Advertisement

ಒಂದೂವರೆ ವರ್ಷಗಳ ಬಳಿಕ ಶಾಲಾರಂಭ ; ವಿದ್ಯಾರ್ಥಿಗಳು, ಪೋಷಕರಲ್ಲಿ ಹರ್ಷ:  ತೇಜಸ್ವಿ ಸೂರ್ಯ

05:57 PM Aug 23, 2021 | Team Udayavani |

ಬೆಂಗಳೂರು : ಕೋವಿಡ್ ಕಾರಣಗಳಿಗಾಗಿ ಕಳೆದ ಒಂದೂವರೆ ವರ್ಷದಿಂದ ಶಾಲಾ ವಾತಾವರಣ, ತರಗತಿಗಳ ಚಟುವಟಿಕೆಗಳಿಂದ ದೂರ ಉಳಿದಿದ್ದ ಮಕ್ಕಳಿಗೆ ಇಂದಿನಿಂದ ಆರಂಭವಾಗಿರುವ ಶಾಲಾ ತರಗತಿಗಳು ಕಲಿಕಾ ಚಟುವಟಿಕೆಗಳಿಗೆ ಮೆರುಗು ನೀಡಲಿವೆ ಎಂದು ಬೆಂಗಳೂರು ದಕ್ಷಿಣ ಸಂಸದರಾದ ತೇಜಸ್ವಿ ಸೂರ್ಯ ಅವರು ತಿಳಿಸಿದರು.

Advertisement

ಸಚಿವರಾದ ಶ್ರೀ ಬಿ.ಸಿ. ನಾಗೇಶ್ ಅವರೊಂದಿಗೆ, ಆರ್ ವಿ ಗರ್ಲ್ಸ್ ಹೈಸ್ಕೂಲ್ ಗೆ ಭೇಟಿ ನೀಡಿದ ವೇಳೆ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುತ್ತ ಮಾತನಾಡಿದ ಸಂಸದರು, “ಇಂದಿನಿಂದ ತರಗತಿಯ ಕಲರವಗಳಿಗೆ ಸಾಕ್ಷಿಯಾಗಲಿರುವ ಎಲ್ಲ ವಿದ್ಯಾರ್ಥಿಗಳಿಗೆ ಸ್ವಾಗತ ಕೋರಿ, ಶೈಕ್ಷಣಿಕ ವರ್ಷಕ್ಕೆ ಶುಭ ಕೋರುತ್ತೇನೆ ಹಾಗೂ, ರಾಜ್ಯ ಸರ್ಕಾರದ ಪ್ರಯತ್ನವನ್ನು ಶ್ಲಾಘಿಸುತ್ತೇನೆ ” ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಮಾನ್ಯ ಶಿಕ್ಷಣ ಸಚಿವರಾದ ಶ್ರೀ ಬಿ.ಸಿ. ನಾಗೇಶ್ ರವರು, ಮಕ್ಕಳ ಶೈಕ್ಷಣಿಕ ಪ್ರಗತಿಗೆ ಶಾಲಾ ತರಗತಿಗಳು ಪೂರಕವಾಗಿ ಕಾರ್ಯನಿರ್ವಹಿಸಲಿದ್ದು, ರಾಜ್ಯ ಸರ್ಕಾರವು ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಶೈಕ್ಷಣಿಕ ಅಭಿವೃದ್ಧಿಗೆ ಗಮನಹರಿಸಲಿದೆ ಎಂದು ತಿಳಿಸಿದರು.

ಇದನ್ನೂ ಓದಿ :ವಿದ್ಯುತ್ ತಂತಿ ಸ್ಪರ್ಶಿಸಿ ಓರ್ವ ವೃದ್ದೆ ಹಾಗೂ ನಾಲ್ಕು ಎಮ್ಮೆಗಳು ಸಾವು

Advertisement

Udayavani is now on Telegram. Click here to join our channel and stay updated with the latest news.

Next