ಬೆಂಗಳೂರು: ಲೋಕಸಭಾ ಚುನಾವಣೆಗೆ ಬಿಜೆಪಿಯ ಕರ್ನಾಟಕದ ಅಂತಿಮ ಪಟ್ಟಿ ಬಿಡುಗಡೆ ಮಾಡಿದೆ. ಯುವ ನಾಯಕ ತೇಜಸ್ವಿ ಸೂರ್ಯ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಇತ್ತೀಚೆಗೆ ನಿಧನರಾದ ಕೇಂದ್ರ ಸಚಿವ ಅನಂತ್ ಕುಮಾರ್ ಅವರ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಅವರಿಗೆ ಟಿಕೆಟ್ ಕೊಡುವ ಬಗ್ಗೆ ಮಾತುಗಳು ಕೇಳಿ ಬಂದಿತ್ತು. ಬಿಜೆಪಿ ಬಿಡುಗಡೆ ಮೊದಲೆರಡು ಪಟ್ಟಿಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದ ಹೆಸರು ಇರದಿರುವುದು ಹಲವು ಕುತೂಹಲಕ್ಕೆ ಕಾರಣವಾಗಿತ್ತು.
ಒಂದು ಹಂತದಲ್ಲಿ ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಅವರು ಕೂಡ ಬೆಂಗಳೂರು ದಕ್ಷಿಣದಲ್ಲಿ ಚುನಾವಣೆಗೆ ನಿಲ್ಲುತ್ತಾರೆ ಎಂದು ಮಾಧ್ಯಮಗಳು ವರದಿ ಮಾಡಿದ್ದವು. ಆದರೆ ಈಗ ತೇಜಸ್ವಿ ಸೂರ್ಯ ಅವರ ಹೆಸರನ್ನು ಅಂತಿಮಗೊಳಿಸಿ ಬಿಜೆಪಿ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದೆ.
Related Articles
ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಬಿ.ಕೆ.ಹರಿಪ್ರಸಾದ್ ಸ್ಪರ್ಧೆ ಮಾಡುತ್ತಿದ್ದಾರೆ.
ಬೆಂಗಳೂರು ಗ್ರಾಮಾಂತರದಲ್ಲಿ ಅಶ್ವಥ್ ನಾರಾಯಣಗೆ ಬಿಜೆಪಿ ಟಿಕೆಟ್
ಬಾಕಿ ಉಳಿದಿದ್ದ ಮತ್ತೊಂದು ಕ್ಷೇತ್ರ ಬೆಂಗಳೂರು ಗ್ರಾಮಾಂತರಕ್ಕೆ ಬಿಜೆಪಿ ಅಶ್ವಥ್ ನಾರಾಯಣ ಅವರಿಗೆ ಟಿಕೆಟ್ ಘೋಷಣೆ ಮಾಡಿದೆ. ಸಿ.ಪಿ ಯೋಗೀಶ್ವರ್ ಅವರ ಹೆಸರು ಕೂಡಾ ಚಾಲ್ತಿಯಲ್ಲಿತ್ತು. ಸಿ.ಪಿ.ಯೋಗೀಶ್ವರ್ ಅವರ ಪುತ್ರಿ ನಿಶಾ ಯೋಗೆಶ್ವರ್ ಅವರಿಗೆ ಸೀಟ್ ಕೊಡುವ ಬಗ್ಗೆ ಕೂಡಾ ವರದಿಯಾಗಿತ್ತು. ಆದರೆ ಅಂತಿಮವಾಗಿ ಅಶ್ವಥ್ ನಾರಾಯುಣ ಅವರು ಬಿಜೆಪಿ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಕಾಂಗ್ರೆಸ್ ನಿಂದ ಬೆಂಗಳೂರು ಗ್ರಾಮಾಂತರದಿಂದ ಹಾಲಿ ಸಂಸದ ಡಿ.ಕೆ.ಸುರೇಶ್ ಸ್ಪರ್ಧೆ ಮಾಡುತ್ತಿದ್ದಾರೆ.