Advertisement

ಉಳ್ಳಾಲ: ನೇಣು ಬಿಗಿದು ಯುವಕ ಆತ್ಮಹತ್ಯೆ; ಪ್ರೇಮವೈಫಲ್ಯ ಶಂಕೆ

12:16 PM Mar 16, 2022 | Team Udayavani |

ಉಳ್ಳಾಲ: ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುತ್ತಾರು ಸಂತೋಷನಗರ ಎಂಬಲ್ಲಿ ಮಂಗಳವಾರ ರಾತ್ರಿ ನಡೆದಿದೆ.

Advertisement

ಕುದ್ಕೋರಿಗುಡ್ಡೆ ನಿವಾಸಿ ದೀಕ್ಷಿತ್ (19) ಆತ್ಮಹತ್ಯೆಗೆ ಶರಣಾದ ಯುವಕ.

ಸಂತೋಷ್ ನಗರದ ಬಾಡಿಗೆ ಮನೆಯಲ್ಲಿ ಮಂಗಳವಾರ ಸಂಜೆ ಘಟನೆ ನಡೆದಿದೆ. ಮನೆಯಲ್ಲಿ ಒಂಟಿಯಾಗಿದ್ದ ಸಂದರ್ಭ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಖಾಸಗಿ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ದೀಕ್ಷಿತ್ ನಿನ್ನೆಯೂ ಸಂಜೆವರೆಗೆ ಕರ್ತವ್ಯ ನಿರ್ವಹಿಸಿದ್ದರು.

ಇದನ್ನೂ ಓದಿ: ಬಳ್ಳಾರಿ: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕ್ರೂಸರ್ 5 ಸಾವು; 7 ಜನರಿಗೆ ಗಾಯ

ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಗೆ ಪ್ರೇಮವೈಫಲ್ಯ ಕಾರಣ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next