Advertisement

ಧರಣಿ ನಿರತ ಸ್ಥಳಕ್ಕೆ ತಹಶೀಲ್ದಾರ್‌ ಭೇಟಿ

04:17 PM Jul 12, 2022 | Team Udayavani |

ಆಳಂದ: ತಾಲೂಕಿನ ಬೆಳಮಗಿ ಗ್ರಾಮ ಪಂಚಾಯಿತಿ ಎದುರು ಕಳೆದ 75 ದಿನಗಳಿಂದ ಗ್ರಾಪಂ ಸದಸ್ಯೆಯೊಬ್ಬರು ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಸ್ಥಳಕ್ಕೆ ತಹಶೀಲ್ದಾರ್‌ ಭೇಟಿ ಬೇಡಿಕೆ ಆಲಿಸಿದರು.

Advertisement

ತಾಲೂಕಿನ ಬೆಳಮಗಿ ಗ್ರಾಪಂ ಆವರಣದಲ್ಲಿ ಸದಸ್ಯೆ ಪಾರ್ವತಿ ಅಂಬಾರಾಯ ಅವರು ಸಿಡಿಪಿಒ ಸೇರಿ ಹಲವರ ಮೇಲೆ ಕ್ರಮ ಕೈಗೊಳ್ಳಬೇಕು ಹಾಗೂ ಅಕ್ರಮ ಮದ್ಯ ಮಾರಾಟ ನಿಷೇಧಿಸಬೇಕು ಮತ್ತು ಮೂಲಸೌಲಭ್ಯಗಳನ್ನು ಒದಗಿಸಬೇಕು ಎಂದು ಆಗ್ರಹಿಸಿ ಆರಂಭಿಸಿದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಸೋಮವಾರ 75ನೇ ದಿನಕ್ಕೆ ಕಾಲಿಟ್ಟಿದೆ.

ಈ ಹಿನ್ನೆಲೆಯಲ್ಲಿ ತಹಶೀಲ್ದಾರ್‌ ಯಲ್ಲಪ್ಪ ಸುಬೇದಾರ ಅವರು ಸತ್ಯಾಗ್ರಹ ಸ್ಥಳಕ್ಕೆ ಭೇಟಿ ಬೇಡಿಕೆಯ ಈಡೇರಿಸಲು ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಲಾಗುವುದು ಸತ್ಯಾಗ್ರಹ ಹಿಂದಕ್ಕೆ ಪಡೆಯಬೇಕು ಎಂದು ಮನವಿ ಮಾಡಿದರು.

ಆದರೆ ಇದಕ್ಕೆ ಒಪ್ಪದ ಗ್ರಾಪಂ ಸದಸ್ಯೆ ಪಾರ್ವತಿ ಧರಣಿ ಮುಂದುವರೆಸಿದ್ದಾರೆ. ಸೋಮವಾರ ಸಹ ಗ್ರಾಮದ ಹಲವು ಮಹಿಳೆಯರು ಧರಣಿಗೆ ಬೆಂಬಲಿಸಿ ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next