ಇಡಿ ಪಠ್ಯವನ್ನು ಪರಿಣಾಮಕಾರಿಯಾಗುವಂತೆ ಪರಿಷ್ಕರಿಸಲು ನಿರ್ದೇಶನ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next