Advertisement
ಪಾಲಿಕೆ ವ್ಯಾಪ್ತಿಯಲ್ಲಿ 2008ರ ಎ. 1ರಿಂದ ಸ್ವಯಂಘೋಷಿತ ಆಸ್ತಿ ತೆರಿಗೆ ವ್ಯವಸ್ಥೆ ಜಾರಿಯಲ್ಲಿದೆ. ಈ ಹಿಂದೆ ತೆರಿಗೆದಾರರು ನಿಗದಿತ ನಮೂನೆಗಳಲ್ಲಿ ವಿವರಗಳನ್ನು ಭರ್ತಿ ಮಾಡುವ ಮೂಲಕ ಸೇವಾ ಕೇಂದ್ರ ಹಾಗೂ ಬ್ಯಾಂಕ್‌ಗಳಲ್ಲಿ ಪಾವತಿ ಮಾಡಬೇಕಿತ್ತು. ಇದೀಗ ಡಿಜಿಟಲ್ ತಂತ್ರಜ್ಞಾನ ವ್ಯವಸ್ಥೆ ಬಳಸಿಕೊಳ್ಳಲಾಗುತ್ತಿದ್ದು, ಆನ್‌ಲೈನ್ ಮುಖೇನ ಬಳಸಿಕೊಳ್ಳಲು ವೆಬ್ ಅಪ್ಲಿಕೇಶನ್ ಸಿದ್ಧಪಡಿಸಲಾಗಿದೆ. ಆದರೆ ಈ ವ್ಯವಸ್ಥೆಯಲ್ಲಿ ಸದ್ಯ ಸಮಸ್ಯೆ ಉಂಟಾಗುತ್ತಿದೆ. ಈ ಹಿನ್ನೆಲೆಯಲ್ಲಿ ‘ಉದಯವಾಣಿ ಸುದಿನ’ ಕಳೆದ ವಾರ ವಿಶೇಷ ವರದಿ ಪ್ರಕಟಿಸಿತ್ತು.
Related Articles
Advertisement
ಸಾರ್ವಜನಿಕರು ಆನ್‌ಲೈನ್ ಮುಖೇನ ಹಣ ಪಾವತಿ ಮಾಡುವ ವೇಳೆ ಗೇಟ್‌ವೆ ಹೆಚ್ಚಿನ ಬ್ಯಾಂಕ್ ಗಳಿಗೆ ಸಪೋರ್ಟ್ ಮಾಡದೇ ಇರುವುದರಿಂದ ಪಾವತಿಗೆ ವೇಳೆ ತೊಂದರೆಯಾಗುತ್ತಿದೆ. ಕಳೆದ ವರ್ಷ ಆಸ್ತಿ ತೆರಿಗೆ ಪಾವತಿ ಮಾಡಿದ ಅನೇಕರ ಮಾಹಿತಿ ಆನ್‌ಲೈನ್ ವ್ಯವಸ್ಥೆಯಲ್ಲಿ ಅಪ್ ಡೇಟ್ ಆಗಿಲ್ಲ. ಇದೇ ಕಾರಣಕ್ಕೆ ಹಿಂದಿನ ವರ್ಷದ ತೆರಿಗೆ ಪಾವತಿಗೆ ಬಾಕಿ ಇದೆ ಎಂದು ತೋರಿಸುತ್ತಿದ್ದು ಪ್ರಸ್ತುತ ತೆರಿಗೆ ಪಾವತಿಗೆ ತೊಂದರೆಯಾಗುತ್ತಿದೆ. ಆನ್ ಲೈನ್ ಪಾವತಿ ಮಾಡಿದರೂ ಕೆಲವರಿಗೆ ತೆರಿಗೆ ಬಾಕಿ ಇದೆ ಎಂದು ತೋರಿಸುತ್ತಿದೆ ಎಂದು ಸಾರ್ವಜನಿಕರು ತಿಳಿಸಿದ್ದಾರೆ.