Advertisement

ಕೃಷಿಯಲ್ಲಿ ತಂತ್ರಜ್ಞಾನದ ಅರಿವು ಅಗತ್ಯ

04:34 PM Oct 25, 2020 | Suhan S |

ದೊಡ್ಡಬಳ್ಳಾಪುರ: ದೇಶ ಆಹಾರ ಉತ್ಪಾದನೆ ಯಲ್ಲಿ ಸ್ವಾವಲಂಬಿಯಾಗಿದ್ದು, ಕೃಷಿಯಲ್ಲಿ ನೂತನ ಆವಿಷ್ಕಾರಗಳು ನಿರಂತರವಾಗಿ ನಡೆಯುತ್ತಿವೆ. ಜತೆಗೆ ಪೌಷ್ಟಿಕ ಭದ್ರತೆ ಸಾಧಿಸುವುದು ನಮ್ಮೆಲ್ಲರ ಗುರಿಯಾಗಿದ್ದು, ಇದಕ್ಕೆ ಪೂರಕವಾಗಿ ರೈತರಿಗೆ ಹಾಗೂ ಕೃಷಿ ಪರಿಕರಗಳ ವಿತರಕರಿಗೆ ಕೃಷಿ ತಂತ್ರಜ್ಞಾನಗಳ ಅರಿವು ಹಾಗೂ ಮಾರ್ಗದರ್ಶನದ ಅಗತ್ಯವಿದೆ ಎಂದು ಕೃಷಿ ವಿಶ್ವ ವಿದ್ಯಾನಿಲಯದ ಕುಲಪತಿ ಡಾ. ಎಸ್‌. ರಾಜೇಂದ್ರಪ್ರಸಾದ್‌ ತಿಳಿಸಿದರು.

Advertisement

ತಾಲೂಕಿನ ಹಾಡೋನಹಳ್ಳಿಯ ಕೃಷಿ ವಿಜ್ಞಾನ ಕೇಂದ್ರದಲ್ಲಿ ಕೃಷಿ ವಿಶ್ವವಿದ್ಯಾ  ನಿಲಯ ಮತ್ತು ಕೃಷಿ ವಿಸ್ತರಣೆ ನಿರ್ವಹಣೆರಾಷ್ಟ್ರೀಯ ಸಂಸ್ಥೆ, ಮ್ಯಾನೇಜ್‌ ಹೈದರಾಬಾದ್‌ ಸಹಯೋಗದಲ್ಲಿ ಕೃಷಿ ಪರಿಕರಗಳ ವಿತರಕರಿಗೆ ಒಂದು ವರ್ಷದ ಡಿಪ್ಲೋಮಾ ಕೋರ್ಸ್‌ಗೆ ನೋಂದಾಯಿಸಿದ ಅಭ್ಯರ್ಥಿಗಳಿಗೆ ಸಂಪರ್ಕ ತರಗತಿಗಳನ್ನು ಉದ್ಘಾಟಿಸಿ ಮಾತನಾಡಿದರು.

ದೇಶ ಆಹಾರ ಉತ್ಪಾದನೆಯಲ್ಲಿ ಪ್ರಗತಿ ಸಾಧಿಸಿದೆ. ಕೃಷಿಯಲ್ಲಿ ರೈತರಷ್ಟೇ ಮಹತ್ವ ಕೃಷಿ ಪರಿಕರ ಮಾರಾಟಗಾರರಿಗೂ ಇದೆ. ಡಿಪ್ಲೋಮಾ ತರಗತಿಗಳಲ್ಲಿ ಕೃಷಿ ತಂತ್ರಜ್ಞಾನಗಳ ಬಗ್ಗೆ ಕೊಡುವಂತಹ ಮಾಹಿತಿಗಳನ್ನು ಮನದಟ್ಟುಮಾಡಿಕೊಂಡು ರೈತರಿಗೆ ಸೂಕ್ತ ರೀತಿಯಲ್ಲಿ ಕೃಷಿ ಬಗ್ಗೆ ಮಾರ್ಗದರ್ಶನ ನೀಡಬೇಕು. ಆಹಾರ ಧಾನ್ಯಗಳ ಉತ್ಪಾದನೆ ಹೆಚ್ಚಿಸುವುದರೊಂದಿಗೆ ರೈತರ ಆದಾಯ ದ್ವಿಗುಣಗೊಳಿಸುವುದು ಕೃಷಿ ಪರಿಕರ ಮಾರಾಟ ಗಾರರ ಧ್ಯೇಯವಾಗಬೇಕು ಎಂದರು.

ಪ್ರಸ್ತುತ ಕೋವಿಡ್‌-19 ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು, ವಿಶ್ವ ಆರೋಗ್ಯ ಸಂಸ್ಥೆಯ ಮಾರ್ಗದರ್ಶನಗಳನ್ನು ಪಾಲಿಸಬೇಕೆಂದರು. ಕೃಷಿ ವಿಶ್ವ ವಿದ್ಯಾನಿಲಯದ ವಿಸ್ತರಣಾ ನಿರ್ದೇಶಕ ಡಾ. ಬೈರೇಗೌಡ ಮಾತನಾಡಿ, ಡಿಪ್ಲೋಮಾ ತರಗತಿಗಳ ಸದುಪಯೋಗ ಪಡೆಯಬೇಕು. ವ್ಯಾವಹಾರಿಕ ದೃಷ್ಟಿಯಿಂದ ಮಾತ್ರವಲ್ಲದೆ, ರೈತರಿಗೆ ಕೃಷಿ ತಾಂತ್ರಿಕತೆಗಳ ಮಾಹಿತಿ ನೀಡಬೇಕೆಂದರು.

ಕಾರ್ಯಕ್ರಮದಲ್ಲಿ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಎ.ಪಿ. ಮಲ್ಲಿಕಾರ್ಜುನ ಗೌಡ, ಕೃಷಿ ತಂತ್ರಜ್ಞಾನಮಾಹಿತಿ ಕೇಂದ್ರದ ಮುಖ್ಯಸ್ಥ ಡಾ. ಮಂಜುನಾಥ್‌, ಕೃ.ವಿ.ವಿ ತಾಂತ್ರಿಕ ಅಧಿಕಾರಿ ಡಾ. ಪಂಕಜ, ಕಾರ್ಯಕ್ರಮದ ಅನುವುಗಾರ ಓಬಳೇಶಪ್ಪ, ಕೃಷಿ ವಿಜ್ಞಾನ ಕೇಂದ್ರದ ಸಿಬ್ಬಂದಿ ಹಾಗೂ ಕೃಷಿ ಪರಿಕರಗಳ ಮಾರಾಟಗಾರರು ಹಾಜರಿದ್ದರು

Advertisement
Advertisement

Udayavani is now on Telegram. Click here to join our channel and stay updated with the latest news.

Next