Advertisement
ಈ ಕುರಿತು ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತೇಜಸ್ವಿ ಸೂರ್ಯ ವಿರುದ್ಧ ಸೋಮ್ ದತ್ತಾ ಎಂಬ ಮಹಿಳೆ ತಮ್ಮ ಪರಿಚಿತರೊಂದಿಗೆ ಮಾತನಾಡಿರುವ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಅವರು ತಮಗಾದ ಅನ್ಯಾಯದ ವಿರುದ್ಧ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುವುದಾಗಿ ಹೇಳಿಕೊಂಡಿದ್ದಾರೆ.
Related Articles
Advertisement
ಪ್ರತಿಷ್ಠಿತ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ತೇಜಸ್ವಿ ಸೂರ್ಯ ಅವರ ಹಿನ್ನೆಲೆಯ ಬಗ್ಗೆ ಬಿಜೆಪಿ ಮುಖಂಡರಿಗೆ ಇಷ್ಟೆಲ್ಲಾ ಮಾಹಿತಿ ಇದ್ದರೂ, ಬಿಜೆಪಿ ನಾಯಕರು ಧ್ವನಿ ಎತ್ತದೆ, ಕ್ಷೇತ್ರದ ಜನತೆಗೆ ಮಾಹಿತಿ ಹಂಚಿಕೊಳ್ಳುವ ಜವಾಬ್ದಾರಿಯಿಂದ ನುಣುಚಿಕೊಂಡಿದ್ದಾರೆ. ಸೋರಿಕೆಯಾಗಿದೆ ಎನ್ನಲಾದ ಸಂಭಾಷಣೆಯಲ್ಲಿ ಮೂವರು ಹೆಣ್ಣುಮಕ್ಕಳ ಹೆಸರು ಪ್ರಸ್ತಾಪವಾಗಿದ್ದು, ಅವರೆಲ್ಲರೂ ತೇಜಸ್ವಿ ಸೂರ್ಯನಿಂದ ದೌರ್ಜನ್ಯಕ್ಕೆ ಒಳಗಾಗಿ ನೊಂದಿದ್ದಾರೆ ಎನ್ನಲಾಗಿದೆ ಎಂದು ದೂರಿದರು.
ಸೋಮ್ ದತ್ತಾ ಆಕ್ಷೇಪ: ಈ ಮಧ್ಯೆ, ಬ್ರಿಜೇಶ್ ಕಾಳಪ್ಪ ಅವರ ಪತ್ರಿಕಾಗೋಷ್ಠಿಗೆ ಆಕ್ಷೇಪ ವ್ಯಕ್ತಪಡಿಸಿ ಸೋಮ್‌ದತ್ತಾ ಟ್ವೀಟ್ ಮಾಡಿದ್ದು, “ರಾಜಕೀಯ ಲಾಭಕ್ಕಾಗಿ ಮಹಿಳೆಯ ವೈಯಕ್ತಿಕ ಗೌರವಕ್ಕೆ ಧಕ್ಕೆ ತಂದಿರುವುದಕ್ಕೆ ನಾಚಿಕೆಯಾಗಬೇಕು’ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಅಲ್ಲದೇ, ಬ್ರಿಜೇಶ್ ಕಾಳಪ್ಪ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ.
ಅವರ ಟ್ವೀಟ್‌ಗೆ ಟ್ವಿಟರ್‌ನಲ್ಲಿಯೇ ಪ್ರತಿಕ್ರಿಯಿಸಿರುವ ಬ್ರಿಜೇಶ್ ಕಾಳಪ್ಪ, “ಕಾನೂನು ಕ್ರಮ ಕೈಗೊಂಡರೆ ನಾನು ಸಂತೋಷದಿಂದ ಎದುರಿಸುತ್ತೇನೆ. ಅದಕ್ಕೂ ಮೊದಲು ನನ್ನ ಪತ್ರಿಕಾಗೋಷ್ಠಿಯಲ್ಲಿ ಮಹಿಳೆಯ ಘನತೆಯನ್ನು ಹಾಳು ಮಾಡಿದ್ದೇನಾ ಅಥವಾ ಎತ್ತಿ ಹಿಡಿಯುವ ಕೆಲಸ ಮಾಡಿದಿದ್ದೇನಾ ಎನ್ನುವುದನ್ನು ಕೇಳಿಸಿಕೊಳ್ಳಿ’ ಎಂದು ತಿರುಗೇಟು ನೀಡಿದ್ದಾರೆ.